Featured

ಕೇರಳ ಲವ್ ಜಿಹಾದ್ ಪ್ರಕರಣ : ಹಾದಿಯಾ ತಂದೆ ಅಶೋಕನ್ ಬಿಜೆಪಿಗೆ ಸೇರ್ಪಡೆ

ಕೊಚ್ಚಿ: ಕೇರಳ ಲವ್ ಜಿಹಾದ್ ಪ್ರಕರಣದ ಮೂಲಕ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಯುವತಿ ಹಾದಿಯಾ ತಂದೆ ಅಶೋಕನ್ ಅವರು ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಶಬರಿಮಲೆಯಲ್ಲಿ ಕೇರಳ ಬಿಜೆಪಿ ಮುಖಂಡ ಜಿ.ಗೋಪಾಲಕೃಷ್ಣ ಅವರ ಸಮ್ಮುಖದಲ್ಲಿ ಅಶೋಕನ್ ಸೇರಿದಂತೆ 50 ಮಂದಿ ಪಕ್ಷಕ್ಕೆ ಸೇರ್ಪಡೆಯಾದರು. ಬಿಜೆಪಿ ಸೇರ್ಪಡೆ ಬಳಿಕ ಮಾದ್ಯಮಗಳೊಂದಿಗೆ ಮಾತನಾಡಿದ ಅಶೋಕನ್ ಅವರು ನಾನು ಕಳೆದ ಮೂರು ವರ್ಷಗಳ ಹಿಂದೆಯೇ ಬಿಜೆಪಿ ಸೇರ್ಪಡೆಯಾಗಿದ್ದೆ. ಆದರೆ ಈಗ ನನಗೆ ಅಧಿಕೃತವಾಗಿ ಬಿಜೆಪಿ ಸದಸ್ಯತ್ವ ಸಿಕ್ಕಿದೆ ಎಂದು ಹೇಳಿದರು.
ತಮಿಳುನಾಡಿನ ಸೇಲಂನಲ್ಲಿ ಹೋಮಿಯೋಪಥಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದ ಅಖಿಲಾ, ಶಫಿನ್ ಜಹಾನ್ ಎಂಬ ಮುಸ್ಲಿಂ ಯುವಕನನ್ನು ಕಳೆದ ವರ್ಷದ ಡಿಸೆಂಬರ್‌ನಲ್ಲಿ ವಿವಾಹವಾಗಿ ನಂತರ ಅವರು ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡು ತಮ್ಮ ಹೆಸರನ್ನು ಹಾದಿಯಾ ಎಂದು ಬದಲಿಸಿಸಿಕೊಂಡಿದ್ದರು.ತಮ್ಮ ಪುತ್ರಿಯನ್ನು ಬಲವಂತವಾಗಿ ಮತಾಂತರ ಮಾಡಲಾಗಿದೆ ಮತ್ತು ಆಕೆಯನ್ನು ಜಿಹಾದಿ ಚಟುವಟಿಕೆಗಳಿಗೆ ಬಳಸಿಕೊಳ್ಳುವ ಪ್ರಯತ್ನ ಇದಾಗಿದೆ ಎಂದು ಅಶೋಕನ್ ಕೇರಳ ಹೈಕೋರ್ಟ್ ಮೆಟ್ಟಿಲೇರಿದ ನಂತರ ಹಾದಿಯಾ ಅಂತರ್‌ಧರ್ಮಿಯ ವಿವಾಹ ತೀವ್ರ ಕುತೂಹಲ ಕೆರಳಿಸಿತ್ತು.

ಅಂತೆಯೇ ಇದಕ್ಕೂ ಮೊದಲು ನಾನು ಕಮ್ಯುನಿಸ್ಟ್ ಪಕ್ಷದಲ್ಲಿದ್ದೆ. ಆದರೆ ಪಕ್ಷದ ಸಿದ್ಧಾಂತಗಳು ಮತ್ತು ಅಜೆಂಡಾಗಳು ಇಷ್ಟವಾಗದೇ ಅಲ್ಲಿಂದ ಹೊರನಡೆದೆ ಎಂದು  ಹೇಳಿದರು. ಅಂತೆಯೇ ಶಬರಿಮಲೆ ವಿವಾದದ ಕುರಿತು ಬಿಜೆಪಿ ನಡೆಸುತ್ತಿರುವ ಹೋರಾಟದಲ್ಲೂ ಪಾಲ್ಗೊಳ್ಳುತ್ತೇನೆ ಎಂದು ಘೋಷಣೆ ಮಾಡಿರುವ ಅಶೋಕನ್ ಅವರು, ಶಬರಿಮಲೆ ವಿವಾದ ಸಂಬಂಧ ಸುಪ್ರೀಂ ಕೋರ್ಚ್ ನೀಡಿರುವ ತೀರ್ಪು ಮರು ಪರಿಶೀಲನೆಯಾಗಬೇಕು ಎಂದು ಆಗ್ರಹಿಸಿದ್ದಾರೆ.
Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago