ಮುಂಬೈ: ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶ ವಿವಾದ ಸಂಬಂಧ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಗಳನ್ನ ಸುಪ್ರೀಂಕೋರ್ಟ್ ವಿಸ್ತೃತ ಪೀಠಕ್ಕೆ ಹಸ್ತಾಂತರಿಸಿತ್ತು. ಅಲ್ಲದೆ, 2018ರ ಸೆಪ್ಟಂಬರ್ನಲ್ಲಿ ನೀಡಿದ್ದ ತೀರ್ಪಿಗೆ ಯಾವುದೇ ತಡೆ ನೀಡಿರಲಿಲ್ಲ. ಹೀಗಾಗಿ ಈ ಬಾರಿಯೂ ಮಹಿಳೆಯರು ದೇವಸ್ಥಾನಕ್ಕೆ ಹೋಗಲು ಮುಂದಾಗಿದ್ದಾರೆ.
ಇದರ ಜೊತೆಗೆ ಮಹಿಳಾ ಹಕ್ಕುಗಳ ಹೋರಾಟಗಾರ್ತಿ ತೃಪ್ತಿ ದೇಸಾಯಿ ಕೂಡ ತಾನು ಈ ಬಾರಿಯೂ ಶಬರಿಮಲೆಗೆ ಹೋಗುವುದಾಗಿ ಹೇಳಿದ್ದಾರೆ. ಒಂದೆಡೆ ಕೇರಳ ಸರ್ಕಾರ ಅಯ್ಯಪ್ಪನ ದರ್ಶನಕ್ಕೆ ಬರುವ ಮಹಿಳೆಯರಿಗೆ ಪ್ರತ್ಯೇಕ ರಕ್ಷಣೆ ನೀಡಲು ಸಾಧ್ಯವಿಲ್ಲ ಅಂತ ಹೇಳಿದೆ. ಅಲ್ಲದೆ, ಕೇರಳ ದೇವಸ್ವಂ ಬೋರ್ಡ್ನ ಸಚಿವ ಕೆ. ಸುರೇಂದ್ರನ್, ತೃಪ್ತಿ ದೇಸಾಯಿಯಂಥ ಹೋರಾಟಗಾರರು ತಮ್ಮ ಶಕ್ತಿ ಪ್ರದರ್ಶನಕ್ಕೆ ಪವಿತ್ರ ಸ್ಥಳಗಳನ್ನ ಬಳಸಿಕೊಳ್ಳಬಾರದು. ಅವರಿಗೆ ಪೊಲೀಸ್ ಪ್ರೊಟೆಕ್ಷನ್ ಬೇಕು ಅಂದ್ರೆ, ಸುಪ್ರೀಂಕೋರ್ಟ್ನಿಂದ ಅದೇಶವನ್ನ ತರಲಿ ಅಂತ ಹೇಳಿದ್ದಾರೆ.
ಇದರ ನಡುವೆಯೂ ನಾನು ನವೆಂಬರ್ 20ರ ಬಳಿಕ ಶಬರಿಮಲೆಗೆ ಹೋಗುತ್ತೇನೆ. ಕೇರಳ ಸರ್ಕಾರ ನನಗೆ ರಕ್ಷಣೆ ನೀಡಲಿ, ನೀಡದಿರಲಿ ನಾನೂ ಹೋಗೋದು ಪಕ್ಕಾ ಅಂತ ತೃಪ್ತಿ ದೇಸಾಯಿ ಹೇಳಿದ್ದಾರೆ. ನಾನು ಹೋಗುವಾಗ ಕೇರಳ ಸರ್ಕಾರಕ್ಕೆ ರಕ್ಷಣೆ ಕೊಡುವಂತೆ ಮನವಿ ಮಾಡುತ್ತೇನೆ. ಆದ್ರೆ ರಕ್ಷಣೆಯನ್ನ ಒದಗಿಸೋದು, ಬಿಡುವುದು ಸರ್ಕಾರಕ್ಕೆ ಬಿಟ್ಟ ವಿಚಾರ. ಒಂದು ವೇಳೆ ರಕ್ಷಣೆ ಕೊಡದೇ ಇದ್ದರೂ ಸಹ ನಾನು ಅಯ್ಯಪ್ಪನ ದರ್ಶನಕ್ಕೆ ತೆರಳುತ್ತೇನೆ ಅಂತ ತೃಪ್ತಿ ಹೇಳಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…