Featured

ಕೊಡಗು ಜಿಲ್ಲೆಯ ಕೆಲವೆಡೆ ಕಂಪಿಸಿದ ಭೂಮಿ ; ಆತಂಕದಲ್ಲಿ ಜನ – Vishwanews24

ಕೊಡಗು ಜಿಲ್ಲೆಯ ಕೆಲವೆಡೆ ಕಂಪಿಸಿದ ಭೂಮಿ ; ಆತಂಕದಲ್ಲಿ ಜನ

ಮಡಿಕೇರಿ: ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಗಡಿ ಪ್ರದೇಶದಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದ ಭೂಕಂಪದ ಕೇಂದ್ರ ಬಿಂದು ಕೊಡಗಿನಲ್ಲೆ ಇರುವುದು ಗೊತ್ತಾಗಿದೆ‌.

ಮಡಿಕೇರಿ ತಾಲ್ಲೂಕಿನ ಚೆಂಬು ಗ್ರಾಮದಿಂದ 5.2  ಕಿ.ಮೀ ವಾಯುವ್ಯ ದಿಕ್ಕಿನಲ್ಲಿ ಭೂಮಿಯ 15 ಕಿ.ಮೀ. ಆಳದಲ್ಲಿ ರಿಕ್ಟರ್ ಮಾಪಕ 3.0ರಷ್ಟು ಭೂಕಂಪನವಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ‌ ಕೇಂದ್ರ ತಿಳಿಸಿದೆ.

ಈ ಭೂಕಂಪನದಲ್ಲಿ ಯಾರಿಗೂ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಆದರೆ, ಹಲವು ಸೆಕೆಂಡ್ ಗಳಷ್ಟು ಸಮಯ ಕಂಪನದ ಅನುಭವವಾಗಿದೆ.  ಸುಮಾರು 50 ಕಿ.ಮೀ ಪ್ರದೇಶದವರೆಗೂ ಅನುಭವವಾಗುವ ಸಾಧ್ಯತೆ ಇದೆ. ಆದರೆ, ಈ ಕಂಪನದಿಂದ ಭಯಪಡುವ ಅಗತ್ಯವಿಲ್ಲ. ಹೆಚ್ಚೆಂದರೆ ಮನೆಯಲ್ಲಿರುವ‌ ವಸ್ತುಗಳು ಅಲುಗಾಡಬಹುದು. ಜನತೆ ಗಾಬರಿ ಆಗುವ‌ ಅವಶ್ಯಕತೆಯಿಲ್ಲ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರ ಹೇಳಿದೆ.

ಈ‌ ಭೂಕಂಪದ ಅನುಭವ ತಮಗೇನಾದರೂ ಆದರೆ ಹಾಗೂ ಭೂಮಿಯಲ್ಲಿ ಬಿರುಕುಗಳು ಕಂಡು ಬಂದರೆ ಕೊಡಗು ಜಿಲ್ಲೆಯ ವಿಪತ್ತು ನಿರ್ವಹಣಾ ಕೇಂದ್ರ 08272-221077, 221099  ಕರೆ ಮಾಡಿ ಮಾಹಿತಿ ಕೊಡಬೇಕೆಂದು ಮನವಿ ಮಾಡಿದೆ‌‌.

ಮಡಿಕೇರಿ, ನಾಪೋಕ್ಲು, ಕುಕ್ಕುಂದ, ಕಾಡು, ಬಲ್ಲಮಾವಟ್ಟಿ. ದಬ್ಬಡ್ಕ, ಪೆರಾಜೆ, ಕರಿಕೆ, ಭಾಗಮಂಡಲ ಸೇರಿದಂತೆ ವಿವಿಧ ಕಡೆ  7.45 ಕ್ಕೆ ಭೂಮಿ ಕಂಪಿಸಿದ ಅನುಭವ ಜನರಿಗೆ ಆಗಿದೆ. ಮನೆಯಲ್ಲಿದ್ದ ಪಾತ್ರೆಗಳು ಅಲುಗಾಡಿವೆ.‌

 

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

20 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

20 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

20 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

21 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

21 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago