Featured

ಕೇರಳ ಮೂಲದ ನರ್ಸ್‌ಗೆ ಯೆಮನ್‌ನಲ್ಲಿ ಮರಣದಂಡನೆ; ನೆರವಿನ ಹಸ್ತ ಚಾಚಿದ ಭಾರತ – vishwanews24

ಕೇರಳ ಮೂಲದ ನರ್ಸ್‌ಗೆ ಯೆಮನ್‌ನಲ್ಲಿ ಮರಣದಂಡನೆ; ನೆರವಿನ ಹಸ್ತ ಚಾಚಿದ ಭಾರತ

ಸನಾ: ಯೆಮನ್ ಪ್ರಜೆಯನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮೂಲದ ನರ್ಸ್‌ಗೆ ಯೆಮನ್ ಅಧ್ಯಕ್ಷ ರಶಾದ್ ಅಲ್-ಅಲಿಮಿ ಮರಣದಂಡನೆಗೆ ಅನುಮತಿ ನೀಡಿದ್ದರು. ಬಳಿಕ ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅಗತ್ಯ ನೆರವು ನೀಡುವುದಾಗಿ ತಿಳಿಸಿದ್ದಾರೆ.

ಕೇರಳ ಮೂಲದ ನಿಮಿಶಾ ಪ್ರಿಯಾ 2017ರಲ್ಲಿ ಯೆಮನ್ ಪ್ರಜೆ ತಲಾಲ್ ಅಬ್ದೋ ಮಹದಿಯನ್ನು ಕೊಂದ ಹಿನ್ನೆಲೆ 2018ರಲ್ಲಿ ಆಕೆಯನ್ನು ಅಪರಾಧಿಯೆಂದು ಸಾಬೀತು ಪಡಿಸಲಾಗಿತ್ತು. ಬಳಿಕ ಕೇರಳ ಮೂಲದ ನರ್ಸ್‌ಗೆ 2020ರಲ್ಲಿ ಯೆಮನ್‌ನ ವಿಚಾರಣಾ ನ್ಯಾಯಾಲಯವು ಮರಣದಂಡನೆ ವಿಧಿಸಿ ಆದೇಶ ಹೊರಡಿಸಿತ್ತು.

ಮರಣದಂಡನೆ ಆದೇಶಿಸಿದ ದಿನದಿಂದಲೂ ನರ್ಸ್ ಕುಟುಂಬ ಬಿಡುಗಡೆಗಾಗಿ ಪರದಾಡುತ್ತಿದೆ. ನಿಮಿಷಾ ಅವರ ತಾಯಿ ಪ್ರೇಮಾ ಕುಮಾರಿ 2024ರ ಆರಂಭದಲ್ಲಿ ಯೆಮನ್‌ಗೆ ಭೇಟಿ ನೀಡಿ, ಮರಣದಂಡನೆಯನ್ನು ಮನ್ನಾ ಮಾಡುವಂತೆ ಕೋರಿಕೊಂಡಿದ್ದರು. ಜೊತೆಗೆ ಸಂತ್ರಸ್ತರ ಕುಟುಂಬದೊಂದಿಗೆ ಹಣಕಾಸಿನ ಮಾತುಕತೆಯ ನಡೆಸಿದ್ದರು.

ವರದಿಗಳ ಪ್ರಕಾರ ಒಂದು ತಿಂಗಳೊಳಗೆ ನರ್ಸ್ ನಿಮಿಶಾ ಪ್ರಿಯಾಗೆ ಮರಣದಂಡನೆ ಜಾರಿಯಾಗುವ ನಿರೀಕ್ಷೆಯಿದೆ. ಯೆಮನ್‌ನಲ್ಲಿ ನಿಮಿಷಾ ಪ್ರಿಯಾಗೆ ಶಿಕ್ಷೆ ನೀಡುವ ಬಗ್ಗೆ ನಮಗೆ ತಿಳಿದಿದೆ. ಉಳಿದಿರುವ ಪರ್ಯಾಯ ಆಯ್ಕೆಗಳ ಬಗ್ಗೆ ಅವರ ಕುಟುಂಬ ಯೋಚಿಸುತ್ತಿದೆ. ಸರ್ಕಾರ ಈ ವಿಷಯದಲ್ಲಿ ಸಾಧ್ಯವಿರುವ ಎಲ್ಲ ರೀತಿಯ ನೆರವನ್ನು ನೀಡುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago