ಉಡುಪಿ: ಟಿಕೆಟ್ ಇಲ್ಲದೆ ಹಾಗೂ ಅನಧಿಕೃತವಾಗಿ ಪ್ರಯಾಣಿಸುವವರ ವಿರುದ್ಧ ಕೊಂಕಣ ರೈಲ್ವೇ ವತಿಯಿಂದ ವ್ಯಾಪಕ ತಪಾಸಣ ಕಾರ್ಯಾಚರಣೆ ಮುಂದುವರಿದಿದ್ದು, 2026ರ ಎಪ್ರಿಲ್‌ನಲ್ಲಿ 934 ವಿಶೇಷ ಟಿಕೆಟ್ ತಪಾಸಣ ಕಾರ್ಯಾಚರಣೆ ನಡೆಸಿ ಸುಮಾರು 37 ಸಾವಿರ ಅನಧಿಕೃತ ಹಾಗೂ ಅಕ್ರಮ ಪ್ರಯಾಣಿಕರನ್ನು ಪತ್ತೆ ಹಚ್ಚಲಾಗಿದೆ. ಇವರಿಂದ 2.90 ಕೋಟಿ ರೂ. ದಂಡ ಸಂಗ್ರಹಿಸಲಾಗಿದೆ.
2025-26 ಆರ್ಥಿಕ ವರ್ಷದಲ್ಲಿ ಒಟ್ಟು 11,394 ವಿಶೇಷ ತಪಾಸಣ ಕಾರ್ಯಾಚರಣೆ ನಡೆಸಲಾಗಿದೆ. ಈ ಅವಧಿಯಲ್ಲಿ 4,99,675 ಅನಧಿಕೃತ ಪ್ರಯಾಣ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು 27.68 ಕೋಟಿ ದಂಡ ವಸೂಲಿ ಮಾಡಲಾಗಿದೆ. ಬೇಸಗೆ ರಜೆ ಹಾಗೂ ಮುಂಗಾರಿನ ಅವಧಿಯಲ್ಲಿ ಪ್ರವಾಸಿಗರ ಸಂಚಾರ ಹೆಚ್ಚಾಗುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ತಪಾಸಣೆ ಮತ್ತಷ್ಟು ತೀವ್ರಗೊಳ್ಳಲಿದೆ. ರೈಲ್ವೆ ರಕ್ಷಣ ಪಡೆ ಹಾಗೂ ರೈಲ್ವೆ ಅಧಿಕಾರಿಗಳ ಸಹಯೋಗದಲ್ಲಿ ಸಂಪೂರ್ಣ ಕೊಂಕಣ ಮಾರ್ಗದಲ್ಲಿ ವಿಶೇಷ ತಪಾಸಣ ಕಾರ್ಯಾಚರಣೆ ನಡೆಯಲಿದೆ.
ಇದನ್ನೂ ಓದಿ:
ಪ್ರಯಾಣಿಕರು ಅಧಿಕೃತ ಟಿಕೆಟ್‌ಗಳೊಂದಿಗೆ ಪ್ರಯಾಣ ಮಾಡುವಂತೆ ಕೊಂಕಣ ರೈಲ್ವೇ ಮನವಿ ಮಾಡಿದೆ.
ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…
ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…
ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು…
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…