Featured

ಮಂಗಳೂರು : ಕೇರಳ ಹೆಚ್ಚುತ್ತಿರುವ ಕೊರೊನಾ ಪ್ರಕರಣ : ಗ್ರಾಮಗಳಲ್ಲಿ ಟಾಸ್ಕ್‌ಪೋರ್ಸ್ ಸಮಿತಿ ರಚನೆ ;ಗಡಿಯಲ್ಲಿ ಕಟ್ಟೆಚ್ಚರ -Vishwanews24

ಕೇರಳ ಹೆಚ್ಚುತ್ತಿರುವ ಕೊರೊನಾ ಪ್ರಕರಣ : ಗ್ರಾಮಗಳಲ್ಲಿ ಟಾಸ್ಕ್‌ಪೋರ್ಸ್ ಸಮಿತಿ ರಚನೆ ;ಗಡಿಯಲ್ಲಿ ಕಟ್ಟೆಚ್ಚರ -Vishwanews24

ಮಂಗಳೂರು,: ”ಕೇರಳ ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ರೋಗಲಕ್ಷಣವಿದ್ದು ಗಡಿ ದಾಟುವವರ ಬಗ್ಗೆ ಜಾಗರೂಕರಾಗಿರಲು ಮಾರ್ಚ್ 13 ರ ಶನಿವಾರದಿಂದ ಜಾರಿಗೆ ಬರುವಂತೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಟಾಸ್ಕ್‌ಪೋರ್ಸ್ ಸಮಿತಿ ರಚಿಸಲು ನಿರ್ಧರಿಸಲಾಗಿದೆ” ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಹೇಳಿದರು.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ”ಅಧಿಕೃತ ಮಟ್ಟದ ಸಭೆಯಲ್ಲಿ ಗ್ರಾಮ ಮಟ್ಟದಲ್ಲಿ ಟಾಸ್ಕ್‌ಪೋರ್ಸ್ ಸಮಿತಿಗಳನ್ನು ರಚಿಸಲು ಸೂಚನೆಗಳನ್ನು ನೀಡಲಾಗಿದೆ ಪ್ರದೇಶದಲ್ಲಿ ಗಸ್ತು ತಿರುಗಲು ಈ ಸಮಿತಿಗಳಿಗೆ ತಿಳಿಸಲಾಗಿದೆ. ಕೇರಳದಲ್ಲಿ ಚುನಾವಣೆ ಸಮೀಪವಾಗುತ್ತಿರುವ ಹಿನ್ನೆಲೆ ಗಡಿಯಲ್ಲಿ ಸುರಕ್ಷತೆ ಅತೀ ಮುಖ್ಯ” ಎಂದು ಅವರು ಹೇಳಿದರು.

ಉಡುಪಿ : ವಿದ್ಯೋದಯ ಪ.ಪೂ.ಕಾಲೇಜು : ಜೆ.ಇ.ಇ. ಮೈನ್ಸ್ ಸಾಧನೆ -Vishwanews24

“ಕೇರಳದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಬರುವವರು ಕೊರೊನಾ ನೆಗೆಟಿವ್‌ ವರದಿ ತರಬೇಕು. ಅವರು ಗಡಿಗಳಿಗೆ ಬಂದು ಅಲ್ಲಿ ಕೇಂದ್ರಗಳಲ್ಲಿ ಪರೀಕ್ಷೆಗೆ ಒಳಪಡಬಹುದು. ಗಡಿ ದಾಟಲು ಯಾವುದೇ ತಡೆ ಇಲ್ಲದಿದ್ದರೂ, ತಪಾಸಣೆ ನಡೆಸಲಾಗುತ್ತಿದೆ. ಕೇರಳದ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದರು, ಉಭಯ ಜಿಲ್ಲೆಗಳ ದೈನಂದಿನ ಸಂಚಾರ ನಡೆಸುವವರ ಹಿತದೃಷ್ಟಿಯಿಂದ ಇನ್ನೂ ನಾಲ್ಕು ಗಡಿ ರಸ್ತೆಗಳನ್ನು ತೆರೆಯಲು ನಿರ್ಧರಿಸಲಾಗಿದೆ” ಎಂದು ಕೂಡಾ ಜಿಲ್ಲಾಧಿಕಾರಿ ತಿಳಿಸಿ‌ದ್ದಾರೆ.

”ದೈನಂದಿನ ಕೊರೊನಾ ಪರೀಕ್ಷೆಗಳ ಸಂಖ್ಯೆ 4,000 ಕ್ಕೆ ಏರಿದೆ. ಈ ಹಿನ್ನೆಲೆ ವೆನ್ಲಾಕ್ ಆಸ್ಪತ್ರೆಯಲ್ಲಿ ಡೇಟಾ ಎಂಟ್ರಿ ಆಪರೇಟರ್ ಮತ್ತು ಲ್ಯಾಬ್ ತಂತ್ರಜ್ಞರನ್ನು ನೇಮಿಸಲು ಕ್ರಮ ಕೈಗೊಳ್ಳಲಾಗಿದೆ. ಇಲ್ಲಿರುವ ವಿಮಾನ ನಿಲ್ದಾಣದಲ್ಲಿ ಸ್ವ್ಯಾಬ್ ಪರೀಕ್ಷಾ ಕೇಂದ್ರವು ಕಾರ್ಯನಿರ್ವಹಿಸುತ್ತಿದ್ದು ಅದು 24 ಗಂಟೆಗಳಲ್ಲೂ ವರದಿ ನೀಡುತ್ತದೆ. ಕೇರಳ ಪ್ರಯಾಣಿಕರಿಗೆ ಇದು ಸಹಕಾರಿಯಾಗಲಿದೆ” ಎಂದರು.

ಮಂಗಳೂರು : ಮಾ.27ರಂದು ಉಳ್ಳಾಲ ತಾಲೂಕು ಬ್ಯಾರಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮ್ಮೇಳನ -Vishwanews24

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

10 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

1 day ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

1 day ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

1 day ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

1 day ago