Featured

ಕೇರಳ ದೇಗುಲಗಳಲ್ಲಿ ಪುರುಷರು ಶರ್ಟ್‌ ತೆಗೆಯುವ ಪದ್ಧತಿ ರದ್ದತಿಗೆ ದೇವಸ್ವಂ ಮಂಡಳಿ ಚಿಂತನೆ: ಕೇರಳ ಸಿಎಂ – vishwanews24

ಕೇರಳ ದೇಗುಲಗಳಲ್ಲಿ ಪುರುಷರು ಶರ್ಟ್‌ ತೆಗೆಯುವ ಪದ್ಧತಿ ರದ್ದತಿಗೆ ದೇವಸ್ವಂ ಮಂಡಳಿ ಚಿಂತನೆ: ಕೇರಳ ಸಿಎಂ

ತಿರುವನಂತಪುರ : ದೇವಸ್ಥಾನ ಪ್ರವೇಶಿಸುವ ಮುನ್ನ ಪುರುಷ ಭಕ್ತರು ಮೇಲಂಗಿ ತೆಗೆಯಬೇಕೆಂಬ ನಿಯಮವನ್ನು ಕೈಬಿಡಲು ಕೇರಳದ ದೇವಸ್ವಂ ಆಡಳಿತ ಮಂಡಳಿ ಯೋಜನೆ ರೂಪಿಸುತ್ತಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬುಧವಾರ ತಿಳಿಸಿದ್ದಾರೆ.

ಸಾಮಾಜಿಕ ಸುಧಾರಕ ಶ್ರೀ ನಾರಾಯಣ ಗುರು ಅವರು ಸ್ಥಾಪಿಸಿದ ಶಿವಗಿರಿ ಮಠದ ಮುಖ್ಯಸ್ಥ ಸ್ವಾಮಿ ಸಚ್ಚಿದಾನಂದ ಅವರ ಹೇಳಿಕೆಯ ಬೆನ್ನಲ್ಲೇ ದೇವಸ್ವಂ ಆಡಳಿತ ಮಂಡಳಿ ಈ ನಿರ್ಧಾರ ತೆಗೆದುಕೊಂಡಿದೆ.

ಮಂಗಳವಾರ ನಡೆದ ಶಿವಗಿರಿ ಯಾತ್ರಾರ್ಥಿಗಳ ಸಮ್ಮೇಳನದಲ್ಲಿ ಮಾತನಾಡಿದ ಸ್ವಾಮಿ ಸಚ್ಚಿದಾನಂದ ಅವರು, ಈ ಪದ್ಧತಿ ಸಾಮಾಜಿಕ ಅನಿಷ್ಠ ಎಂದು ಬಣ್ಣಿಸಿದರು. ಅಲ್ಲದೆ, ಇದರ ನಿರ್ಮೂಲನೆಗೆ ಕರೆ ನೀಡಿದರು.

ಸಮಾವೇಶವನ್ನು ಉದ್ಘಾಟಿಸಿದ್ದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸ್ವಾಮಿ ಸಚ್ಚಿದಾನಂದರ ಅವರು ನೀಡಿದ ಕರೆಯನ್ನು ಅನುಮೋದಿಸಿದ್ದರು. ಅಲ್ಲದೆ, ಅಂತಹ ಹೆಜ್ಜೆಯನ್ನು ಸಾಮಾಜಿಕ ಸುಧಾರಣೆಯಲ್ಲಿ ಮಹತ್ವದ ಹಸ್ತಕ್ಷೇಪವೆಂದು ಪರಿಗಣಿಸಬೇಕು ಎಂದು ಹೇಳಿದ್ದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಪಿಣರಾಯಿ ವಿಜಯನ್, ‘‘ದೇವಸ್ವಂ ಆಡಳಿತ ಮಂಡಳಿಯ ಪ್ರತಿನಿಧಿ ನನ್ನನ್ನು ಭೇಟಿಯಾದರು. ನಾವು ಈ ನಿರ್ಧಾರ ತೆಗೆದುಕೊಳ್ಳಲಿದ್ದೇವೆ ಎಂದು ಅವರು ಹೇಳಿದರು. ನಾನು ಒಳ್ಳೆಯದಾಯಿತು…ಅತ್ಯುತ್ತಮ ಸಲಹೆ ಎಂದು ಹೇಳಿದೆ’’ ಎಂದಿದ್ದಾರೆ.

ಆದರೆ, ಯಾವ ದೇವಸ್ವಂ ಆಡಳಿತ ಮಂಡಳಿ ಈ ನಿರ್ಧಾರವನ್ನು ಅನುಷ್ಠಾನಗೊಳಿಸುತ್ತದೆ ಎಂಬುದನ್ನು ಪಿಣರಾಯಿ ವಿಜಯನ್ ನಿರ್ದಿಷ್ಟಪಡಿಸಿಲ್ಲ. ಗುರುವಾಯುರು, ತಿರುವಾಂಕೂರು, ಮಲಬಾರ್, ಕೊಚ್ಚಿನ್ ಹಾಗೂ ಕೂಡಲಮಾನಿಕ್ಯಂ ಸೇರಿದಂತೆ ಕೇರಳದಲ್ಲಿ ಐದು ದೇವಸ್ವಂ ಆಡಳಿತ ಮಂಡಳಿಗಳಿವೆ. ಇವು ಸಂಘಟಿತವಾಗಿ 3,000 ದೇವಾಲಯಗಳನ್ನು ನಿರ್ವಹಿಸುತ್ತವೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

18 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago