Featured

ಕೈಕೊಟ್ಟ ಪ್ರೇಯಸಿ: ನೊಂದ ಬಾಡಿಬಿಲ್ಡರ್ ನೇಣುಬಿಗಿದುಕೊಂಡು ಆತ್ಮಹತ್ಯೆ – vishwanews24

ಕೈಕೊಟ್ಟ 3 ವರ್ಷ ಪ್ರೀತಿಸಿದ ಪ್ರೇಯಸಿ: ನೊಂದ ಬಾಡಿಬಿಲ್ಡರ್ ನೇಣುಬಿಗಿದುಕೊಂಡು ಆತ್ಮಹತ್ಯೆ

ಬೆಂಗಳೂರು: ಪ್ರೀತಿಸಿದ ಯುವತಿ ಕೈ ಕೊಟ್ಟಳು ಎಂಬ ಕಾರಣಕ್ಕೆ ರಾಜ್ಯ ಮಟಂದ ದೇಹದಾರ್ಡ್ಯ ಪಟುವೊಬ್ಬರು ಡೆತನೋಟ್ ಬರೆದಿಟ್ಟು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾಲಕ್ಷ್ಮೀ ಲೇಔಟ್ ಠಾಣೆ ವ್ಯಾಪ್ತಿಯ ಗೆಳೆಯರ ಬಳಗದಲ್ಲಿ ನಡೆದಿದೆ.

ಗೆಳೆಯರ ಬಳಗ ನಿವಾಸಿ ಕಿರಣ್ (26) ಆತ್ಮಹತ್ಯೆ ಮಾಡಿಕೊಂಡಿರುವ ಬಾಡಿ ಬಿಲ್ಡರ್, ಶನಿವಾರ ಸಂಜೆ ದುರ್ಘಟನೆ ನಡೆದಿದೆ. ಈ ಸಂಬಂಧ ಯುವತಿ, ಆಕೆಯ ತಾಯಿ ಮತ್ತು ಸಹೋದರನ ವಿರುದ್ಧ ಮಹಾಲಕ್ಷ್ಮೀ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
ಕಿರಣ್ ರಾಜ್ಯ ಮಟ್ಟದ ಬಾಡಿಬಿಲ್ಡರ್‌ಆಗಿದ್ದು, ಸಮೀಪದ ಜಿಮ್‌ನಲ್ಲಿ ತರಬೇತುದಾರನಾಗಿ ಕೆಲಸ ಮಾಡುತ್ತಿದ್ದರು. 3 ವರ್ಷಗಳಿಂದ ಯುವತಿ ಯೊಬ್ಬಳನ್ನು ಪ್ರೀತಿಸುತ್ತಿದ್ದರು. 2 ತಿಂಗಳ ಹಿಂದೆ ಪ್ರೀತಿಸಿದ ಯುವತಿಯನ್ನು ಮನೆಗೆ ಕರೆತಂದು ಪೋಷಕರಿಗೆ ತೋರಿಸಿ ಮದುವೆ ಮಾಡಿಕೊಡುವಂತೆ ಕೋರಿದ್ದರು. ಅದಕ್ಕೆ ಪೋಷಕರು ಕೂಡ ಒಪ್ಪಿಗೆ ಸೂಚಿಸಿದ್ದರು. ಆದರೆ, 15 ದಿನಗಳ ಹಿಂದೆ ಯುವತಿ ಮನೆಗೆ ಬಂದು ಪೋಷಕರ ಒತ್ತಾಯದ ಮೇರೆಗೆ ಬೇರೊಬ್ಬ ಯುವಕನನ್ನು ಮದುವೆಯಾಗುತ್ತಿದ್ದೇನೆ ಎಂದು ಆಹ್ವಾನ ಪತ್ರಿಕೆ ನೀಡಿದ್ದಳು. ಅಲ್ಲದೆ, ವರನ ಕಡೆಯವರು ನೀಡಿರುವ ಸೀರೆ ಎಂದು ತೋರಿಸಿದ್ದಳು ಎಂಬುದು ಗೊತ್ತಾಗಿದೆ ಎಂದು ಪೊಲೀಸರು ಹೇಳಿದರು.

ಇದನ್ನೂ ಓದಿ: 

ನನ್ನ ಸಾವಿಗೆ ಯುವತಿ ಕಾರಣ: ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ
ಮನೆಯಲ್ಲಿ ಕಿರಣ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುನ್ನ ಒಂದು ಪುಟದ ಡೆತ್‌ನೋಟ್ ಬೆರದಿಟ್ಟಿದ್ದಾನೆ. ಅದರಲ್ಲಿ ಸುಮಾರು 3 ವರ್ಷಗಳಿಂದ ತುಂಬಾ ಪ್ರೀತಿಸುತ್ತಿದ್ದ ಯುವತಿ ನನಗೆ ಕೈ ಕೊಟ್ಟಿದ್ದು, ಅದರಿಂದ ಮಾನಸಿಕವಾಗಿ ಖನ್ನತೆ ಒಳಗಾಗಿದ್ದೇನೆ. ನನ್ನ ಸಾವಿಗೆ ಪ್ರೀತಿಸಿದ ಯುವತಿ, ಆಕೆಯ ತಾಯಿ ಮತ್ತು ಆಕೆಯ ಸಹೋದರನೇ ಕಾರಣ ಎಂದು ಉಲ್ಲೇಖಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿತ ವ್ಯಕ್ತಿಗಳಿಗೆ ವಿಚಾರಣೆಗೆ ನೋಟಿಸ್ ಕೊಡಲಾಗುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದರು.

 

Vishwa News 24

Recent Posts

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

3 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

3 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

3 hours ago

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ – vishwanews24

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…

3 hours ago

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

4 hours ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

4 hours ago