Featured

ಕೊಡಗು ಮೂಲದ ಎಂ.ಎ. ಗಣಪತಿ ರಾಷ್ಟ್ರೀಯ ಭದ್ರತಾ ಸಿಬ್ಬಂದಿಯ ಮಹಾ ನಿರ್ದೇಶಕರಾಗಿ ನೇಮಕ -Vishwanews24

ಕೊಡಗು ಮೂಲದ ಐಪಿಎಸ್ ಅಧಿಕಾರಿ ಎಂ.ಎ. ಗಣಪತಿ ರಾಷ್ಟ್ರೀಯ ಭದ್ರತಾ ಸಿಬ್ಬಂದಿಯ ಮಹಾನಿರ್ದೇಶಕರಾಗಿ ನೇಮಕ -Vishwanews24

ನವದೆಹಲಿ: ಕರ್ನಾಟಕದ ಕೊಡಗು ಮೂಲದ ಹಿರಿಯ ಐಪಿಎಸ್ ಅಧಿಕಾರಿ ಎಂ ಎ ಗಣಪತಿ ಅವರನ್ನು ರಾಷ್ಟ್ರೀಯ ಭದ್ರತಾ ಸಿಬ್ಬಂದಿಯ (ಎನ್‌ಎಸ್‌ಜಿ) ಮಹಾನಿರ್ದೇಶಕರಾಗಿ ನೇಮಕ ಮಾಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕ್ಯಾಬಿನೆಟ್ ನೇಮಕಾತಿ ಸಮಿತಿಯು ಗಣಪತಿ ಅವರ ನೇಮಕಾತಿಗೆ ಅನುಮೋದನೆ ನೀಡಿದೆ ಎಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ) ಮಂಗಳವಾರ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ :ಇನ್ನು ಮುಂದೆ ಎಂದೂ ಚುನಾವಣೆಗೆ ನಿಲ್ಲಲ್ಲ , ರಾಜಕೀಯದಿಂದ ನಿವೃತ್ತಿಯಾಗುತ್ತೇನೆ : ಕಣ್ಣೀರಿಟ್ಟ ಶಾಸಕ ಸಾ.ರಾ. ಮಹೇಶ್ -Vishwanews24

ಇದೇವೇಳೆ, ಪಶ್ಚಿಮ ಬಂಗಾಳದ ಕೇಡರ್‌ನ 1986 ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ಕುಲದೀಪ್ ಸಿಂಗ್ ಅವರನ್ನು ಸಿಆರ್‌ಪಿಎಫ್ ಮಹಾನಿರ್ದೇಶಕರಾಗಿ ಕ್ಯಾಬಿನೆಟ್ ನೇಮಕಾತಿ ಸಮಿತಿಯು ನೇಮಕ ಮಾಡಿದೆ. ಪ್ರಸ್ತುತ ಅವರು ಸಿಆರ್‌ಪಿಎಫ್‌ನ ವಿಶೇಷ ಡಿಜಿ ಆಗಿದ್ದಾರೆ.

ಎನ್‌ಎಸ್‌ಜಿ ಮಹಾನಿರ್ದೇಶಕರಾಗಿ ನೇಮಕವಾಗಿರುವ ಗಣಪತಿ ಅವರು ಪ್ರಸ್ತುತ, ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ಸೆಕ್ಯುರಿಟಿಯ ಮಹಾನಿರ್ದೇಶಕರಾಗಿದ್ದಾರೆ.

57 ವರ್ಷದ 1986 ರ ಐಪಿಎಸ್‌ ಬ್ಯಾಚ್‌ನ ಅಧಿಕಾರಿಯಾಗಿರುವ ಗಣಪತಿ, ಕರ್ನಾಟಕದ ಕೊಡಗು ಮೂಲದವರಾಗಿದ್ದಾರೆ. ಉತ್ತರಾಖಂಡದಲ್ಲಿ ಪೊಲೀಸ್ ಮಹಾನಿರ್ದೇಶಕರಾಗಿಯೂ ಸಹ ಸೇವೆ ಸಲ್ಲಿಸಿದ್ದಾರೆ.

ಇದನ್ನೂ ಓದಿ :ಕಾಪು : ಮಾರ್ಚ್ 23 ಸುಗ್ಗಿ ಮಾರಿಪೂಜೆಯಂದು ಶಿಲಾಸೇವೆ ಸಮರ್ಪಣಾ ಸಮಾರಂಭ: ಕೆ ವಾಸುದೇವ ಶೆಟ್ಟಿ -Vishwanews24

ಈ ಹಿಂದೆ ಅವರು ಗೃಹ ಸಚಿವಾಲಯದಲ್ಲಿ (ಎಂಎಚ್‌ಎ) ಆಂತರಿಕ ಭದ್ರತೆ ಮತ್ತು ಎಡಪಂಥೀಯ ಉಗ್ರವಾದದಂತಹ ಚಟುವಟಿಕೆಗಳನ್ನು ಹತ್ತಿಕ್ಕುವ ಕಾರ್ಯಗಳನ್ನು ನಿರ್ವಹಿಸಿದ್ದಾರೆ. ಜೊತೆಗೆ, ಗೃಹ ಸಚಿವಾಲಯದ ವಕ್ತಾರರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಿಂದ (ಜೆಎನ್‌ಯು) ಸ್ನಾತಕೋತ್ತರ ಪದವಿ ಪಡೆದ ನಂತರ 1986 ರಲ್ಲಿ ಉತ್ತರಪ್ರದೇಶದಲ್ಲಿ ಐಪಿಎಸ್‌ಗೆ ಸೇರಿದರು. ಉತ್ತರ ಪ್ರದೇಶ ವಿಭಜನೆಯ ನಂತರ ಅವರನ್ನು ಉತ್ತರಾಖಂಡ ಕೇಡರ್‌ಗೆ ವರ್ಗಾಯಿಸಲಾಯಿತು.

ಗಣಪತಿ ಅವರು ಐಪಿಎಸ್ ಅಧಿಕಾರಿಯಾಗಿ 30 ವರ್ಷಗಳ ತಮ್ಮ ಸುದೀರ್ಘ ಸೇವಾವಧಿಯಲ್ಲಿ, ಮೊರಾದಾಬಾದ್ ನಗರ, ಸೋನೆಭದ್ರ ಮತ್ತು ಹಾರ್ಡೊಯ್‌ನಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ, ನೈನಿತಾಲ್, ಮೀರತ್ ಮತ್ತು ಕಾನ್ಪುರದಲ್ಲಿ ಹಿರಿಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.

ಇದನ್ನೂ ಓದಿ : ಕೋವಿಡ್ 2ನೇ ಅಲೆ : ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ವಹಿಸಬೇಡಿ, ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿ, ಲಸಿಕೆ ಹಾಕಿಸಿಕೊಳ್ಳಿ : ಪ್ರಧಾನಿ ಮೋದಿ -Vishwanews24

Vishwa News 24

Recent Posts

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

20 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

20 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

20 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

23 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

23 hours ago

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…

23 hours ago