ಪಾಲಕ್ಕಾಡ್: ಕೇರಳದ ಪಾಲಕ್ಕಾಡ್ ಜಿಲ್ಲೆಯ ಕಲ್ಲಡಿಕೋಡ್ ನಲ್ಲಿ ಲಾರಿಯೊಂದು ಪಲ್ಟಿಯಾಗಿ ಶಾಲೆ ಬಿಟ್ಟು ಮೆನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಬಿದ್ದ ಪರಿಣಾಮ 8ನೇ ತರಗತಿಯ ನಾಲ್ವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಾಲಕ್ಕಾಡ್-ಕೋಝಿಕೋಡ್ ರಾಷ್ಟ್ರೀಯ ಹೆದ್ದಾರಿಯ ಪನಯಂಪದಂನಲ್ಲಿ ಗುರುವಾರ ಸಂಜೆ 4.15 ರ ಸುಮಾರಿಗೆ ಈ ಘಟನೆ ನಡೆದಿದೆ. ಅಪಘಾತದಲ್ಲಿ ಕರಿಂಬದ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿಯರಾದ ಇರ್ಫಾನಾ ಶೆರಿನ್ ಪಿ ಎ, ರಿಧಾ ಫಾತಿಮಾ, ನಿಧಾ ಫಾತಿಮಾ ಕೆ ಎಂ ಮತ್ತು ಆಯಿಷಾ ಎ ಎಸ್ ಮೃತಪಟ್ಟಿದ್ದಾರೆ.
ಐವರು ವಿದ್ಯಾರ್ಥಿಗಳು ಪರೀಕ್ಷೆ ಮುಗಿಸಿ ಮನೆಗೆ ಮರಳಲು ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದರು. ಸಿಮೆಂಟ್ ಸಾಗಿಸುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ಪಲ್ಟಿಯಾಗಿ ವಿದ್ಯಾರ್ಥಿಗಳ ಮೇಲೆ ಬಿದ್ದ ಕಾರಣ ಅವಘಡ ಸಂಭವಿಸಿದೆ. ಮೂವರು ಬಾಲಕಿಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರು ಬಾಲಕಿಯರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದರಲ್ಲಿ ಓರ್ವ ಬಾಲಕಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು, ಮತ್ತೋರ್ವ ವಿದ್ಯಾರ್ಥಿನಿಯ ಸ್ಥಿತಿ ಚಿಂತಾಜನಕವಾಗಿದೆ.
ಲಾರಿ ಚಾಲಕ ಮತ್ತು ಕ್ಲೀನರ್ ಗೂ ಸಣ್ಣಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಸೂಕ್ತ ತನಿಖೆಯ ನಂತರವಷ್ಟೇ ಅಪಘಾತಕ್ಕೆ ಕಾರಣ ತಿಳಿಯಬಹುದು ಎಂದು ಪೊಲೀಸರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಘಟನೆಯ ಬಗ್ಗೆ ಸಂತಾಪ ವ್ಯಕ್ತಪಡಿಸಿರುವ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಇದು ಆಘಾತಕಾರಿ ಮತ್ತು ದುರಂತ ಎಂದು ಬಣ್ಣಿಸಿದ್ದಾರೆ. “ಗಾಯಗೊಂಡ ಎಲ್ಲಾ ಮಕ್ಕಳಿಗೆ ತುರ್ತು ಚಿಕಿತ್ಸೆ ನೀಡಲು ಸರ್ಕಾರವು ಬದ್ಧವಾಗಿದೆ. ಅಪಘಾತದ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಿ ಅಗತ್ಯ ಕ್ರಮಕೈಗೊಳ್ಳಲಾಗುವುದು. ಮೃತ ಮಕ್ಕಳ ಸಂಬಂಧಿಕರು ಮತ್ತು ಸ್ನೇಹಿತರಿಗೆ ಸಂತಾಪಗಳು ಎಂದು ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…