Featured

ಕೇರಳದಲ್ಲಿ ಕೋವಿಡ್‌ ರೂಪಾಂತರಿ ಪ್ರಕರಣ ; ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ – vishwanews24

ಕೇರಳದಲ್ಲಿ ಕೋವಿಡ್‌ ರೂಪಾಂತರಿ ಪ್ರಕರಣ ; ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

ಮಂಗಳೂರು: ಕೇರಳದಲ್ಲಿ ಕೋವಿಡ್‌ ರೂಪಾಂತರಿ ಜೆಎನ್‌.1 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ ಇರಿಸಲಾಗಿದೆ. ಮುಂಜಾಗ್ರತೆ ಉದ್ದೇಶದಿಂದ ಕೋವಿಡ್‌ ದೃಢಪಟ್ಟ ರೋಗಿಗಳಿಗೆ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಪ್ರತ್ಯೇಕ ಹಾಸಿಗೆ ಮೀಸಲಿಡಲಾಗಿದೆ.

ವೆನ್ಲಾಕ್ ನ ಒಂದು ವಾರ್ಡ್‌ನಲ್ಲಿ 19 ಬೆಡ್‌ಗಳನ್ನು ಮತ್ತು ಐಸಿಯುವಿನ ಒಂದು ಭಾಗದಲ್ಲಿ 7 ಹಾಸಿಗೆಗಳನ್ನು ಮೀಸಲಿರಿಸಲಾಗಿದೆ. ಆರ್‌ಟಿಪಿಸಿಆರ್‌ ಪ್ರಯೋಗಾಲಯದ ಮೈಕ್ರೋಬಯಾಲೊಜಿಸ್ಟ್‌ ಅವರನ್ನು ಮತ್ತೆ ಮಂಗಳೂರಿಗೆ ನಿಯೋಜನೆ ಮಾಡಲಾಗಿದೆ. ತಾಲೂಕು ಆಸ್ಪತ್ರೆಗಳಿಗೂ ಪರೀಕ್ಷಾ ಕಿಟ್‌ ವಿತರಿಸಲಾಗಿದ್ದು, ಕೋವಿಡ್‌ ಲಕ್ಷಣವಿದ್ದವರನ್ನು ಪರೀಕ್ಷೆಗೆ ಒಳಪಡಿಸಲು ನಿರ್ಧರಿಸಲಾಗಿದೆ.

ಈಗಾಗಲೇ ತಾಲೂಕು ವೈದ್ಯಾಧಿಕಾರಿಗಳ ಸಭೆ ನಡೆಸಿ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ. ವಿಮಾನ ನಿಲ್ದಾಣಕ್ಕೆ ಆಗಮಿಸುವ ಅಂತಾರಾಷ್ಟ್ರೀಯ ಪ್ರಯಾಣಿಕರ ಮೇಲೂ ನಿಗಾ ಇರಿಸಲು ನಿರ್ಧರಿಸಲಾಗಿದ್ದು, ಅವರಲ್ಲಿ ಕೋವಿಡ್‌ ಲಕ್ಷಣ ಕಂಡುಬಂದರೆ ತಪಾಸಣೆ ನಡೆಸಿ, ಮಾದರಿಯನ್ನು ಜೆನೋಮಿಕ್‌ ಸೀಕ್ವೆನ್ಸಿಂಗ್‌ಗೆ ಕಳುಹಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

331 ತಪಾಸಣೆ ಗುರಿ

ಕೇರಳದಲ್ಲಿ ಕೋವಿಡ್‌ ದೃಢಪಟ್ಟ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ಕೋವಿಡ್‌ ತಪಾಸಣಾ ಪರೀಕ್ಷೆ ನಡೆಸಲು ರಾಜ್ಯ ಸರಕಾರ ಗುರಿ ನಿಗದಿ ಮಾಡಿದೆ. ಅದರಂತೆ ಪ್ರತೀ ದಿನ 331 ಮಂದಿಯನ್ನು ಕೋವಿಡ್‌ ತಪಾಸಣೆಗೆ ಒಳಪಡಿಸಲಾಗುತ್ತದೆ. 100 ರ್ಯಾಪಿಡ್‌ ಟೆಸ್ಟ್‌ ಮತ್ತು 231 ಆರ್‌ಟಿಪಿಸಿಆರ್‌ ಟೆಸ್ಟ್‌ ನಡೆಸಲಾಗುತ್ತದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ| ತಿಮ್ಮಯ್ಯ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ : ಮೇ 5 ರಂದು ನೇರ ಸಂದರ್ಶನ -vishwanews24

ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…

3 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…

4 hours ago

ಬಿಜೆಪಿ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬಲ ಮಾಡಲು ಹೊರಟಿದೆ : ಈಶ್ವರ್ ಖಂಡ್ರೆ – vishwanews24

ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…

10 hours ago

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು – vishwanews24

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…

10 hours ago

ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ  – vishwanews24

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

10 hours ago

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್‌ ಫೋನ್‌…

10 hours ago