Featured

ಕೇರಳ ಶರೋನ್ ರಾಜ್ ಕೊಲೆ ಪ್ರಕರಣ :ಅಪರಾಧಿ ಪ್ರೇಯಸಿಗೆ ಮರಣದಂಡನೆ ಶಿಕ್ಷೆ  – vishwanews24

ಕೇರಳ  ಶರೋನ್ ರಾಜ್ ಕೊಲೆ ಪ್ರಕರಣ :ಅಪರಾಧಿ ಪ್ರೇಯಸಿಗೆ ಮರಣದಂಡನೆ ಶಿಕ್ಷೆ

ತಿರುವನಂತಪುರಂ: ಕೇರಳದ 23 ವರ್ಷದ ಶರೋನ್ ರಾಜ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿ ಆತನ ಪ್ರೇಯಸಿ 24 ವರ್ಷದ ಗ್ರೀಷ್ಮಾಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ.

ತನಗೆ ಯಾವುದೇ ಕ್ರಿಮಿನಲ್ ಹಿನ್ನೆಲೆ ಇಲ್ಲ ಎಂಬ ಗ್ರೀಷ್ಮಾ ಹೇಳಿಕೆಯನ್ನು ಕೋರ್ಟ್ ತಿರಸ್ಕರಿಸಿತು. ಕೊಲೆಯ ಪ್ರಕರಣದಲ್ಲಿ ಅಪರಾಧಿಯ ವಯಸ್ಸು ಮತ್ತು ಇತರ ಸಂದರ್ಭಗಳನ್ನು ಪರಿಗಣಿಸುವ ಅಗತ್ಯವಿಲ್ಲ ಎಂದು ನ್ಯಾಯಾಲಯ ತಿಳಿಸಿದೆ. ಈ ಪ್ರಕರಣದ ಮೂರನೇ ಆರೋಪಿಯಾಗಿರುವ ಆಕೆಯ ಚಿಕ್ಕಪ್ಪ ನಿರ್ಮಲಕುಮಾರನ್ ನಾಯರ್‌ಗೆ 3 ವರ್ಷಗಳ ಜೈಲು ಶಿಕ್ಷೆಯನ್ನು ಕೂಡ ವಿಧಿಸಿ ಸೆಷನ್ಸ್ ನ್ಯಾಯಾಲಯವು ತೀರ್ಪು ನೀಡಿದೆ.

ಇನ್ನು 24 ವರ್ಷದ ಅಪರಾಧಿ ಗ್ರೀಷ್ಮಾ ಮರಣದಂಡನೆ ಶಿಕ್ಷೆ ಅನುಭವಿಸಿದ ಭಾರತದ ಅತ್ಯಂತ ಕಿರಿಯ ಯುವತಿಯಾಗಿದ್ದಾಳೆ. ತನ್ನ ಶೈಕ್ಷಣಿಕ ಸಾಧನೆಗಳು, ಹಿಂದೆ ಯಾವುದೇ ಅಪರಾಧ ಮಾಡಿಲ್ಲ ಮತ್ತು ತಾನು ತನ್ನ ಹೆತ್ತವರ ಏಕೈಕ ಮಗಳು ಎಂಬ ಅಂಶವನ್ನು ಉಲ್ಲೇಖಿಸಿ ಆಕೆ ಶಿಕ್ಷೆಯಲ್ಲಿ ಸಡಿಲಿಕೆಗೊಳಿಸುವಂತೆ ಕೋರ್ಟ್ ಮೊರೆ ಹೋಗಿದ್ದಳು. ಆದರೆ, 586 ಪುಟಗಳ ತೀರ್ಪಿನಲ್ಲಿ ಅಪರಾಧಿಯ ವಯಸ್ಸು ಮತ್ತು ಇತರ ಸಂದರ್ಭಗಳನ್ನು ಪರಿಗಣಿಸಿ ಈ ಬಗ್ಗೆ ಗಮನಹರಿಸುವ ಅಗತ್ಯವಿಲ್ಲ ಎಂದು ಕೋರ್ಟ್ ಹೇಳಿದೆ.

ಗ್ರೀಷ್ಮಾ ಹಂತ ಹಂತವಾಗಿ ಈ ಕೃತ್ಯ ಎಸಗಲು ಸಂಚು ರೂಪಿಸಿದ್ದಳು. ಆಕೆಗೆ ಕ್ರಿಮಿನಲ್ ಹಿನ್ನೆಲೆ ಇಲ್ಲ ಎನ್ನಲು ಸಾಧ್ಯವಿಲ್ಲ. ಏಕೆಂದರೆ ಆಕೆ ಈ ಮೊದಲು ಕೂಡ ಯುವಕನನ್ನು ಕೊಲೆ ಮಾಡಲು ಯತ್ನಿಸಿದ್ದಳು. ತನಿಖೆಯನ್ನು ಬೇರೆಡೆಗೆ ತಿರುಗಿಸಲು ಬಂಧನದ ನಂತರವೂ ಆಕೆ ಆತ್ಮಹತ್ಯೆಯ ನಾಟಕವಾಡಿದ್ದಳು ಎಂದು ಕೋರ್ಟ್ ಹೇಳಿದೆ. ಪ್ರಾಸಿಕ್ಯೂಟರ್ ಪ್ರಕಾರ, ಆ ಯುವತಿಯ ಕೃತ್ಯಗಳು ಸಮಾಜಕ್ಕೆ ಹಾನಿಕಾರಕ ಸಂದೇಶವನ್ನು ರವಾನಿಸಿದ್ದವು ಮತ್ತು ಪ್ರೀತಿಯ ಪಾವಿತ್ರ‍್ಯವನ್ನು ಹಾಳು ಮಾಡಿದೆ ಎಂದು ಕೋರ್ಟ್ ತೀರ್ಪು ನೀಡಿದೆ.

2022ರ ಅ. 25ರಂದು ಶರೋನ್ ರಾಜ್ ವಿಷಪೂರಿತ ಜ್ಯೂಸ್ ಸೇವಿಸಿದ ಬಳಿಕ ಆತನ ಆರೋಗ್ಯ ಹದಗೆಟ್ಟಿತ್ತು. ಇದಾದ 11 ದಿನಗಳ ನಂತರ, ಅವರು ಆಸ್ಪತ್ರೆಯಲ್ಲಿ ಬಹು ಅಂಗಾಂಗ ವೈಫಲ್ಯದಿಂದ ಮೃತಪಟ್ಟಿದ್ದರು.

ಗ್ರೀಷ್ಮಾಗೆ ನಾಗರಕೋಯಿಲ್‌ನ ಸೇನಾ ಸಿಬ್ಬಂದಿಯೊಂದಿಗೆ ವಿವಾಹ ನಿಶ್ಚಯವಾಗಿತ್ತು. ಹೀಗಾಗಿ ಆಕೆ ತನ್ನ ಪ್ರೇಮಿಯಾಗಿದ್ದ ಶರೋನ್ ಜೊತೆ ಬ್ರೇಕಪ್ ಮಾಡಿಕೊಳ್ಳಲು ನಿರ್ಧರಿಸಿದ್ದಳು. ಆತನನ್ನು ತನ್ನ ಜೀವನದಿಂದ ದೂರವಿಡಲು ಪ್ರಯತ್ನಿಸಿದ್ದಳು. ಇದಕ್ಕೆ ಶರೋನ್ ಒಪ್ಪಿರಲಿಲ್ಲ. ಇದರಿಂದ ಕೋಪಗೊಂಡ ಗ್ರೀಷ್ಮಾ ಶರೋನ್ ಕೊಲೆಗೆ ಸಂಚು ರೂಪಿಸಿದ್ದು, ಆತನನ್ನು ಮನೆಗೆ ಕರೆಸಿಕೊಂಡಿದ್ದಳು. ಈ ವೇಳೆ ಶರೋನ್‌ಗೆ ಆಯುರ್ವೇದಿಕ್ ಕೀಟನಾಶಕ ಬೆರೆಸಿದ ಜ್ಯೂಸ್ ನೀಡಿದ್ದಳು. ಇದರಿಂದಾಗಿ ಶರೋನ್ ಅನಾರೋಗ್ಯಕ್ಕೀಡಾಗಿ ಬಹುಅಂಗಾಂಗ ವೈಫಲ್ಯದಿಂದ ಸಾವನ್ನಪ್ಪಿದ್ದಾರೆ ಎಂದು ಪ್ರಾಸಿಕ್ಯೂಷನ್ ನ್ಯಾಯಾಲಯಕ್ಕೆ ತಿಳಿಸಿದೆ.

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

21 hours ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

22 hours ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

22 hours ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

22 hours ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

23 hours ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

23 hours ago