ಮಂಗಳೂರು : ಕೊನೆಗೂ ಕೇರಳದ ಜನತೆಗೆ ರಾಜ್ಯ ಸರಕಾರ ಸಿಹಿ ಸುದ್ದಿ ನೀಡಿದ್ದು, ಕೊರೊನಾ ಪ್ರಕರಣಗಳು ಇಳಿಕೆಯಾದ ಹಿನ್ನಲೆ ಗೋವಾ ಮತ್ತು ಕೇರಳದಿಂದ ಕರ್ನಾಟಕಕ್ಕೆ ಪ್ರವೇಶಿಸಲು ಆರ್ಟಿಪಿಸಿಆರ್ ಟೆಸ್ಟ್ ನೆಗೆಟಿವ್ ವರದಿ ಬೇಕಾಗಿಲ್ಲ ಎಂದು ಸರ್ಕಾರ ಈಗ ಸುತ್ತೋಲೆ ಹೊರಡಿಸಿದೆ
ಕೊರೊನಾ ಪ್ರಕರಣ ಕಡಿಮೆಯಾಗಿರುವ ಹಿನ್ನಲೆ ಸರ್ಕಾರ ಕೂಡ ಕೋವಿಡ್ ಪರಿಸ್ಥಿತಿ ನಿಭಾಯಿಸಲು ವಿಧಿಸಿದ್ದ ನಿರ್ಬಂಧಗಳನ್ನು ಒಂದೊಂದಾಗಿ ತೆಗೆಯುತ್ತ ಬಂದಿದ್ದು, ಈಗ ಮತ್ತೊಂದು ನಿರ್ಬಂಧವನ್ನು ವಾಪಸ್ ಪಡೆದುಕೊಂಡಿದೆ. ನೆರೆಯ ಗೋವಾ ಹಾಗೂ ಕೇರಳಗಳಲ್ಲಿ ಕರೊನಾ ಪ್ರಕರಣಗಳು ಅತಿಯಾಗಿ ವರದಿಯಾಗಿದ್ದರ ಹಿನ್ನೆಲೆಯಲ್ಲಿ ಆ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವವರ ಬಳಿ ಆರ್ಟಿಪಿಸಿಆರ್ ಟೆಸ್ಟ್ನ ನೆಗೆಟಿವ್ ವರದಿ ಇರಬೇಕು ಎಂಬ ನಿರ್ಬಂಧ ವಿಧಿಸಿತ್ತು.
ಆದರೆ ಕೋವಿಡ್ ಗಣನೀಯವಾಗಿ ಕಡಿಮೆ ಆಗಿರುವುದರಿಂದ ಗೋವಾ ಮತ್ತು ಕೇರಳದಿಂದ ಕರ್ನಾಟಕಕ್ಕೆ ಪ್ರವೇಶಿಸಲು ಆರ್ಟಿಪಿಸಿಆರ್ ಟೆಸ್ಟ್ ನೆಗೆಟಿವ್ ವರದಿ ಬೇಕಾಗಿಲ್ಲ ಎಂದು ಸರ್ಕಾರ ಈಗ ಸುತ್ತೋಲೆ ಹೊರಡಿಸಿದೆ. ಇದು ರಸ್ತೆ, ರೈಲು ಅಥವಾ ವಾಯುಮಾರ್ಗದ ಮೂಲಕ ಬರುವ ಎಲ್ಲ ಪ್ರಯಾಣಿಕರು ಅನ್ವಯಿಸಲಿದೆ. ಆದರೆ ಅಂಥವರು ಎರಡೂ ಡೋಸ್ ಲಸಿಕೆ ತೆಗೆದುಕೊಂಡಿರಬೇಕಾದ್ದು ಕಡ್ಡಾಯ, ಲಸಿಕೀಕರಣದ ಪ್ರಮಾಣಪತ್ರ ಇರಲೇಬೇಕು ಎಂಬುದನ್ನು ಒತ್ತಿ ಹೇಳಿದೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…