Featured

ಕೇರಳದಿಂದ ಉದ್ಯೋಗಿಗಳು, ವಿದ್ಯಾರ್ಥಿಗಳು ಕರ್ನಾಟಕಕ್ಕೆ ಅಕ್ಟೋಬರ್ ಅಂತ್ಯದವರೆಗೆ ಆಗಮಿಸಬೇಡಿ : ಸರ್ಕಾರ ಆದೇಶ -Vishwanews24

ಕೇರಳದಿಂದ ಉದ್ಯೋಗಿಗಳು, ವಿದ್ಯಾರ್ಥಿಗಳು ಕರ್ನಾಟಕಕ್ಕೆ ಅಕ್ಟೋಬರ್ ಅಂತ್ಯದವರೆಗೆ ಆಗಮಿಸಬೇಡಿ : ಸರ್ಕಾರ ಆದೇಶ -Vishwanews24

ಬೆಂಗಳೂರು : ಕೇರಳದಿಂದ ರಾಜ್ಯಕ್ಕೆ ಆಗಮಿಸುವವರಿಗೆ ಕೋವಿಡ್-19 ಪರೀಕ್ಷೆ ಪುನರಾವರ್ತನೆ, ಆರ್ ಟಿ- ಪಿಸಿಆರ್ ನೆಗೆಟಿವ್ ವರದಿ ಕ್ರಮಗಳ ಹೊರತಾಗಿಯೂ, ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಹೆಚ್ಚಿನ ಸಂಖ್ಯೆಯ ಪ್ರಕರಣಗಳ ವರದಿ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕೇರಳದಿಂದ ಉದ್ಯೋಗಿಗಳು, ವಿದ್ಯಾರ್ಥಿಗಳು ಕರ್ನಾಟಕಕ್ಕೆ ಆಗಮಿಸದಂತೆ ಹಾಗೂ ಅಕ್ಟೋಬರ್ ಅಂತ್ಯದವರೆಗೆ ತಮ್ಮ ಪ್ರಯಾಣ ಮುಂದೂಡುವಂತೆ ರಾಜ್ಯ ಸರ್ಕಾರ ಆದೇಶದಲ್ಲಿ ತಿಳಿಸಿದೆ.

ಕೇರಳದಲ್ಲಿ ನಿಫಾ ವೈರಸ್‌ (ಎನ್‌ಐವಿ) ಸೋಂಕು ಹಾಗೂ ಕೊವೀಡ್ ಹೆಚ್ಚಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಶಿಕ್ಷಣ ಸಂಸ್ಥೆಗಳು, ಹೋಟೆಲ್, ಆಸ್ಪತ್ರೆ, ನರ್ಸಿಂಗ್ ಹೋಮ್, ಕಾರ್ಖಾನೆ ಮುಂತಾದ ಸಂಸ್ಥೆಗಳ ಆಡಳಿತ ವರ್ಗ/ಮಾಲೀಕರಿಗೆ ಕೇರಳದಿಂದ ಆಗಮಿಸುವ ತಮ್ಮ ವಿದ್ಯಾರ್ಥಿಗಳು/ಉದ್ಯೋಗಿಗಳಿಗೆ ಅಕ್ಟೋಬರ್ ಅಂತ್ಯದವರೆಗೆ ತಮ್ಮ ಪ್ರಯಾಣವನ್ನು ಮುಂದೂಡಲು ತಿಳಿಸಲಾಗಿದೆ.

ಕೇರಳದಿಂದ ಆಗಮಿಸುವ ಮತ್ತು ಅಲ್ಲಿಗೆ ತೆರಳುವ ವಿದ್ಯಾರ್ಥಿಗಳಿಗೆ ಈ ನಿಯಮ ಅನ್ವಯಿಸಲಿದೆ ತುರ್ತು ಕಾರಣ ಇಲ್ಲದೆ, ಇಲ್ಲಿಂದ ಅಲ್ಲಿಗೆ ತೆರಳಬಾರದು ಮತ್ತು ಕೇರಳಾದಿಂದ ರಾಜ್ಯಕ್ಕೆ ಆಗಮಿಸಬಾರದು ಎಂದು ರಾಜ್ಯ ಆರೋಗ್ಯ ಸಚಿವಾಲಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಆದೇಶದಲ್ಲಿ ತಿಳಿಸಿದ್ದಾರೆ. ಸಾರ್ವಜನಿಕರ ಹಿತರಕ್ಷಣೆ ನಿಟ್ಟಿನಲ್ಲಿ ಕೋವಿಡ್-19 ಮೂರನೇ ಅಲೆ ತಡೆಯುವ ನಿಟ್ಟಿನಲ್ಲಿ ಈ ಆದೇಶ ಹೊರಡಿಸಿರುವುದಾಗಿ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ನಕಲಿ ಆರ್ ಟಿ- ಪಿಸಿಆರ್ ವರದಿ ತಂದಿರುವ ಪ್ರಕರಣ , ನೆಗೆಟಿವ್ ವರದಿ ಇದ್ದರೂ ಕರ್ನಾಟಕದಲ್ಲಿ ಪರೀಕ್ಷೆ ನಡೆಸಿದಾಗ ಸೋಂಕು ಧೃಢಪಟ್ಟಿರುವ ಪ್ರಕರಣ ವರದಿಯಾಗುತ್ತಿರುವುದರಿಂದ ಕಠಿಣ ಕ್ರಮಗಳಾ ಹೊರತಾಗಿಯೂ , ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಹೆಚ್ಚಿನ ಸೋಂಕು ವರದಿಯಾಗುತ್ತಿದೆ.ಈ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಕೊಡಗು ಮತ್ತು ಚಾಮರಾಜನಗರದಲ್ಲಿ ಬಿಗಿ ಕಣ್ಗಾವಲು ವಹಿಸಲು ಸರ್ಕಾರ ಆದೇಶಿಸಿದೆ. ಈ ಕುರಿತು ಮಾರ್ಗಸೂಚಿ ಬಿಡುಗಡೆಗೊಳಿಸಿರುವ ರಾಜ್ಯ ಆರೋಗ್ಯ ಇಲಾಖೆ, ಕೇರಳದಿಂದ ಅಗಮಿಸುವವರನ್ನು ತಪಾಸಣೆಗೊಳಪಡಿಸುವವರನ್ನು ಜ್ವರ, ಮಾನಸಿಕ ಸ್ಥಿತಿಗತಿ, ದುರ್ಬಲತೆ, ತಲೆನೋವು, ಶ್ವಾಸಕೋಶದ ತೊಂದರೆ, ಕೆಮ್ಮು, ವಾಂತಿ, ಸ್ನಾಯುಸೆಳೆತದಂತಹ ಲಕ್ಷಣಗಳಿವೆಯೇ ಎಂದು ಗುರುತಿಸಿ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

2 days ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

2 days ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

2 days ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

2 days ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

2 days ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago