Featured

ಕೈ ತುಂಬ ಸಂಬಳ ಕೊಟ್ಟರೂ ಲಂಚ ತಿಂದುಕೊಂಡು ನಾಯಿ ಹಾಗೆ ಬಿದ್ದಿರುತ್ತಾರೆ.. : ಪೊಲೀಸರ ವಿರುದ್ಧ ಆರಗ ಜ್ಞಾನೇಂದ್ರ – Vishwanews24

ಕೈ ತುಂಬ ಸಂಬಳ ಕೊಟ್ಟರೂ ಲಂಚ ತಿಂದುಕೊಂಡು ನಾಯಿ ಹಾಗೆ ಬಿದ್ದಿರುತ್ತಾರೆ..

ಪೊಲೀಸರೆಲ್ಲ ಕೆಟ್ಟು ಹೋಗಿದ್ದಾರೆ, ಎಂಜಲು ಕಾಸನ್ನು ತಿಂದು ಬದುಕುತ್ತಿದ್ದಾರೆ..

ಪೊಲೀಸರಾಗಲು ಯೋಗ್ಯತೆ ಇಲ್ಲದಿದ್ದ ಮೇಲೆ ಯೂನಿಫಾರ್ಮ್ ಬಿಚ್ಚಿಟ್ಟು ಮನೆಗೆ ಹೋಗಲಿ

ಪೊಲೀಸರ ವಿರುದ್ಧ ಕೂಗಾಡಿದ ಆರಗ ಜ್ಞಾನೇಂದ್ರ

ಶಿವಮೊಗ್ಗ: ಅಧಿಕಾರಕ್ಕೆ ಬಂದಾಗಿಂದಲೂ ತಮ್ಮ ಪೊಲೀಸ್ ಇಲಾಖೆಯ ಅಧಿಕಾರಿಗಳ ಗುಣಗಾನ ಮಾಡುತ್ತಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ ಇದೀಗ ಪೊಲೀಸರ ಕಾರ್ಯ ವೈಖರಿ ಬಗ್ಗೆ ಅಸಮಾಧಾನ ಹೊರಹಾಕಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಚಿಕ್ಕಮಗಳೂರು ಜಿಲ್ಲೆಯ ಪೊಲೀಸ್ ಅಧಿಕಾರಿಯ ವಿರುದ್ಧ ಫೋನ್​ನಲ್ಲಿ ಮಾತನಾಡಿರುವ ಸಚಿವ ಆರಗ ಜ್ಞಾನೇಂದ್ರ, ಪೊಲೀಸರಿಗೆ ಕೈ ತುಂಬಾ ಸಂಬಳ ಕೊಟ್ಟರೂ ಲಂಚ ತಿಂದುಕೊಂಡು ನಾಯಿಯ ಹಾಗೆ ಬಿದ್ದಿರುತ್ತಾರೆ. ಪೊಲೀಸರೆಲ್ಲ ಕೆಟ್ಟು ಹೋಗಿದ್ದಾರೆ, ಎಂಜಲು ಕಾಸನ್ನು ತಿಂದು ಬದುಕುತ್ತಿದ್ದಾರೆ. ಪೊಲೀಸರಾಗಲು ಯೋಗ್ಯತೆ ಇಲ್ಲದಿದ್ದ ಮೇಲೆ ಯೂನಿಫಾರ್ಮ್ ಬಿಚ್ಚಿಟ್ಟು ಮನೆಗೆ ಹೋಗಲಿ ಎಂದು ಕೂಗಾಡಿರುವ ವಿಡಿಯೋ ಈಗ ವೈರಲ್ ಆಗಿದೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿರುವ ತಮ್ಮ ಕಚೇರಿಯಲ್ಲಿ ಕುಳಿತು ಮೊಬೈಲ್​ನಲ್ಲಿ ಮಾತನಾಡುತ್ತಿರುವ ಸಚಿವ ಆರಗ ಜ್ಞಾನೇಂದ್ರ, ಗೋ ಸಾಗಾಟ ಮಾಡೋದು ಯಾರು ಅಂತ ಪೊಲೀಸರಿಗೆ ಗೊತ್ತಿದೆ. ಆದರೆ, ಲಂಚ ತಿಂದು ಏನೂ ಗೊತ್ತಿಲ್ಲದಂತೆ ನಾಯಿಯ ಹಾಗೆ ಬಿದ್ದಿರುತ್ತಾರೆ. ಪೊಲೀಸರಿಗೆ ಆತ್ಮಗೌರವ ಬೇಕಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ತರಾಟೆಗೆ ತೆಗೆದುಕೊಂಡಿರುವ ವಿಡಿಯೋವೊಂದು ಬಹಿರಂಗವಾಗಿದೆ.

ತಮ್ಮ ಇಲಾಖೆಯ ಅಧಿಕಾರಿಗಳಿಗೆ ಅವಾಚ್ಯ ಶಬ್ದಗಳಿಂದ ಬೈದಿರುವುದರಿಂದ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಗೃಹ ಸಚಿವ ಆರಗ ಜ್ಞಾನೇಂದ್ರ ಚಿಕ್ಕಮಗಳೂರಿನ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಅಸಮಾಧಾನ ಹೊರಹಾಕಿದ್ದು. ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದು, ಪೊಲೀಸರ ಕೈಗೆ ಕಾನೂನು ನೀಡಿದರೂ ಅಕ್ರಮ ಗೋ ಸಾಗಾಟ ನಡೆಯುತ್ತಿದೆ. ಪೊಲೀಸರಿಗೆ ಕೈತುಂಬಾ ಸಂಬಳ ನೀಡುತ್ತೇವೆ. ಆದರೂ, ಎಂಜಲು ಕಾಸಿನಾಸೆಗೆ ಲಂಚ ಪಡೆದು ಗೋ ಸಾಗಾಟಕ್ಕೆ ಅವಕಾಶ ಕೊಡುತ್ತಿದ್ದಾರೆ. ನಾನು ಗೃಹ ಸಚಿವ ಸ್ಥಾನದಲ್ಲಿ ಇರಬೇಕೋ ಬೇಡವೋ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೈರಲ್ ಆದ ವಿಡಿಯೋದಲ್ಲಿ ಸಚಿವ ಆರಗ ಜ್ಞಾನೇಂದ್ರ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಗುಡ್ಡೆಕೊಪ್ಪದ ತಮ್ಮ ನಿವಾಸದ ಕಚೇರಿಯಿಂದ ಚಿಕ್ಕಮಗಳೂರಿನ ಪೊಲೀಸ್ ಅಧಿಕಾರಿಯೊಬ್ಬರಿಗೆ ಫೋನ್​​ನಲ್ಲಿಯೇ ಕ್ಲಾಸ್ ತೆಗೆದುಕೊಂಡಿದ್ದಾರೆ. ಗೋಹತ್ಯೆ‌ ನಿಷೇಧ ಕಾಯ್ದೆ ಜಾರಿಗೆ ತಂದು, ಪೊಲೀಸರ ಕೈಗೆ ಕಾನೂನು ನೀಡಿದರು ಸಹ ಅಕ್ರಮ ಗೋಸಾಗಾಟ ನಿಲ್ಲದೇ ಇರುವುದರಿಂದ ಗೃಹ ಸಚಿವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರಿಗೆ ಕೈ ತುಂಬಾ ಸಂಬಳ ಕೊಡುತ್ತಿದ್ದೇವೆ. ಆದರೂ ಅವರು ಎಂಜಲು ಕಾಸು ತಿಂದು ಬದುಕುತ್ತಿದ್ದಾರೆ. ಯೋಗ್ಯತೆ ಇಲ್ಲದಿದ್ದರೆ ಯೂನಿಫಾರ್ಮ್ ಬಿಚ್ಚಿಟ್ಟು, ಮನೆ ಕಡೆ ಹೋಗಿ, ಮಣ್ಣು ಹೊರಲಿ ಎಂದು ಕಿಡಿಕಾರಿದ್ದಾರೆ.

ಪೊಲೀಸರಿಗೆ ಆತ್ಮ ಗೌರವವೆಂಬುದೇ ಇಲ್ಲ. ಎಲ್ಲ ಪೊಲೀಸರೂ ಕೆಟ್ಟು ಹಾಳಾಗಿ ಹೋಗಿದ್ದಾರೆ. ಪೊಲೀಸರು ಲಂಚ ಪಡೆದುಕೊಂಡು ನಾಯಿಯ ಹಾಗೆ ಬಿದ್ದಿರುತ್ತಾರೆ. ಅಂಥವರು ಪೊಲೀಸ್ ಯೂನಿಫಾರ್ಮ್ ಬಿಚ್ಚಿಟ್ಟು ಹೋಗಲಿ ಎಂದು ಆರಗ ಜ್ಞಾನೇಂದ್ರ ಕಿಡಿ ಕಾರಿದ್ದಾರೆ.

ಈ ವಿಡಿಯೋ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟನೆ ನೀಡಿದ್ದು, ನಾನು ಎಲ್ಲಾ ಪೊಲೀಸರ ವಿರುದ್ಧ ಮಾತನಾಡಿಲ್ಲ. ಗೋವಿನ ಕಳ್ಳರಿಗೆ, ಗೋ ಸಾಗಾಣಿಕೆಗೆ ಬೆಂಬಲ ನೀಡುವ ಪೊಲೀಸರ ಬಗ್ಗೆಯಷ್ಟೇ ಮಾತನಾಡಿದ್ದೇನೆ. ನನಗೆ ಪೊಲೀಸರ ಬಗ್ಗೆ ಅಪಾರವಾದ ಗೌರವವಿದೆ. ಮೊನ್ನೆ ಗೋ ಕಳ್ಳರನ್ನು ಹಿಡಿಯಲು ಹೋದವರ ಮೇಲೆಯೇ ಕಾರು ಹತ್ತಿಸಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡವರು ಬದುಕುಳಿದಿರುವುದೇ ದೊಡ್ಡ ಪವಾಡ. ಆ ಘಟನೆಯಿಂದ ಬೇಸರವಾಗಿ ಮಾತನಾಡಿದ್ದೇನೆ. ಎಲ್ಲ ಪೊಲೀಸರೂ ಒಂದೇ ರೀತಿ ಇರುವುದಿಲ್ಲ. ಈ ರೀತಿಯ ಕೆಲವು ಪೊಲೀಸರಿಂದ ಇಡೀ ಇಲಾಖೆಗೆ ಕೆಟ್ಟ ಹೆಸರು ಬರುತ್ತಿದೆ. ಕರ್ನಾಟಕದಲ್ಲಿ ಸಾಕಷ್ಟು ದಕ್ಷ ಪೊಲೀಸರು ಇದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.

Vishwa News 24

Recent Posts

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

9 minutes ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

22 minutes ago

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago