Featured

ಕೇರಳದ ಗುರುವಾಯೂರು ಶ್ರೀಕೃಷ್ಣ ದೇವಸ್ಥಾನದಲ್ಲಿ ಪ್ರಧಾನಿ ಮೋದಿಯಿಂದ ತಾವರೆ ತುಲಾಭಾರ ಸೇವೆ -Vishwanews24

ಕೇರಳ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಶನಿವಾರ ಬೆಳಗ್ಗೆ ಕೇರಳದ ಗುರುವಾಯೂರು ಶ್ರೀಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಕೊಚ್ಚಿ ವಿಮಾನ ನಿಲ್ದಾಣಕ್ಕೆ ಕಳೆದ ರಾತ್ರಿ ಆಗಮಿಸಿದ ಪ್ರಧಾನಿ ಮೋದಿಯನ್ನು ಔಪಚಾರಿಕವಾಗಿ ಕೇರಳ ರಾಜ್ಯಪಾಲ ಪಿ ಸತಾಸಿವಂ, ಕೇಂದ್ರದ ನಾಯಕರು ಮತ್ತು ಕೇರಳ ಸರ್ಕಾರದ ವತಿಯಿಂದ ಸ್ವಾಗತಿಸಲಾಯಿತು. ಅಲ್ಲಿಂದ ನೌಕಾಪಡೆಯ ವಿಶೇಷ ಹೆಲಿಕಾಪ್ಟರ್ ನಲ್ಲಿ ಶ್ರೀಕೃಷ್ಣ ಕಾಲೇಜಿನ ಮೈದಾನದಲ್ಲಿ 9.50ರ ವೇಳೆಗೆ ಬಂದಿಳಿದರು.ಅಲ್ಲಿಂದ ನೇರವಾಗಿ ಗುರುವಾಯೂರು ದೇವಸ್ಥಾನಕ್ಕೆ ತೆರಳಿದರು. ಈ ಸಂದರ್ಭದಲ್ಲಿ ತೀವ್ರ ಭದ್ರತೆ ಒದಗಿಸಲಾಗಿತ್ತು.
ನಂತರ ದೇವಾಲಯದಲ್ಲಿ ತುಲಾಭಾರ ಸೇವೆಯಲ್ಲಿ ಪ್ರಧಾನಿ ಮೋದಿ ಭಾಗಿಯಾದರು. ಗುರುವಾಯೂರು ದೇವಸ್ಥಾನದಲ್ಲಿ ಸುಮಾರು ಒಂದು ಗಂಟೆ ಕಾಲ ದೇವರ ದರ್ಶನ ಮಾಡಿ ಪೂಜೆ ಸಲ್ಲಿಸಿದ ಪ್ರಧಾನಿ ನಂತರ ಕೇರಳ ರಾಜ್ಯ ಬಿಜೆಪಿ ಸಮಿತಿ ಏರ್ಪಡಿಸಿರುವ ಅಭಿನಂದನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಎರಡನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿ ಕೇರಳಕ್ಕೆ ಭೇಟಿಡಿರುವ ಮೋದಿ ಅವರು ತುಲಾಭಾರ ಸೇವೆಯ ನಂತರ ತ್ರಿಶ್ಶೂರ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಶಬರಿಮಲೆ ದೇವಸ್ಥಾನಕ್ಕೆ ಎಲ್ಲ ವಯೋಮಾನದ ಮಹಿಳೆಯರಿಗೆ ಪ್ರವೇಶ ಕಲ್ಪಿಸುವ ವಿಚಾರವಾಗಿ ಮೋದಿ ಕೆಲವು ಘೋಷಣೆಗಳನ್ನು ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago