Featured

ಕೇರಳ :  ಕ್ರೈಸ್ತ ಸನ್ಯಾಸಿನಿ ಅತ್ಯಾಚಾರ ಪ್ರಕರಣ :ಬಿಷಪ್ ಫ್ರಾಂಕೋ ಮುಲ್ಲಾಕಲ್ ಆರೋಪ ಮುಕ್ತ – Vishwanews24

ಕೇರಳ :  ಕ್ರೈಸ್ತ ಸನ್ಯಾಸಿನಿ ಅತ್ಯಾಚಾರ ಪ್ರಕರಣ :ಬಿಷಪ್ ಫ್ರಾಂಕೋ ಮುಲ್ಲಾಕಲ್ ಆರೋಪ ಮುಕ್ತ – Vishwanews24

ತಿರುವನಂತಪುರಂ:ಸನ್ಯಾಸಿನಿ ಅತ್ಯಾಚಾರ ಪ್ರಕರಣದ ಎಲ್ಲಾ ಆರೋಪಗಳಿಂದ ಬಿಷಪ್ ಫ್ರಾಂಕೋ ಮುಲ್ಲಾಕಲ್ ಅವರನ್ನು ಶುಕ್ರವಾರ ಕೊಟ್ಟಾಯಂ ನ್ಯಾಯಾಲಯ ಮುಕ್ತಗೊಳಿಸಿದೆ.ಜಲಂಧರ್ ಡಯಾಸಿಸ್ನ ಮಾಜಿ ಬಿಷಪ್ ಒಳಗೊಂಡ ತೀರ್ಪು ಪ್ರಕಟಿಸುವ ಮುನ್ನ ಕೊಟ್ಟಾಯಂ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ಹೊರಗೆ ಭಾರೀ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ.

ನ್ಯಾಯಾಲಯದಿಂದ ಹೊರ ಬರುವಾಗ ಮುಲಕ್ಕಲ್, ‘ಭಗವಂತ ಸರ್ವೋತ್ತಮ, ಸತ್ಯ ಜಯಿಸಿತು’ ಎಂದು ಹೇಳಿದರು.ತೀರ್ಪು ಪ್ರಕಟಿಸುವ ಮುನ್ನ ಕೊಟ್ಟಾಯಂ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ಹೊರಗೆ ಭಾರೀ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.ಪ್ರಕರಣದ ವಿಚಾರಣೆಯನ್ನು ಪೂರ್ಣಗೊಳಿಸಿದ ನ್ಯಾಯಾಲಯವು ಸೋಮವಾರದಂದು ತೀರ್ಪನ್ನು ಕಾಯ್ದಿರಿಸಿತ್ತು. ಪ್ರಕರಣದ ವಿಚಾರಣೆಯು ನವೆಂಬರ್ 2019 ರಲ್ಲಿ ಪ್ರಾರಂಭವಾಯಿತು. ಬಿಷಪ್ ವಿರುದ್ಧದ ಅತ್ಯಾಚಾರ ಪ್ರಕರಣವನ್ನು 2018 ರಲ್ಲಿ ಕೊಟ್ಟಾಯಂ ಜಿಲ್ಲೆಯಲ್ಲಿ ಪೊಲೀಸರು ದಾಖಲಿಸಿದ್ದಾರೆ.

ಜೂನ್ 2018 ರಲ್ಲಿ ಪೊಲೀಸರಿಗೆ ನೀಡಿದ ದೂರಿನಲ್ಲಿ, 2014 ಮತ್ತು 2016 ರ ನಡುವೆ ರೋಮನ್ ಕ್ಯಾಥೋಲಿಕ್ ಚರ್ಚ್‌ನ ಜಲಂಧರ್ ಡಯಾಸಿಸ್ನ ಆಗಿನ ಬಿಷಪ್ ಫ್ರಾಂಕೊ ಅವರು ಲೈಂಗಿಕ ಕಿರುಕುಳ ಮಾಡಿದ್ದರು ಎಂದು ಸನ್ಯಾಸಿನಿಯರು ಆರೋಪಿಸಿದ್ದರು. ಪ್ರಕರಣದ ತನಿಖೆ ನಡೆಸಿದ ವಿಶೇಷ ತನಿಖಾ ತಂಡವು ಬಿಷಪ್ ಅವರನ್ನು ಬಂಧಿಸಿ ಅಕ್ರಮ ಬಂಧನ, ಅತ್ಯಾಚಾರ, ಅಸ್ವಾಭಾವಿಕ ಲೈಂಗಿಕತೆ ಮತ್ತು ಕ್ರಿಮಿನಲ್ ಬೆದರಿಕೆಯ ಆರೋಪವನ್ನು ಹೊರಿಸಿತು. ಪ್ರಕರಣದ ವಿಚಾರಣೆಗೆ ಸಂಬಂಧಿಸಿದ ಯಾವುದೇ ವಿಷಯವನ್ನು ತನ್ನ ಅನುಮತಿಯಿಲ್ಲದೆ ಪ್ರಕಟಿಸದಂತೆ ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳಿಗೆ ನ್ಯಾಯಾಲಯ ನಿರ್ಬಂಧ ವಿಧಿಸಿತ್ತು.

Vishwa News 24

Recent Posts

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

3 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

5 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

5 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

6 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

6 hours ago

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ – ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ- vishwanews24

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ - ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ…

6 hours ago