Featured

ಕೊಡಗಿನಲ್ಲಿ ಕಾಣಿಸಿಕೊಂಡ ಆಫ್ರಿಕನ್ ವೈರಸ್ : 30ಕ್ಕೂ ಹೆಚ್ಚು ಹಂದಿಗಳ ಬಲಿ – Vishwanews24

ಕೊಡಗಿನಲ್ಲಿ ಕಾಣಿಸಿಕೊಂಡ ಆಫ್ರಿಕನ್ ವೈರಸ್ : 30ಕ್ಕೂ ಹೆಚ್ಚು ಹಂದಿಗಳ ಬಲಿ

ಮಡಿಕೇರಿ : ಹಂದಿಸಾಕಾಣಿಕೆಗೆ ಮುಂದಾಗಿದ್ದ ಯುವ ರೈತ ಉದ್ಯಮಿಗಳಿಗೆ ಆಫ್ರಿಕನ್ ಹಂದಿ ಜ್ವರ ಬರಸಿಡಿಲಿನಂತೆ ಎರಗಿದ್ದು, ಹಂದಿಗಳ ಮಾರಣ ಹೋಮವೇ ನಡೆದು ಹೋಗಿದೆ.

ಮಡಿಕೇರಿಯಲ್ಲಿ ಈಗ ಆಫ್ರಿಕನ್ ಹಂದಿಜ್ವರದ ಟೆನ್ಷನ್ ಶುರುವಾಗಿದೆ. ಕಳೆದ 2 ತಿಂಗಳ ಅವಧಿಯಲ್ಲೇ ಇಲ್ಲಿನ ಗಾಳಿಬೀಡು ಗ್ರಾಮದ ಪ್ರಶಾಂತ್ ಮತ್ತು ಗಣಪತಿ ಎಂಬವರ ಹಂದಿ ಸಾಕಾಣಿಕೆ ಕೇಂದ್ರದಲ್ಲಿ 30ಕ್ಕೂ ಹೆಚ್ಚು ಹಂದಿಗಳು ಈ ಮಾರಕ ರೋಗಕ್ಕೆ ಬಲಿಯಾಗಿವೆ.

ಇದರಿಂದ ಹಂದಿ ಸಾಗಾಣಿಕೆ ಕೇಂದ್ರಗಳು, ಸುತ್ತಮತ್ತಲ ರೈತರಲ್ಲಿ ಆತಂಕ ಎದುರಾಗಿದೆ.ಹೌದು. ಮೊದಲಿಗೆ ಹಂದಿಗಳ ಸರಣಿ ಸಾವು ಕಂಡ ಪಶು ವೈದ್ಯಕೀಯ ಇಲಾಖೆ ಅವುಗಳ ಸ್ಯಾಂಪಲ್ ಸಂಗ್ರಹಿಸಿ ಹೈದರಾಬಾದಿಗೆ ಕಳುಹಿಸಿತ್ತು.

ಇರಾನ್ ಮಸೀದಿ ಮೇಲೆ ಉಗ್ರರ ದಾಳಿ.. 15 ಮಂದಿ ಸಾವು , 40ಕ್ಕೂ ಹೆಚ್ಚು ಮಂದಿ ಗಾಯ – Vishwanews24

ಬಳಿಕ ಹೈದರಾಬಾದ್ ಲ್ಯಾಬಿನಲ್ಲಿ ಅದನ್ನ ಪರೀಕ್ಷೆಗೆ ಒಳಪಡಿಸಿದಾಗ ಸಾವನ್ನಪ್ಪಿದ ಹಂದಿಗಳಿಗೆ ಆಫ್ರಿಕನ್ ಹಂದಿ ಜ್ವರ ಇರುವುದು ದೃಢಪಟ್ಟಿದೆ. ಆದ್ರೆ ಲ್ಯಾಬ್ ರಿಪೋರ್ಟ್ (Lab Report) ಬರುವಷ್ಟರಲ್ಲಿ ಗಣಪತಿ ಅವರ ಎಲ್ಲಾ 21 ಹಂದಿಗಳು ಮೃತಪಟ್ಟಿದ್ವು. ಇನ್ನು ಪ್ರಶಾಂತ್ ಅವರು ತಮ್ಮ ಹಂದಿಗಳಿಗೆ ವ್ಯಾಕ್ಸಿನ್ ಕೊಡಿಸಿದ್ರು 9ಕ್ಕೂ ಹೆಚ್ಚು ಹಂದಿಗಳು ಮೃತಪಟ್ಟಿವೆ. ಇದರಿಂದ ಲಕ್ಷಾಂತರ ರೂಪಾಯಿ ಲಾಸ್ ಆಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

ಇನ್ನು ಈ ಗ್ರಾಮದಲ್ಲಿ ಐದಾರು ವರ್ಷಗಳಲ್ಲಿ ಹಂದಿ ಸಾಕಾಣಿಕೆ ಮಾಡುತ್ತಿದ್ದ ರೈತರು ಮಾರಾಟಕ್ಕೆ ಸಿದ್ಧವಾಗಿದ್ದ ಹಂದಿಗಳ ಸಾವಿನಿಂದ ಕಂಗಾಲಾಗಿದ್ದಾರೆ. ಅತ್ತ ಆಪ್ರಿಕನ್ ಹಂದಿ ಜ್ವರ ಪತ್ತೆಯಾದ ಹಿನ್ನೆಲೆ ಮತ್ತಷ್ಟು ರೋಗ ಹರಡದಂತೆ ತಡೆಯಲು ಕೊಡಗು ಜಿಲ್ಲಾಡಳಿತ ಮುಂದಾಗಿದೆ. ಹಂದಿ ಸಾಕಾಣಿಕಾ ಕೇಂದ್ರದ 1 ಕಿಲೋ ಮೀಟರ್ ವ್ಯಾಪ್ತಿ ರೋಗ ಪೀಡಿತ ವಲಯವೆಂದು ಘೋಷಣೆ ಮಾಡಿದ್ದು, ಸೋಂಕಿಗೆ ತುತ್ತಾದ ಹಂದಿಗಳ ವೈಜ್ಞಾನಿಕ ವಧೆ, ಸಂಸ್ಕಾರಕ್ಕೆ ಸೂಚನೆ ನೀಡಿದೆ.

ಉಡುಪಿ: ಸುರತ್ಕಲ್ ಟೋಲ್, ಹೆಜಮಾಡಿಯೊಂದಿಗೆ ವಿಲೀನ.. ಎರಡು ಟೋಲ್ ಹಣವನ್ನು ಹೆಜಮಾಡಿಯಲ್ಲಿ ವಸೂಲಿ ಮಾಡ್ತಾರೆ : ಸೊರಕೆ ಅರೋಪ – Vishwanews24

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

1 day ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago