Featured

ಕೇರಳ ಸರ್ಕಾರ ನನಗೆ ರಕ್ಷಣೆ ನೀಡಲಿ, ನೀಡದಿರಲಿ ನಾನು ಅಯ್ಯಪ್ಪನ ದರ್ಶನಕ್ಕೆ ತೆರಳುತ್ತೇನೆ :ತೃಪ್ತಿ ದೇಸಾಯಿ -Vishwanews24

ಮುಂಬೈ: ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶ ವಿವಾದ ಸಂಬಂಧ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಗಳನ್ನ ಸುಪ್ರೀಂಕೋರ್ಟ್ ವಿಸ್ತೃತ ಪೀಠಕ್ಕೆ ಹಸ್ತಾಂತರಿಸಿತ್ತು. ಅಲ್ಲದೆ, 2018ರ ಸೆಪ್ಟಂಬರ್​ನಲ್ಲಿ ನೀಡಿದ್ದ ತೀರ್ಪಿಗೆ ಯಾವುದೇ ತಡೆ ನೀಡಿರಲಿಲ್ಲ. ಹೀಗಾಗಿ ಈ ಬಾರಿಯೂ ಮಹಿಳೆಯರು ದೇವಸ್ಥಾನಕ್ಕೆ ಹೋಗಲು ಮುಂದಾಗಿದ್ದಾರೆ.

ಇದರ ಜೊತೆಗೆ ಮಹಿಳಾ ಹಕ್ಕುಗಳ ಹೋರಾಟಗಾರ್ತಿ ತೃಪ್ತಿ ದೇಸಾಯಿ ಕೂಡ ತಾನು ಈ ಬಾರಿಯೂ ಶಬರಿಮಲೆಗೆ ಹೋಗುವುದಾಗಿ ಹೇಳಿದ್ದಾರೆ. ಒಂದೆಡೆ ಕೇರಳ ಸರ್ಕಾರ ಅಯ್ಯಪ್ಪನ ದರ್ಶನಕ್ಕೆ ಬರುವ ಮಹಿಳೆಯರಿಗೆ ಪ್ರತ್ಯೇಕ ರಕ್ಷಣೆ ನೀಡಲು ಸಾಧ್ಯವಿಲ್ಲ ಅಂತ ಹೇಳಿದೆ. ಅಲ್ಲದೆ, ಕೇರಳ ದೇವಸ್ವಂ ಬೋರ್ಡ್​ನ ಸಚಿವ ಕೆ. ಸುರೇಂದ್ರನ್, ತೃಪ್ತಿ ದೇಸಾಯಿಯಂಥ ಹೋರಾಟಗಾರರು ತಮ್ಮ ಶಕ್ತಿ ಪ್ರದರ್ಶನಕ್ಕೆ ಪವಿತ್ರ ಸ್ಥಳಗಳನ್ನ ಬಳಸಿಕೊಳ್ಳಬಾರದು. ಅವರಿಗೆ ಪೊಲೀಸ್ ಪ್ರೊಟೆಕ್ಷನ್ ಬೇಕು ಅಂದ್ರೆ, ಸುಪ್ರೀಂಕೋರ್ಟ್​​ನಿಂದ ಅದೇಶವನ್ನ ತರಲಿ ಅಂತ ಹೇಳಿದ್ದಾರೆ.

ಇದರ ನಡುವೆಯೂ ನಾನು ನವೆಂಬರ್ 20ರ ಬಳಿಕ ಶಬರಿಮಲೆಗೆ ಹೋಗುತ್ತೇನೆ. ಕೇರಳ ಸರ್ಕಾರ ನನಗೆ ರಕ್ಷಣೆ ನೀಡಲಿ, ನೀಡದಿರಲಿ ನಾನೂ ಹೋಗೋದು ಪಕ್ಕಾ ಅಂತ ತೃಪ್ತಿ ದೇಸಾಯಿ ಹೇಳಿದ್ದಾರೆ. ನಾನು ಹೋಗುವಾಗ ಕೇರಳ ಸರ್ಕಾರಕ್ಕೆ ರಕ್ಷಣೆ ಕೊಡುವಂತೆ ಮನವಿ ಮಾಡುತ್ತೇನೆ. ಆದ್ರೆ ರಕ್ಷಣೆಯನ್ನ ಒದಗಿಸೋದು, ಬಿಡುವುದು ಸರ್ಕಾರಕ್ಕೆ ಬಿಟ್ಟ ವಿಚಾರ. ಒಂದು ವೇಳೆ ರಕ್ಷಣೆ ಕೊಡದೇ ಇದ್ದರೂ ಸಹ ನಾನು ಅಯ್ಯಪ್ಪನ ದರ್ಶನಕ್ಕೆ ತೆರಳುತ್ತೇನೆ ಅಂತ ತೃಪ್ತಿ ಹೇಳಿದ್ದಾರೆ.

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

9 hours ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

13 hours ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

13 hours ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

14 hours ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

2 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

2 days ago