ಬೆಂಗಳೂರು: ಗೃಹಜ್ಯೋತಿ ಯೋಜನೆ ಅಡಿ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು. ವರ್ಷದ ಸರಾಸರಿ ಆಧಾರದಲ್ಲಿ ಯಾರು 200 ಯುನಿಟ್ ಒಳಗಡೆ ವಿದ್ಯುತ್ ಬಳಸುತ್ತಾರೆ ಅವರು ಬಿಲ್ ಕಟ್ಟಬೇಕಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕರ್ನಾಟಕ ಸರ್ಕಾರದ 5 ಗ್ಯಾರೆಂಟಿ ಯೋಜನೆಗಳ ಜಾರಿ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು 5 ಗ್ಯಾರೆಂಟಿಗಳನ್ನು ಈ ಆರ್ಥಿಕ ವರ್ಷದಲ್ಲಿ ಜಾರಿಗೆ ಮಾಡುತ್ತೇವೆ. ಗ್ಯಾರಂಟಿ ಜಾರಿ ವಿಚಾರದಲ್ಲಿ ಯಾವುದೇ ಧರ್ಮ, ಜಾತಿ, ಭಾಷೆ ತಾರತಮ್ಯ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಗೃಹಲಕ್ಷ್ಮಿ ಯೋಜನೆಯಡಿ ಮನೆಯ ಒಡತಿಗೆ 2 ಸಾವಿರ ರೂಪಾಯಿ ನೀಡುವ ಯೋಜನೆಗೆ ಫಲಾನುಭವಿಗಳು ದಾಖಲಾತಿಗಳನ್ನು ನೀಡಿ ಅರ್ಜಿ ಸಲ್ಲಿಸಿದ ಬಳಿಕ ಆಗಸ್ಟ್ ನ ೧೫ರಂದು ಇದು ಜಾರಿಯಾಗುವುದು ಇದು ಬಿಪಿಎಲ್ ಮತ್ತು ಎಪಿಎಲ್ ಕಾರ್ಡು ದಾರರು ವರ್ಗದ ಜನರಿಗೂ ಇದು ಅನ್ವಯವಾಗಲಿದೆ. ಜೂನ್ 15 ರಿಂದ ಜುಲೈ 15 ವರೆಗೆ ಅರ್ಜಿ ಸಲ್ಲಿಸಲು ಸಮಯವಾಕಶ ನೀಡಲಾಗುವುದು ಎಂದು ಹೇಳಿದ್ದಾರೆ.
ಜುಲೈ 1 ರಿಂದ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ದಾರರಿಗೆ ‘ಅನ್ನಭಾಗ್ಯ’ ಯೋಜನೆಯಡಿ 10 ಕೆಜಿ ಅಕ್ಕಿ ವಿತರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಶಕ್ತಿ ಯೋಜನೆ: ಮಹಿಳೆಯರಿಗೆ ಎಸಿ ಬಸ್, ನಾನ್ ಎಸಿ ಸ್ಲೀಪರ್ , ಲಕ್ಸುರಿ ಬಸ್ ಹೊರತುಪಡಿಸಿ ಎಕ್ಸ್ ಪ್ರೆಸ್ ಬಸ್ ಸಹಿತ ರಾಜ್ಯಾದ್ಯಾಂತ ಉಚಿತ ಪ್ರಯಾಣ ಮಾಡಬಹುದು. ಈ ಯೋಜನೆ ಜು.11 ರಂದು ಜಾರಿಗೆ ಬರಲಿದೆ.
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…