Featured

ಕೇರಳ ಸ್ಟೋರಿಯಂತೆ ಉಡುಪಿ ಸಹಿತ ‘ಕರ್ನಾಟಕ ಸ್ಟೋರಿ’ಗೆ ಸ್ಕೆಚ್ ಹಾಕಲು ಎಂದಿಗೂ ಅವಕಾಶ ನೀಡಲಾರೆವು : ಕುಯಿಲಾಡಿ – Vishwanews24

ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಉಡುಪಿಯ ಖ್ಯಾತಿಗೆ ಮಸಿ ಬಳಿಯುವ ಪ್ರಯತ್ನ: ಕುಯಿಲಾಡಿ

ಉಡುಪಿ: ಜಿಹಾದಿ ಮಾನಸಿಕತೆಯ ಕೆಲವು ವಿದ್ಯಾರ್ಥಿನಿಯರು ಉಡುಪಿ‌ಯ ಕಾಲೇಜಿನಲ್ಲಿ ನಡೆದ ಗಂಭೀರ ಪ್ರಕರಣದಲ್ಲಿ ಭಾಗಿಯಾಗಿದ್ದು, ಶಿಕ್ಷಣ ಮತ್ತು ಸಾಂಸ್ಕೃತಿಕ ನಗರಿ ಉಡುಪಿಯ ಖ್ಯಾತಿಗೆ ಮಸಿ ಬಳಿಯುವ ಪ್ರಯತ್ನದ ಮೂಲಕ ‘ಕೇರಳ ಸ್ಟೋರಿ’ಯಂತೆ ಉಡುಪಿ ಸಹಿತ ‘ಕರ್ನಾಟಕ ಸ್ಟೋರಿ’ಗೆ ಸ್ಕೆಚ್ ಹಾಕಲು ಎಂದಿಗೂ ಅವಕಾಶ ನೀಡಲಾರೆವು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

ಶಿಕ್ಷಣ ಸಂಸ್ಥೆಯ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಮಾಡಿರುವ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಕುಯಿಲಾಡಿ ಈಗಾಗಲೇ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಈ ಸಂಬಂಧವಾಗಿ ಮೂವರು ವಿದ್ಯಾರ್ಥಿನಿಯರನ್ನು ಅಮಾನತು ಮಾಡಿರುವುದಾಗಿ ತಿಳಿಸಿದ್ದು, ಇದರಿಂದ ಪ್ರಕರಣದ ನಿಖರತೆ ಸಾಬೀತಾಗಿದೆ. ಶಿಕ್ಷಣ ಸಂಸ್ಥೆಯ ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ಖಾಸಗಿ ವೀಡಿಯೋಗಳನ್ನು ಚಿತ್ರೀಕರಿಸಿ ಅವುಗಳನ್ನು ಸಮಾಜಘಾತುಕ ಶಕ್ತಿಗಳಿಗೆ ನೀಡುವ ಕುಕೃತ್ಯದ ಯೋಜನೆಯ ಮೂಲಕ ಅವರ ಭವಿಷ್ಯವನ್ನು ಹಾಳುಗೆಡಹಲು ರೂಪಿಸಿರುವ ಈ ಹುನ್ನಾರ ಅತ್ಯಂತ ಖಂಡನೀಯ ಎಂದರು.

ರಾಜ್ಯ ಸರಕಾರ ಪೊಲೀಸರ ಮೇಲೆ ಒತ್ತಡ ಹೇರಿ ಈ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿರುವ ಬಗ್ಗೆ ಗುಮಾನಿ ಇದೆ. ಮೂರು ಮಂದಿ ತಪ್ಪಿತಸ್ಥ ವಿದ್ಯಾರ್ಥಿನಿಯರು ತಮ್ಮ ಮೊಬೈಲ್ ಗಳಲ್ಲಿ ಚಿತ್ರೀಕರಿಸಿಕೊಂಡಿದ್ದ ವೀಡಿಯೋಗಳನ್ನು ಡಿಲೀಟ್ ಮಾಡಲಾಗಿದೆ ಹಾಗೂ ಈ ಪ್ರಕರಣದಲ್ಲಿ ಇಬ್ಬರು ಯುವಕರು ಕೂಡಾ ಶಾಮೀಲಾಗಿದ್ದಾರೆ ಎಂಬ ವಿಚಾರವನ್ನು ಸಂತ್ರಸ್ತ ವಿದ್ಯಾರ್ಥಿನಿಯರು ಬಹಿರಂಗಪಡಿಸಿರುವುದಾಗಿ ತಿಳಿದುಬಂದಿದೆ. ಇದರ ಬಗ್ಗೆ ಪೊಲೀಸ್ ಇಲಾಖೆ ತನಿಖೆಯ ದಾರಿ ತಪ್ಪಿಸುವ ಅಥವಾ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಸಿದರೆ ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ಪ್ರಕರಣದ ಬಗ್ಗೆ ಜಾಗೃತಿ ಮೂಡಿಸುವ ಜೊತೆಗೆ ವಿದ್ಯಾರ್ಥಿಗಳೊಂದಿಗೆ ಸೇರಿ ನ್ಯಾಯಕ್ಕಾಗಿ ತೀವ್ರ ಹೋರಾಟ ನಡೆಸಲಿದೆ ಎಂದು ಎಚ್ಚರಿಕೆಯ ಸಂದೇಶವನ್ನು ನೀಡಿದರು.

ರಾಜ್ಯ ಸರಕಾರ ಮತ್ತು ಗೃಹ ಇಲಾಖೆ ಈ ಪ್ರಕರಣವನ್ನು ಲಘುವಾಗಿ ಪರಿಗಣಿಸಬಾರದು. ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ ಈ ಪ್ರಕರಣವನ್ನು ಹಳ್ಳ ಹಿಡಿಸುವ ಪ್ರಯತ್ನ ಮಾಡಿದಲ್ಲಿ ಅದರ ಪರಿಣಾಮವನ್ನು ಮುಂದಿನ ದಿನಗಳಲ್ಲಿ ಎದುರಿಸಬೇಕಾದೀತು ಎಂದು ಎಚ್ಚರಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago