ದಕ್ಷಿಣ ಕನ್ನಡ

ಕೊಕ್ಕಡದಲ್ಲಿ ಕಾರು-ಬಸ್ ನಡುವೆ ಭೀಕರ ಅಪಘಾತ: ಇಬ್ಬರು ಮೃತ್ಯು!

ಧರ್ಮಸ್ಥಳ: ಕಾರು ಮತ್ತು ಬಸ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆಯು ಕೊಕ್ಕಡದ ಕೌಕ್ರಾಡಿ ಗ್ರಾಮದ ಪಾರ್ಪಿಕಲ್ಲು ಎಂಬ ಪ್ರದೇಶದಲ್ಲಿ ನಡೆದಿದೆ. ಮೃತಪಟ್ಟವರನ್ನು ಧರ್ಮಸ್ಥಳ ಮುಳಿಕ್ಕಾರು ಮನೆಯ ವೀರಪ್ಪ ಮಲೆಕುಡಿಯರವರ ಪುತ್ರ ದಿನೇಶ (32) ಹಾಗೂ ಧರ್ಮಸ್ಥಳ ಸಂದು ಲೈಟಿಂಗ್ಸ್ ಮಾಲಕ ಸಂದೇಶ್ (30) ಎಂದು ಗುರುತಿಸಲಾಗಿದೆ.

ಧರ್ಮಸ್ಥಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ಸಿಗೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.

ಅಪಘಾತದಿಂದ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಗಾಯಾಳುಗಳನ್ನು ಕೊಕ್ಕಡದ ಯುವಕರು ಕಾರಿನಿಂದ ಹೊರಗೆ ತೆಗೆದು ನೆಲ್ಯಾಡಿ ಖಾಸಗಿ ಆಸ್ಪತ್ರೆಗೆ ಸಾಗಿಸಿದರೂ ಗಾಯಾಳುಗಳು ಹಾದಿಯಲ್ಲಿಯೇ ಮೃತಪಟ್ಟ ಘಟನೆ ವರದಿಯಾಗಿದೆ. ಅಪಘಾತದ ತೀವ್ರತೆಯಿಂದ ಮಾರುತಿ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಕಾರಿನಲ್ಲಿದ್ದ ಗಾಯಾಳುಗಳನ್ನು ಹರಸಾಹಸ ಪಟ್ಟು ಸ್ಥಳೀಯ ಯುವಕರು ಕಾರಿನಿಂದ ಹೊರ ತೆಗೆದಿದ್ದು ಆಸ್ಪತ್ರೆಗೆ ಸಾಗಿಸುವಲ್ಲಿ ಶ್ರಮಿಸಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

2 days ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

2 days ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

2 days ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

2 days ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

3 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

3 days ago