ಕೊಚ್ಚಿ : ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರ ಶವ ಸುಟ್ಟ ಸ್ಥಿತಿಯಲ್ಲಿ ಕೇರಳದ ಅಂಗಮಾಲಿಯ ಮನೆಯೊಂದಲ್ಲಿ ಪತ್ತೆಯಾಗಿದೆ.
ಶವಗಳು ಸಿಕ್ಕ ಮನೆಯ ಕೋಣೆಯಲ್ಲಿ ಪೆಟ್ರೋಲ್ ಕ್ಯಾನ್ ಇಟ್ಟ ಕುರುಹು ಸಿಕ್ಕಿದ್ದು ಇದೊಂದು ಸಾಮೂಹಿಕ ಆತ್ಮಹತ್ಯೆ ಎಂದು ಪೊಲೀಸರು ಶಂಕಿಸಿದ್ದಾರೆ. ಮೃತರನ್ನು ಬಿನೀಶ್ (45), ಅವರ ಪತ್ನಿ ಅನುಮೋಲ್ ಮ್ಯಾಥ್ಯೂ (40), ಮಕ್ಕಳಾದ ಜೊವಾನ್ನಾ (8) ಮತ್ತು ಜಸ್ವಿನ್ (5) ಎಂದು ಗುರುತಿಸಲಾಗಿದೆ.
ಮೃತ ಬಿನೀಶ್ ಪೆಟ್ರೋಲ್ ಖರೀದಿಸುತ್ತಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು ಇದರೊಂದಿಗೆ ಕುಟುಂಬವು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ತೀರ್ಮಾನಕ್ಕೆ ಪೊಲೀಸರು ಬಂದಿದ್ದಾರೆ. ಉದ್ಯಮಿಯಾಗಿದ್ದ ಬಿನೀಶ್ ಅಂಗಮಾಲಿಯ ಅಂಗಡಿಕಡವು ಎಂಬಲ್ಲಿ ವಾಸವಿದ್ದು ಭಾರಿ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರು ಎನ್ನಲಾಗಿದೆ.
ಮನೆಯ ನೆಲಮಹಡಿಯಲ್ಲಿ ಮಲಗಿದ್ದ ಬಿನೀಶ್ ಅವರ ತಾಯಿ ಚಿನ್ನಮ್ಮ ಅವರು ಮೇಲಿನ ಕೋಣೆಯಲ್ಲಿ ಬೆಂಕಿ ಹರಡುವುದನ್ನು ಮೊದಲು ನೋಡಿದ್ದು ಸಹಾಯಕ್ಕೆ ಕೂಗಿದ್ದಾರೆ, ಸ್ಥಳೀಯರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಮೇಲಿನ ಕೋಣೆಯಲ್ಲಿ ಮಾತ್ರ ಬೆಂಕಿ ಹೇಗೆ ಕಾಣಿಸಿಕೊಂಡಿತು ಎಂಬ ಬಗ್ಗೆ ಪೊಲೀಸರಿಗೆ ಅನುಮಾನವಿತ್ತು. ನಂತರದ ತನಿಖೆಯ ಸಮಯದಲ್ಲಿ, ಪೊಲೀಸರಿಗೆ ನಿರ್ಣಾಯಕ ಮಾಹಿತಿ ಸಿಕ್ಕಿತು, ಅದು ಕುಟುಂಬವು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ತೀರ್ಮಾನಕ್ಕೆ ಕಾರಣವಾಯಿತು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…