ತಿರುವನಂತಪುರ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆ ಕೇರಳದ 8 ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನಾಲ್ಕು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್, ಮಲಪ್ಪುರಂ, ಕಣ್ಣೂರು, ಕಾಸರಗೋಡು ಮತ್ತು ಕೋಯಿಕ್ಕೋಡ್ ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಮಂಗಳವಾರ ಯೆಲ್ಲೋ ಅಲರ್ಟ್ ಘೋಷಿಸಿದೆ. ಅಲ್ಲದೇ ಕೊಟ್ಟಾಯಂ, ಪತ್ತನಂತಿಟ್ಟ, ಕೊಲ್ಲಂ ಮತ್ತು ಅಲಪ್ಪುಳ ಜಿಲ್ಲೆಗಳಲ್ಲಿ ಎಲ್ಲಾ ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಕೇರಳ ವಿಶ್ವವಿದ್ಯಾನಿಲಯ ಮತ್ತು ಎಂಜಿ ವಿಶ್ವವಿದ್ಯಾನಿಲಯಗಳಲ್ಲಿ ಮಂಗಳವಾರ ನಡೆಯಬೇಕಿದ್ದ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ.
ವಾರಾಂತ್ಯದಿಂದ ಕೇರಳದಲ್ಲಿ ನಿರಂತರ ಮಳೆಯಾಗುತ್ತಿದ್ದು, ತಗ್ಗು ಪ್ರದೇಶದಲ್ಲಿ ವಾಸಿಸುವ ಜನರಿಗೆ ಅಧಿಕಾರಿಗಳು ಎಚ್ಚರಿಕೆ ವಹಿಸುವಂತೆ ಸೂಚಿಸಿದ್ದಾರೆ. ಇನ್ನೂ ಮಳೆಯಿಂದಾಗಿ ರಾಜ್ಯದ ಹಲವೆಡೆ ಜಲಾವೃತವಾಗಿದ್ದು, ಕೇರಳದ ಅಪ್ಪರ್ ಕುಟ್ಟನಾಡ್‍ನ ಹಲವಾರು ಪ್ರದೇಶಗಳಿಗೆ ಭಾರೀ ಪ್ರಮಾಣದ ನೀರು ನುಗ್ಗಿದೆ.
ನಿರಂತರ ಮಳೆಯಿಂದಾಗಿ ಈಗಾಗಲೇ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಈ ಹಿಂದೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಭೂಕುಸಿತ ಮತ್ತು ಪ್ರವಾಹದ ಸಾಧ್ಯತೆಯ ಬಗ್ಗೆ ಎಚ್ಚರಿಕೆ ನೀಡಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…