ಕೇರಳ: ಕಳೆದ ಕೆಲ ದಿನಗಳ ಹಿಂದೆ ಕೇರಳದಲ್ಲಿ ಉಂಟಾದ ಪ್ರವಾಹದಲ್ಲಿ ತನ್ನ ಪ್ರಾಣವನ್ನು ಲೆಕ್ಕಿಸದೆ ಹತ್ತಾರು ಜನರ ಪ್ರಾಣವನ್ನು ಉಳಿಸಿದ್ದ ಮೀನುಗಾರ ಭಾನುವಾರ ಸಂಭವಿಸಿದೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಮೃತ ಮೀನುಗಾರನನ್ನು ಜಿನೀಶ್(24) ಎಂದು ಗುರುತಿಸಲಾಗಿದೆ. ಕಳೆದ ವಾರ ಜಿನೇಶ್ ಬೈಕ್ನಿಂದ ಬಿದ್ದು ಲಾರಿಯೊಂದರ ಕೆಳಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದರು. ತಿರುವನಂತಪುರಂನ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ಚಿಕಿತ್ಸೆ ಫಲಿಸದೆ ನಿನ್ನೆ ಕೊನೆಯುಸಿರೆಳೆದಿದ್ದಾರೆ.
ಕೇರಳ ಪ್ರವಾಹದ ವೇಳೆ ನೂರಾರು ಮೀನುಗಾರರು ಜನರ ರಕ್ಷಣೆಗೆ ಮುಂದಾಗಿದ್ದರು. ತಮ್ಮ ಜೀವವನ್ನು ಪಣಕ್ಕಿಟ್ಟ ಮೀನುಗಾರರು ನೂರಾರು ಜನರನ್ನು ಬದುಕಿಸಿದ್ದರು. ಕೇರಳ ಸರ್ಕಾರವು ಮೀನುಗಾರರ ಕಾರ್ಯವನ್ನು ಮೆಚ್ಚಿ ಅವರಿಗೆ ಅನೇಕ ಯೋಜನೆಗಳ ಮೂಲಕ ನೆರವನ್ನು ನೀಡಲು ಮುಂದಾಯಿತು.
ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು, ‘ಮೀನುಗಾರ ತನ್ನ ಪ್ರಾಣವನ್ನು ಲೆಕ್ಕಿಸದೆ, ತನ್ನ ಕುಟುಂಬ ಬಗ್ಗೆ ಚಿಂತಿಸದೆ ಹಾಗೂ ಸರ್ಕಾರದ ಸಹಾಯ ಹಸ್ತವನ್ನು ಚಾಚದೆ ಕೇರಳದ ಜನರ ರಕ್ಷಣೆಗೆ ಮುಂದಾಗಿದ್ದರು’ ಎಂದು ಮೆಚ್ಚುಗೆಯ ಮಾತುಗಳನ್ನಾಡಿದ್ದರು.
ಮೀನುಗಾರರ ಈ ಮಾನವೀಯ ಕಾರ್ಯವನ್ನು ಮೆಚ್ಚಿ ಕೇರಳ ಸರ್ಕಾರ ಹಲವು ಯೋಜನೆಗಳನ್ನ ಆರಂಭಿಸಿದೆ. 200 ಮೀನುಗಾರರನ್ನು ಕೋಸ್ಟಲ್ ವಾರ್ಡನ್ಗಳಾಗಿ ಪೊಲೀಸ್ ಇಲಾಖೆಯಲ್ಲಿ ಉದ್ಯೋಗ ನೀಡಲಾಗಿದೆ. ಆದ್ರೆ ಹಲವಾರು ಜನರ ಪ್ರಾಣ ಉಳಿಸಿದ್ದ ಮೀನುಗಾರ ಜಿನೇಶ್ ರಸ್ತೆ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿದ್ದು ಮಾತ್ರ ವಿಪರ್ಯಾಸವೇ ಸರಿ.
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…