Featured

ಕೇರಳ : ಭಾರೀ ಮಳೆಯ ಹಿನ್ನೆಲೆ ; 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ – Vishwanews24

ಕೇರಳ : ಭಾರೀ ಮಳೆಯ ಹಿನ್ನೆಲೆ ; 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ – Vishwanews24

ತಿರುವನಂತಪುರ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆ ಕೇರಳದ 8 ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನಾಲ್ಕು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್, ಮಲಪ್ಪುರಂ, ಕಣ್ಣೂರು, ಕಾಸರಗೋಡು ಮತ್ತು ಕೋಯಿಕ್ಕೋಡ್ ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಮಂಗಳವಾರ ಯೆಲ್ಲೋ ಅಲರ್ಟ್ ಘೋಷಿಸಿದೆ. ಅಲ್ಲದೇ ಕೊಟ್ಟಾಯಂ, ಪತ್ತನಂತಿಟ್ಟ, ಕೊಲ್ಲಂ ಮತ್ತು ಅಲಪ್ಪುಳ ಜಿಲ್ಲೆಗಳಲ್ಲಿ ಎಲ್ಲಾ ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಕೇರಳ ವಿಶ್ವವಿದ್ಯಾನಿಲಯ ಮತ್ತು ಎಂಜಿ ವಿಶ್ವವಿದ್ಯಾನಿಲಯಗಳಲ್ಲಿ ಮಂಗಳವಾರ ನಡೆಯಬೇಕಿದ್ದ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ.

ವಾರಾಂತ್ಯದಿಂದ ಕೇರಳದಲ್ಲಿ ನಿರಂತರ ಮಳೆಯಾಗುತ್ತಿದ್ದು, ತಗ್ಗು ಪ್ರದೇಶದಲ್ಲಿ ವಾಸಿಸುವ ಜನರಿಗೆ ಅಧಿಕಾರಿಗಳು ಎಚ್ಚರಿಕೆ ವಹಿಸುವಂತೆ ಸೂಚಿಸಿದ್ದಾರೆ. ಇನ್ನೂ ಮಳೆಯಿಂದಾಗಿ ರಾಜ್ಯದ ಹಲವೆಡೆ ಜಲಾವೃತವಾಗಿದ್ದು, ಕೇರಳದ ಅಪ್ಪರ್ ಕುಟ್ಟನಾಡ್‍ನ ಹಲವಾರು ಪ್ರದೇಶಗಳಿಗೆ ಭಾರೀ ಪ್ರಮಾಣದ ನೀರು ನುಗ್ಗಿದೆ.

ನಿರಂತರ ಮಳೆಯಿಂದಾಗಿ ಈಗಾಗಲೇ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಈ ಹಿಂದೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಭೂಕುಸಿತ ಮತ್ತು ಪ್ರವಾಹದ ಸಾಧ್ಯತೆಯ ಬಗ್ಗೆ ಎಚ್ಚರಿಕೆ ನೀಡಿದ್ದರು.

Vishwa News 24

Recent Posts

ಇಂಧನ ದರ ಏರಿಕೆ : ಏರ್‌ ಇಂಡಿಯಾ, ಇಂಡಿಗೋ 250 ದೇಶೀಯ ವಿಮಾನಗಳ ಹಾರಾಟ ಕಡಿತ – vishwanews24

ಇಂಧನ ದರ ಏರಿಕೆ : ಏರ್‌ ಇಂಡಿಯಾ, ಇಂಡಿಗೋ 250 ದೇಶೀಯ ವಿಮಾನಗಳ ಹಾರಾಟ ಕಡಿತ ನವದೆಹಲಿ :ಭಾರತದ ಪ್ರತಿಷ್ಟಿತ…

10 hours ago

ಕಾಸರಗೋಡು: ಇಲಿ ಪಾಷಾಣ ಸೇವಿಸಿ ನವವಿವಾಹಿತೆ ಆತ್ಮಹತ್ಯೆ – vishwanews24

ಕಾಸರಗೋಡು: ಇಲಿ ಪಾಷಾಣ ಸೇವಿಸಿ ನವವಿವಾಹಿತೆ ಆತ್ಮಹತ್ಯೆ ಕಾಸರಗೋಡು : ಮದುವೆಯಾದ ಕೇವಲ ಒಂದೂವರೆ ತಿಂಗಳಲ್ಲೇ ನವವಿವಾಹಿತೆಯೊಬ್ಬರು ಇಲಿ ಪಾಷಾಣ…

11 hours ago

ಮನೆಯ ಎಸಿ ಸ್ಫೋಟ : ಸಿಸಿಐ ಮಾಜಿ ಮುಖ್ಯಸ್ಥ ಧನೇಂದ್ರ ಕುಮಾರ್ ಸಾವು – vishwanews24

ಮನೆಯ ಎಸಿ ಸ್ಫೋಟ : ಸಿಸಿಐ ಮಾಜಿ ಮುಖ್ಯಸ್ಥ ಧನೇಂದ್ರ ಕುಮಾರ್ ಸಾವು ಹೊಸದಿಲ್ಲಿ: ಭಾರತೀಯ ಸ್ಪರ್ಧಾತ್ಮಕ ಆಯೋಗದ (CCI) ಮಾಜಿ…

13 hours ago

ಧರ್ಮಸ್ಥಳ: ಮತ್ತು ಬರುವ ಜ್ಯೂಸ್ ನೀಡಿ ವೃದ್ಧೆಯ ಹತ್ತು ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿ ಪರಾರಿ ; ಪ್ರಕರಣ ದಾಖಲು – vishwanews24

ಧರ್ಮಸ್ಥಳ: ಮತ್ತು ಬರುವ ಜ್ಯೂಸ್ ನೀಡಿ ವೃದ್ಧೆಯ ಹತ್ತು ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿ ಪರಾರಿ ; ಪ್ರಕರಣ…

13 hours ago

ಕೊಂಕಣ ರೈಲ್ವೆ ಮಾನ್ಸೂನ್‌ ವೇಳಾಪಟ್ಟಿ ಪ್ರಕಟ : ಜೂ. 15ರಿಂದ ಅ. 20ರ ವರೆಗೆ ಜಾರಿಗೆ – vishwanews24

ಕೊಂಕಣ ರೈಲ್ವೆ ಮಾನ್ಸೂನ್‌ ವೇಳಾಪಟ್ಟಿ ಪ್ರಕಟ : ಜೂ. 15ರಿಂದ ಅ. 20ರ ವರೆಗೆ ಜಾರಿಗೆ ಉಡುಪಿ: ಮುಂಗಾರು ಸವಾಲಿಗೆ…

14 hours ago

ಜೂ.12ರವರೆಗೆ ಮಂಗಳೂರು ಜಂಕ್ಷನ್ – ಮುಂಬೈ ಸಿಎಸ್‌ಎಂಟಿ ರೈಲು ಥಾಣೆಯವರೆಗೆ ಮಾತ್ರ ಸಂಚಾರ – vishwanews24

ಜೂ.12ರವರೆಗೆ ಮಂಗಳೂರು ಜಂಕ್ಷನ್ - ಮುಂಬೈ ಸಿಎಸ್‌ಎಂಟಿ ರೈಲು ಥಾಣೆಯವರೆಗೆ ಸಂಚಾರ ಮಂಗಳೂರು: ಮುಂಬೈ ಸಿಎಸ್‌ಎಂಟೆ ನಿಲ್ದಾಣದಲ್ಲಿ ಪ್ಲಾಟ್‌ಫಾರಂ ವಿಸ್ತರಣಾ…

14 hours ago