ಕೊಕ್ಕಡ,: ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಬೆಳಗ್ಗೆ ಕೊಕ್ಕಡ ಗ್ರಾಮದ ಹಳ್ಳಿಂಗೇರಿಯಲ್ಲಿ ನಡೆದಿದೆ.
ಪ್ರಸ್ತುತ ಕೊಕ್ಕಡ ಹಳ್ಳಿಂಗೇರಿಯ ನಿವಾಸಿಯಾಗಿರುವ ಮೂಲತಃ ಧಾರವಾಡ ಜಿಲ್ಲೆಯ ಹಿರೇಗುಂಜಲ್-ಚಿಕ್ಕಗುಂಜಲ್ ಮೂಲದ ರಮೇಶ್ ಅವರ ಪುತ್ರಿ ಶ್ವೇತಾ(18) ಆತ್ಮಹತ್ಯೆ ಮಾಡಿಕೊಂಡ ಯುವತಿ. ಕಳೆದ ಸುಮಾರು ಐದು ವರ್ಷಗಳಿಂದ ಶ್ವೇತಾ ಅವರ ತಂದೆ-ತಾಯಿ ಕೊಕ್ಕಡ ಸಮೀಪದ ಹಳ್ಳಿಂಗೇರಿಯಲ್ಲಿ ನೆಲೆಸಿದ್ದು, ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.
ಇದನ್ನೂ ಓದಿ :
ಮಾಹಿತಿಯ ಪ್ರಕಾರ, ಶ್ವೇತಾ ಎಂದಿನಂತೆ ಬೆಳಗ್ಗೆ ಎದ್ದು ಕಾಲೇಜಿಗೆ ತೆರಳಲು ಸಿದ್ಧತೆ ನಡೆಸುತ್ತಿದ್ದರು. ಘಟನೆಯ ವೇಳೆ ತಂದೆ ಕೆಲಸದ ನಿಮಿತ್ತ ಹೊರಗೆ ತೆರಳಿದ್ದು, ತಾಯಿ ಮಾತ್ರ ಮನೆಯಲ್ಲಿ ಇದ್ದರು ಎನ್ನಲಾಗಿದೆ. ಈ ಮಧ್ಯೆ ಮನೆಯ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶ್ವೇತಾಳ ಮೃತದೇಹ ಪತ್ತೆಯಾಗಿದೆ.
ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…