ಹರ್ಷನ ಹತ್ಯೆ ಪ್ರಕರಣದ ಆರೋಪಿಗಳು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗ್ರಹ ಪಾಲಾಗಿದ್ದು, ಈ ನಡುವೆ ಜೈಲಿನಲ್ಲಿದ್ದ ಕೊಲೆ ಆರೋಪಿಗಳಿಗೆ ಮೊಬೈಲ್, ಎಲೆಕ್ಟ್ರಾನಿಕ್ ಉಪಕರಣಗಳು ಲಭ್ಯವಾಗುತ್ತಿದ್ದು, ಹಂತಕರು ಜೈಲಿನಿಂದಲೇ ಹಲವು ಡೀಲ್ ಗಳನ್ನು ಮಾಡಿಕೊಂಡು ಆರಾಮವಾಗಿ ಕಾಲ ಕಳೆಯುತ್ತಿದ್ದಾರೆ ಎನ್ನಲಾಗಿತ್ತು.
ಈ ಹಿನ್ನೆಲೆಯಲ್ಲಿ ಗೃಹ ಸಚಿವರು ದಿಢೀರ್ ಆಗಿ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಜೈಲಿನಲ್ಲಿದ್ದ ಆರೋಪಿಗಳಿಗೆ ನೇರವಾಗಿ ಪ್ರಶ್ನಿಸಿರುವ ಗೃಹ ಸಚಿವರು ಮೊಬೈಲ್ ಫೋನ್ ಕೈಗೆ ಸಿಕ್ಕಿದ್ದು ಹೇಗೆ ಎಂದು ಕೇಳಿದ್ದಾರೆ.
ಇದೇ ವೇಳೆ ಜೈಲಿನಲ್ಲಿ ಅಕ್ರಮ ಚಟುವಟಿಕೆ ಬಗ್ಗೆ ವರದಿ ಹಿನ್ನೆಲೆಯಲ್ಲಿ ಕಾರಾಗೃಹದ ಹೈಸೆಕ್ಯೂರಿಟಿ ಬ್ಯಾರಕ್ ಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ವೈರಲ್ ಆಗಿದ್ದ ಹರ್ಷ ಕೊಲೆ ಪ್ರಕರಣದ ಆರೋಪಿಗಳ ವಿಡಿಯೋ
ಇನ್ನು ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ ನ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಆರೋಪಿಗಳು ಬೆಂಗಳೂರು ಜೈಲಿನಿಂದ ವಿಡಿಯೋ ಕಾಲ್ ಮಾಡಿ ಮಾತನಾಡಿದ್ದರು. ಇದು ರಾಜ್ಯಮಟ್ಟದಲ್ಲಿ ಭಾರೀ ಚರ್ಚೆಗೆ ನಾಂದಿ ಹಾಡಿತ್ತು. ಹರ್ಷನ ಕೊಲೆ ಆರೋಪಿಗಳು ಜೈಲಿನಲ್ಲಿ ವಿಲಾಸಿ ಜೀವನ ನಡೆಸುತ್ತಿದ್ದ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ ತಪಾಸಣೆ ನಡೆಸುತ್ತಿದ್ದಾರೆ.
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ರಾಬರ್ಟ್ ವಾದ್ರಾ ಉಡುಪಿ: ಇಲ್ಲಿನ ಶ್ರೀ ಕೃಷ್ಣ…
ಮಂಗಳೂರನ್ನು ರಾಜ್ಯದ ಎರಡನೇ ಬೆಂಗಳೂರು ನಗರದ ರೀತಿ ಅಭಿವೃದ್ಧಿ ಮಾಡಲು ಸರಕಾರ ಬದ್ಧ: ದಿನೇಶ್ ಗುಂಡೂರಾವ್ ಮಂಗಳೂರು: ಮಂಗಳೂರನ್ನು ರಾಜ್ಯದ…
ಉಡುಪಿ: ಕ್ಷೇತ್ರ ಮರುವಿಂಗಡನೆ ಮಸೂದೆ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ ಉಡುಪಿ: ಕೇಂದ್ರ ಸರ್ಕಾರದ ಕ್ಷೇತ್ರ ಮರವಿಂಗಡನೆ ಮಸೂದೆ…
ಪರವಾನಿಗೆ ಭೂಮಾಪಕರ ಮುಷ್ಕರದಿಂದ ಸಾರ್ವಜನಿಕರಿಗೆ ಸಮಸ್ಯೆ ತಕ್ಷಣ ಕ್ರಮಕೈಗೊಳ್ಳಲು ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ ಪರವಾನಿಗೆ ಭೂಮಾಪಕರ ಮುಷ್ಕರದಿಂದ…
ಕಾಂಗ್ರೆಸ್ ನ ಮಹಿಳಾ ವಿರೋಧಿ ಮನಸ್ಥಿತಿ ಕೊಂಚವೂ ಬದಲಾಗಿಲ್ಲ: ಹೆಚ್.ಡಿ.ಕುಮಾರಸ್ವಾಮಿ ಬೆಂಗಳೂರು: ಕಾಂಗ್ರೆಸ್‌ನ ಮಹಿಳಾ ವಿರೋಧಿ ಮನಸ್ಥಿತಿ ಬದಲಾಗಿಲ್ಲ ಎಂದು…
ವಾಯುಪಡೆ ವಿಮಾನ ಹಾರ್ಡ್ ಲ್ಯಾಂಡಿಂಗ್; ಸ್ಥಗಿತಗೊಂಡಿದ್ದ ಪುಣೆ ಏರ್‌ಪೋರ್ಟ್ ಪುನಾರಂಭ ಪುಣೆ: ಭಾರತೀಯ ವಾಯುಪಡೆಯ ವಿಮಾನ ಹಾರ್ಡ್ ಲ್ಯಾಂಡಿಂಗ್‌ನಿಂದ ರಾತ್ರಿಯಿಡೀ…