ತಿರುವನಂತಪುರಂ: ಬಿಜೆಪಿ ನೇತೃತ್ವದ ಎನ್‍ಡಿಎ ಕೇರಳದಲ್ಲಿ ಅಧಿಕಾರಕ್ಕೆ ಬಂದರೆ ದೇವಳಗಳ ಆಡಳಿತ ನಿರ್ವಹಿಸುವ ಉದ್ದೇಶದ ದೇವಸ್ವಂ ಮಂಡಳಿಗಳನ್ನು ಪುನರಚಿಸಲಿದೆ ಹಾಗೂ ಲವ್ ಜಿಹಾದ್ ತಡೆಯಲು ಕಾನೂನು ಜಾರಿಗೆ ತರಲಿದೆ ಎಂದು ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ ಹೇಳಿದ್ದಾರೆ.
ಕೇರಳದ ಎಲ್‍ಡಿಎಫ್ ಸರಕಾರದ ವಿರುದ್ಧದ ‘ಚಾರ್ಜ್ ಶೀಟ್’ ಬಿಡುಗಡೆಗೊಳಿಸಲು ತಿರುವನಂತಪುರಂಗೆ ಅವರು ಆಗಮಿಸಿದ್ದರು. ಬಿಜೆಪಿ ಅಧಿಕಾರಕ್ಕೆ ಬಂದರೆ ತಾನು ನೀಡಿರುವ ಎಲ್ಲಾ ಆಶ್ವಾಸನೆಗಳನ್ನು ಐದು ವರ್ಷಗಳೊಳಗೆ ಈಡೇರಿಸಲಿದೆ. ಕೇಂದ್ರದಲ್ಲಿಯೂ ಬಿಜೆಪಿ ಸರಕಾರವಿರುವುದರಿಂದ ರಾಜ್ಯದಲ್ಲೂ ಬಿಜೆಪಿ ಸರಕಾರವನ್ನು ಆರಿಸಲು ಇಲ್ಲಿನ ಜನತೆಗೆ ಸುವರ್ಣಾವಕಾಶವಿದೆ ಎಂದು ಅವರು ಹೇಳಿದರು.
ರಾಜ್ಯದ ಎಲ್‍ಡಿಎಫ್ ಸರಕಾರದ ವಿರುದ್ಧ ಎನ್‍ಡಿಎ ಬಿಡುಗಡೆಗೊಳಿಸಿರುವ ಚಾರ್ಜ್ ಶೀಟ್‍ನಲ್ಲಿ ಹಲವು ಆರೋಪಗಳನ್ನು ಹೊರಿಸಲಾಗಿದೆ. ಶಬರಿಮಲೆ ವಿಚಾರ ಹಾಗೂ ಕೋವಿಡ್ ಸಾಂಕ್ರಾಮಿಕವನ್ನು ರಾಜ್ಯ ಸರಕಾರ ನಿಭಾಯಿಸಿದ ರೀತಿಯನ್ನು ಟೀಕಿಸಲಾಗಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸರ್ವಾಧಿಕಾರಿ ರೀತಿಯಲ್ಲಿ ಆಡಳಿತ ನಡೆಸುತ್ತಿದ್ದಾರೆ, ರಾಜ್ಯದಲ್ಲಿ ರಾಜಕೀಯ ಕೊಲೆಗಳು ನಡೆಯುತ್ತಿವೆ, ಕಾನೂನು ಸುವ್ಯವಸ್ಥೆ ಮುರಿದು ಬಿದ್ದಿದೆ, ಮಹಿಳೆಯರು ಮಕ್ಕಳ ಮೇಲಿನ ದೌರ್ಜನ್ಯ ಹೆಚ್ಚಾಗುತ್ತಿದೆ, ಆರ್ಥಿಕ ಪ್ರಗತಿಯಾಗಿಲ್ಲ ಹಾಗೂ ಕೃಷಿ ಕ್ಷೇತ್ರ ಮತ್ತು ಸಾರ್ವಜನಿಕ ರಂಗದ ಕ್ಷೇತ್ರಗಳು ಪ್ರಗತಿ ಹೊಂದಿಲ್ಲ ಎಂದು ಚಾರ್ಜ್ ಶೀಟ್‍ನಲ್ಲಿ ಆರೋಪಿಸಲಾಗಿದೆ.
ಕೇರಳದ ಜನ ವಿರೋಧಿ ಎಲ್‍ಡಿಎಫ್ ಸರಕಾರವನ್ನು ತಿರಸ್ಕರಿಸಿ ‘ನವ ಕೇರಳ’ ನಿರ್ಮಾಣಕ್ಕಾಗಿ ಬಿಜೆಪಿಯನ್ನು ಬೆಂಬಲಿಸಬೇಕೆಂದೂ ಚಾರ್ಜ್ ಶೀಟ್‍ನಲ್ಲಿ ಜನರಿಗೆ ಕರೆ ನೀಡಲಾಗಿದೆ.
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…