ತಿರುವನಂತಪುರ : ಇಂದು ಕೇರಳಕ್ಕೆ ಮಾನ್ಸೂನ್ ಆಗಮನವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ. ಪ್ರತಿ ವರ್ಷ ಜೂನ್ 1 ರಂದು ಕೇರಳಕ್ಕೆ ಮುಂಗಾರು ಆಗಮಿಸುತ್ತಿದ್ದು, ಈ ವರ್ಷ 7 ದಿನ ತಡವಾಗಿ ಕೇರಳಕ್ಕೆ ಮುಂಗಾರು ಆಗಮಿಸಿದೆ.
ಇಂದು ಬೆಳಗ್ಗೆಯಿಂದಲೇ ಕೇರಳದ ಎಲ್ಲಾ ಭಾಗಗಳಲ್ಲಿ ಮಳೆ ಆರಂಭವಾಗಿದೆ. ಪ್ರತಿ ವರ್ಷವೂ ಜೂನ್ 1ರಂದು ಮುಂಗಾರು ಮಾರುತಗಳು ಕೇರಳಕ್ಕೆ ಆಗಮಿಸುತ್ತಿದ್ದವು ಅದಾದ ಬಳಿಕ ಒಂದೆರಡು ದಿನಗಳಲ್ಲಿ ಕರ್ನಾಟಕದಲ್ಲಿ ಕೂಡ ಮಳೆ ಆರಂಭವಾಗುತ್ತಿತ್ತು. ಇದೀಗ ಮುಂಗಾರು ಒಂದು ವಾರ ತಡವಾಗಿದ್ದರೂ ಕೂಡ ಬಿಪರ್ಜಾಯ್ ಚಂಡಮಾರುತದಿಂದಾಗಿ ಮಳೆಯ ಪ್ರಭಾವ ಹೆಚ್ಚಿದೆ.
ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 35-45 ಕಿ.ಮೀ ಇಂದ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
ಮುಂದಿನ 48 ಗಂಟೆಗಳಲ್ಲಿ ಮಧ್ಯ ಅರೇಬಿಯನ್ ಸಮುದ್ರ, ತಮಿಳುನಾಡು, ಕರ್ನಾಟಕ, ಮತ್ತು ನೈಋತ್ಯ, ಮಧ್ಯ, ಈಶಾನ್ಯ ಬಂಗಾಳ ಕೊಲ್ಲಿ, ಈಶಾನ್ಯ ರಾಜ್ಯಗಳು ಮತ್ತು ಕೇರಳದ ಉಳಿದ ಭಾಗಗಳಲ್ಲಿ ಮಾನ್ಸೂನ್ ಮತ್ತಷ್ಟು ಮುನ್ನಡೆಯಲು ಪರಿಸ್ಥಿತಿಗಳು ಅನುಕೂಲಕರವಾಗಿವೆ ಎಂದು ಹವಾಮಾನ ಇಲಾಖೆ ಹೇಳಿದೆ
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…