Featured

ಕೇರಳದಲ್ಲಿ ನಿಫಾ ವೈರಸ್‌ : ದ.ಕ.ಜಿಲ್ಲೆಯಲ್ಲಿ ಅಲರ್ಟ್‌ ಘೋಷಣೆ -Vishwanews24

ಕೇರಳದಲ್ಲಿ ನಿಫಾ ವೈರಸ್‌ : ದ.ಕ.ಜಿಲ್ಲೆಯಲ್ಲಿ ಅಲರ್ಟ್‌ ಘೋಷಣೆ -Vishwanews24

ಮಂಗಳೂರು: ಕೇರಳದಲ್ಲಿ ನಿಫಾ ವೈರಸ್‌ ಖಚಿತ ಪ್ರಕರಣ ವರದಿಯಾಗಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ಕೂಡ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಅವರು ಮನವಿ ಮಾಡಿದ್ದಾರೆ.

ಗಡಿ ಭಾಗದಿಂದ ಸಾಕಷ್ಟು ಜನರು ಆರೋಗ್ಯ ಹಾಗೂ ಶಿಕ್ಷಣ ಸಂಬಂಧಿಸಿ ಮಂಗಳೂರಿನ ಆಸ್ಪತ್ರೆ ಹಾಗೂ ಶಿಕ್ಷಣ ಸಂಸ್ಥೆಗಳಿಗೆ ಬರುತ್ತಿರುವುದರಿಂದ ಜಿಲ್ಲೆಯಲ್ಲಿ ನಿಫಾ ಅಲರ್ಟ್‌ ಘೋಷಿಸ ಲಾಗಿದ್ದು ಸಂಬಂಧಪಟ್ಟವರು ತತ್‌ಕ್ಷಣದಿಂದ ಮುಂಜಾಗ್ರತ ಕ್ರಮ ಅನುಷ್ಠಾನ ಗೊಳಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ನಿಫಾ ವೈರಸ್‌ ಝೊನಟಿಕ್‌ ರೋಗವಾಗಿದ್ದು ಪ್ರಾಣಿಗಳಿಂದ ಮನುಷ್ಯರಿಗೆ, ಮನುಷ್ಯರಿಂದ ಮನುಷ್ಯರಿಗೆ ಹರಡುತ್ತದೆ. ಜ್ವರ, ತಲೆನೋವು, ಕೆಮ್ಮು, ಗಂಟಲು ನೋವು, ಉಸಿರಾಟದ ತೊಂದರೆ ಅಲ್ಲದೆ ತೀವ್ರತರದ ಮಿದುಳಿನ ಉರಿಊತಕ್ಕೆ ಸಂಬಂಧಪಟ್ಟಂತೆ ತೀವ್ರ ರೋಗಲಕ್ಷಣ ಕಾಣಿಸಿಕೊಳ್ಳಬಹುದು ಹಾಗೂ ಮಾರಾಣಾಂತಿಕವಾಗಬಹುದು.

ಮುನ್ನೆಚ್ಚರಿಕೆ ಕ್ರಮ :

ಸಾಬೂನು ಹಾಗೂ ನೀರಿನಿಂದ ಪದೇ ಪದೇ ಕೈ ತೊಳೆಯಬೇಕು. ಸೋಂಕು ಹರಡುವ ಪ್ರಾಣಿಗಳಾದ ಬಾವಲಿ, ಹಂದಿಗಳಿಂದ ದೂರವಿರಬೇಕು. ಪ್ರಾಣಿ, ಪಕ್ಷಿಗಳು ತಿಂದು ಬಿಟ್ಟಿರುವ ಹಣ್ಣುಹಂಪಲುಗಳನ್ನು ಸೇವಿಸದೇ ಇರುವುದು, ಸೋಂಕಿತ ವ್ಯಕ್ತಿಯ ದೇಹ ದ್ರವಗಳಿಂದ ರೋಗ ಹರಡುವ ಸಂಭವ ಇರುವುದರಿಂದ ಈ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

2 days ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

2 days ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

2 days ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

2 days ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

2 days ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago