Featured

ಕೈಕೊಟ್ಟ ಪ್ರಿಯಕರ : ಮದುವೆ  ದಿನವೇ ಆತನ ಮೇಲೆ  ಆಸಿಡ್‌ ದಾಳಿಗೆ ಮುಂದಾದ ವಿಧವೆ ಪ್ರೇಯಸಿ – vishwanews24

ಕೈಕೊಟ್ಟ ಪ್ರಿಯಕರ : ಮದುವೆ  ದಿನವೇ ಆತನ ಮೇಲೆ  ಆಸಿಡ್‌ ದಾಳಿಗೆ ಮುಂದಾದ ವಿಧವೆ ಪ್ರೇಯಸಿ

ಅಮರಾವತಿ:  ಇಲ್ಲೊಬ್ಬಳು ವಿಧವೆ ತನ್ನ ಪ್ರಿಯಕರ  ಕೈಕೊಟ್ಟಿದ್ದಕ್ಕಾಗಿ ಅವನ ಮೇಲೆ ಆಸಿಡ್‌ ದಾಳಿಗೆ ಮುಂದಾಗಿದ್ದಾಳೆ.

44 ವರ್ಷದ ವಿಧವೆಯೊಬ್ಬಳು ತನ್ನ ಮಾಜಿ ಪ್ರಿಯಕರನ ಮದುವೆ  ದಿನವೇ ಆತನ ಮೇಲೆ ಆಸಿಡ್‌ ದಾಳಿಗೆ ಯತ್ನಿಸಿದ್ದು, ಪೊಲೀಸರಿಗೆ ಸಿಕ್ಕಿಬಿದ್ದಿರುವ ಘಟನೆ ಆಂಧ್ರಪ್ರದೇಶದ  ನಂಡಲೂರಿನಲ್ಲಿ ನಡೆದಿದೆ. ಘಟನೆ ನಂತರ ಯುವಕನ ವಿವಾಹ ಕಾರ್ಯಕ್ರಮ ರದ್ದಾಗಿದೆ. ಆಸಿಡ್‌ ದಾಳಿ  ನಡೆಸಿದ ಆರೋಪಿ ಮಹಿಳೆ ಸಾಫ್ಟ್‌ವೇರ್‌ ಎಂಜಿನಿಯರ್‌ ಜಯಾ. ಈಕೆಗೆ 22 ವರ್ಷದ ಮಗನಿದ್ದಾನೆ. ಇನ್ನೂ ಆಸಿಡ್‌ ದಾಳಿಗೆ ಒಳಗಾದ ಮಾಜಿ ಪ್ರಿಯಕರ ಶೇಖ್ ಸೈಯದ್ (32), ಮದುವೆಯಾಗಲು ತಯಾರಾಗಿದ್ದ. ತನ್ನೊಂದಿಗೆ ಎಲ್ಲಾ ಮುಗಿದ ಮೇಲೆ ಕೈಕೊಟ್ಟನೆಂದು ಆಸಿಡ್‌ ದಾಳಿಗೆ ಮುಂದಾಗಿದ್ದಾಳೆ.

ಸಯ್ಯದ್‌ ಮತ್ತು ಜಯಾ 10 ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದ್ರೆ ಕಳೆದ 3 ವರ್ಷಗಳಲ್ಲಿ ಸೈಯ್ಯದ್‌ ಡ್ರೈವರ್‌ ಕೆಲಸಕ್ಕಾಗಿ ಕುವೈತ್‌ಗೆ ತೆರಳಿದ್ದ. ಭಾರತಕ್ಕೆ ಮರಳಿದ ನಂತರ ಜಯಾಳ ಸಂಪರ್ಕವನ್ನು ಬಿಟ್ಟು, ಇದೇ ಆಗಸ್ಟ್‌ 11ರಂದು ಬೇರೊಬ್ಬ ಮಹಿಳೆಯೊಂದಿಗೆ ಮದುವೆಯಾಗಲು ಸಿದ್ಧತೆ ಮಾಡಿಕೊಂಡಿದ್ದ. ಮದುವೆ ನಿಲ್ಲಿಸುವ ಸಲುವಾಗಿ ಜಯಾ ಕೂಡ ಅಲ್ಲಿಗೆ ಬಂದಿದ್ದಳು. ಆದ್ರೆ ಸಯ್ಯದ್‌ ಆಕೆಯೊಂದಿಗೆ ಇರಲ್ಲ ಎಂದು ಹೇಳಿದ. ಇದರಿಂದ ಕೋಪಗೊಂಡ ಮಹಿಳೆ ಬಾತ್‌ರೂಮ್‌ ಕ್ಲೀನರ್‌ ಆಸಿಡ್‌ ತಂಡು ಅವನ ಮೇಲೆ ಎರಚಿದ್ದಾಳೆ. ಆದ್ರೆ ಅವನು ತಪ್ಪಿಸಿಕೊಂಡಿದ್ದರಿಂದ ಸಯ್ಯದ್‌ ಚಿಕ್ಕಮ್ಮನಿಗೆ ಆಸಿಡ್‌ ತಾಗಿದೆ. ಇದೇ ಕೋಪದಿಂದ ಅಲ್ಲೇ ಇದ್ದ ಚಾಕು ತೆಗೆದುಕೊಂಡು ಸಯ್ಯದ್‌ ಜಯಾಳಿಗೆ ಇರಿದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾತ್ ರೂಂ ಕ್ಲೀನಿಂಗ್ ಆಸಿಡ್ ಆಗಿದ್ದರಿಂದ ಸೈಯದ್ ಚಿಕ್ಕಮ್ಮನಿಗೆ ಗಂಭೀರ ಗಾಯಗಳಾಗಿಲ್ಲ. ಇಯ್ಯ ಜಯಾಗೆ ಸಣ್ಣಪುಟ್ಟ ಗಾಯಗಳಾಗಿವೆ. ಪೊಲೀಸರು ಇಬ್ಬರ ವಿರುದ್ಧವೂ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಕೇಸ್‌ ದಾಖಲಿಸಿಕೊಂಡು ಬಂಧಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago