ಚಿಕ್ಕೋಡಿ: ಶ್ರೀ ರಾಮಸೇನೆಯ ಸಂಸ್ಥಾಪಕ ಅಧ್ಯಕ್ಷರಾಗಿರುವ ಪ್ರಮೋದ್ ಮುತಾಲಿಕ್ ಅವರಿಗೆ ಜೀವ ಬೆದರಿಕೆ ಕರೆಗಳು ಬರುತ್ತಿರುವ ಕುರಿತು ಸ್ವತಃ ಪ್ರಮೋದ್ ಮುತಾಲಿಕ್ ಅವರೇ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ.
ಈ ಬಗ್ಗೆ ಮಾತನಾಡಿದ ಪ್ರಮೋದ್ ಮುತಾಲಿಕ್, ನನಗೆ ಬೇರೆ ಬೇರೆ ನಂಬರ್‌ಗಳಿಂದ ಕರೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಲಾಗುತ್ತಿದೆ. ಕೊಚ್ಚಿ ಕೊಚ್ಚಿ ತುಂಡು ಮಾಡಿ ನಾಯಿಗೆ ಬಿಸಾಕುತ್ತೇನೆ ಬೋ… ಮಗನೇ ಎಂದು ಹೀನಾಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಲಾಗುತ್ತಿದೆ ಎಂದು ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವುದಾಗಿ ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಮ್ಯಾಂಗಲೋರ್ ಅಲ್ಲ ಇನ್ನು ಮುಂದೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ – Vishwanews24
ನನಗೆ 4-5 ಕಾಲ್‌ಗಳ ಮೂಲಕ ಬೆದರಿಕೆ ಕರೆಗಳು ಬಂದಿವೆ. ಉರ್ದು ಮಿಶ್ರಿತ ಮಂಗಳೂರು ಕನ್ನಡ ಭಾಷೆಯಲ್ಲಿ ಅತ್ಯಂತ ಕೆಟ್ಟದಾಗಿ ಕೊಲೆ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ. ಈ ಎಲ್ಲಾ ನಂಬರ್‌ಗಳನ್ನು ಹುಕ್ಕೇರಿ ಪೊಲೀಸ್ ಠಾಣೆಗೆ ನೀಡಿ ದೂರು ದಾಖಲಿಸಿದ್ದೇನೆ. ಸೂಕ್ತ ರೀತಿಯಲ್ಲಿ ತನಿಖೆ ಮಾಡಿ, ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದೇನೆ ಎಂದು ಹೇಳಿದ್ದಾರೆ.
ಇಂತಹ ಬೆದರಿಕೆ ಕರೆಗಳು ನನಗೆ ಬಂದಿರುವುದು ಮೊದಲೇನಲ್ಲ. ಈ ರೀತಿ ಬೆದರಿಕೆ ಹಾಕುವುದನ್ನು ಬಿಡಿ, ನಾನು ಇದಕ್ಕೆಲ್ಲ ಹೆದರುವುದಿಲ್ಲ. 10-15 ವರ್ಷಗಳಿಂದ ಬೆದರಿಕೆ ಕರೆಗಳನ್ನು ಸ್ವೀಕಾರ ಮಾಡಿಕೊಂಡು ಸಂಘಟನೆಯನ್ನು ಮುನ್ನಡೆಸಿದ್ದೇನೆ. ಇಂತಹ ಕುಕೃತ್ಯವನ್ನು ಬಿಟ್ಟು ನ್ಯಾಯಯುತವಾಗಿ ಬದುಕುವುದನ್ನು ಕಲಿಯಿರಿ ಎಂದಿದ್ದಾರೆ.
ಮೇ 1 ರಿಂದ ಶಿವಮೊಗ್ಗ - ಬೆಂಗಳೂರು ವಿಮಾನ ಹಾರಾಟ ಮುಂದುವರೆಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಒತ್ತಾಯ ಶಿವಮೊಗ್ಗ:…
ಬೆಳ್ತಂಗಡಿ: ನಾಯಿ ಅಡ್ಡ ಬಂದು ಆಟೋ ಪಲ್ಟಿ ; ಚಾಲಕ ಸಾವು ಬೆಳ್ತಂಗಡಿ: ನಾಯಿ ಅಡ್ಡ ಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ…
ಉಡುಪಿ: ಬ್ಯಾಡ್ಮಿಂಟನ್ ತಾರೆ ಕಾರ್ಕಳದ ಆಯುಷ್ ಶೆಟ್ಟಿಗೆ ಮುಖ್ಯಮಂತ್ರಿಯಿಂದ ಗೌರವಾರ್ಪಣೆ ಉಡುಪಿ: ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಗೆದ್ದ…
ಎಸ್‌ಎಸ್ ಎಲ್‌ಸಿ ಯಲ್ಲಿ ತೃತೀಯ ಭಾಷೆಗೆ ಗ್ರೇಡ್ ಬೇಡ, ಅಂಕವನ್ನೇ ಕೊಡಿ : ಹೈಕೋರ್ಟ್ ಬೆಂಗಳೂರು : ಪ್ರಸಕ್ತ ಸಾಲಿನಿಂದಲೇ…
ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ , ನಮ್ಮ ತಂದೆಯೇ 5 ವರ್ಷ ಸಿಎಂ : ಮತ್ತೊಮ್ಮೆ ತಂದೆಯ ಪರ ಯತೀಂದ್ರ …
ಉಡುಪಿ : ದ್ವಿತೀಯಪಿ.ಯು.ಸಿಪರೀಕ್ಷೆ -2 : ಏ. 17 ರ ವರೆಗೆ ನೋಂದಣಿಗೆಅವಕಾಶ ಉಡುಪಿ : 2026 ನೇ ಸಾಲಿನ…