ಉಡುಪಿ: ಕೊಂಕಣ ರೈಲು ಮಾರ್ಗದ ಲೋಲಿಮ್ ಹಾಗೂ ಅಸ್ನೋಟಿ ನಿಲ್ದಾಣಗಳ ನಡುವೆ ಬರುವ ಜುಲೈ 24ರ ಗುರುವಾರ ಬೆಳಗ್ಗೆ 10:20ರಿಂದ ಅಪರಾಹ್ನ 1:50ರವರೆಗೆ ಹಳಿ ಅಭಿವೃದ್ಧಿ ಕಾಮಗಾರಿ ನಡೆಯಲಿರುವ ಹಿನ್ನೆಲೆಯಲ್ಲಿ ಮೂರೂವರೆ ಗಂಟೆಗಳ ಕಾಲ ಈ ಮಾರ್ಗದಲ್ಲಿ ಸಂಚರಿಸುವ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.
ಜು.24 ರಂದು ಅಂದು ಸಂಚರಿಸುವ ರೈಲು ನಂ.56616 ಮಂಗಳೂರು ಸೆಂಟ್ರಲ್- ಮಡಗಾಂವ್ ಜಂಕ್ಷನ್ ಪ್ಯಾಸೆಂಜರ್ ರೈಲನ್ನು ಕುಮಟ ಮತ್ತು ಕಾರವಾರ ನಿಲ್ದಾಣಗಳ ಮಧ್ಯೆ 90 ನಿಮಿಷ ತಡೆ ಹಿಡಿಯಲಾಗುವುದು. ರೈಲು ನಂ.56615 ಮಡಗಾಂವ್ ಜಂಕ್ಷನ್- ಮಂಗಳೂರು ಪ್ಯಾಸೆಂಜರ್ ರೈಲು ನಿಗದಿತ ಸಮಯಕ್ಕಿಂತ ಒಂದು ಗಂಟೆ ತಡವಾಗಿ ಮಡಗಾಂವ್ ಜಂಕ್ಷನ್‌ನಿಂದ ಪ್ರಯಾಣ ಆರಂಭಿಸಲಿದೆ. ಈ ರೈಲು ಅಪರಾಹ್ನ 2:10ರ ಬದಲು 3:10ಕ್ಕೆ ಪ್ರಯಾಣ ಪ್ರಾರಂಭಿಸಲಿದೆ.
ಜು.23ರಂದು ಉದ್ನಾದಿಂದ ಹೊರಡುವ ರೈಲು ನಂ.09057 ಉದ್ನಾ- ಮಂಗಳೂರು ಜಂಕ್ಷನ್ ಸ್ಪೆಷಲ್ ರೈಲಿನ ಪ್ರಯಾಣವನ್ನು ಮಡಗಾಂವ್ ಜಂಕ್ಷನ್ ಹಾಗೂ ಕನಕೋನಾ ನಿಲ್ದಾಣಗಳ ನಡುವೆ 30 ನಿಮಿಷಗಳ ಕಾಲ ತಡೆ ಹಿಡಿಯಲಾಗುವುದು ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…