Featured

ಕೊಡಗು: SSLC ವಿದ್ಯಾರ್ಥಿನಿಯ ತಲೆ ಕತ್ತರಿಸಿ ಭೀಕರ ಕೊಲೆ , ರುಂಡ-ಮುಂಡ ಬೇರ್ಪಡಿಸಿ ವಿಕೃತಿ  – Vishwanews24

ಕೊಡಗು: SSLC ವಿದ್ಯಾರ್ಥಿನಿಯ ತಲೆ ಕತ್ತರಿಸಿ ಭೀಕರ ಕೊಲೆ , ರುಂಡ-ಮುಂಡ ಬೇರ್ಪಡಿಸಿ ವಿಕೃತಿ

ಕೊಡಗು: ಎಸ್​ಎಸ್​ಎಲ್​​ಸಿ ಫಲಿತಾಂಶ ಪ್ರಕಟಗೊಂಡಿದೆ. ಎಸ್​ಎಸ್​ಎಲ್​​ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿ ಗ್ರಾಮಕ್ಕೆ ಕೀರ್ತಿ ತಂದಿದ್ದ ವಿದ್ಯಾರ್ಥಿನಿಯ ತಲೆ ಕಡಿದು ಭೀಕರವಾಗಿ ಕೊಲೆ ಮಾಡಲಾಗಿದೆ. ಕೊಡಗಿನ ಸೋಮವಾರಪೇಟೆಯ ಸೂರ್ಲಬ್ಬಿ ಗ್ರಮಾದಲ್ಲಿ ಘಟನೆ ನಡೆದಿದೆ. ಓಂಕಾರಾಪ್ಪ ಕೊಲೆ ಆರೋಪಿ. ಮೀನಾ ಮೃತ ವಿದ್ಯಾರ್ಥಿನಿ.

ಮೀನಾ ಸೂರ್ಲಬ್ಬಿ ಸರ್ಕಾರಿ ಪ್ರೌಢಶಾಲೆಯಲ್ಲಿ 2023-24ನೇ ಸಾಲಿನಲ್ಲಿ ವ್ಯಾಸಾಂಗ ಮಾಡುತ್ತಿದ್ದಳು. ಗುರುವಾರ ಎಸ್ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಮೀನಾ ಉತ್ತಮ ಅಂಕ ಪಡೆದು ಪಾಸಾಗಿದ್ದಳು. ​ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಪಾಸಾದ ಖುಷಿಯಲ್ಲಿ ಮೀನಾ ಮತ್ತು ಆಕೆಯ ಪೋಷಕರು ಇದ್ದರು. ಆದರೆ ಈ ಖುಷಿ ಹೆಚ್ಚು ಹೊತ್ತು ಇರಲಿಲ್ಲ.

ಸೂರ್ಯ ಮುಳುಗುತ್ತಿದ್ದ ಹಾಗೇ ವಿದ್ಯಾರ್ಥಿನಿಯ ಜೀವ ಕೂಡ ಅಂತ್ಯವಾಗಿದೆ. ಆರೋಪಿ ಓಂಕಾರಪ್ಪ ಸಾಯಂಕಾಲ ಸಮಯದಲ್ಲಿ ಮೀನಾಳನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ, ಮಚ್ಚಿನಿಂದ ವಿದ್ಯಾರ್ಥಿನಿಯ ತಲೆ ಕತ್ತರಿಸಿ ರುಂಡ-ಮುಂಡ ಬೇರ್ಪಡಿಸಿ ವಿಕೃತಿ ಮೆರೆದಿದ್ದಾನೆ.

ಓಂಕಾರಪ್ಪನೊಂದಿಗೆ ಮೀನಾಳ ನಿಶ್ಚಿತಾರ್ಥ ನಿನ್ನೆ ಫಿಕ್ಸ್​ ಮಾಡಲಾಗಿತ್ತು. ಈ ವಿಚಾರ ತಿಳಿದ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ನಿಶ್ಚಿತಾರ್ಥ ನಿಲ್ಲಿಸಿದ್ದಾರೆ. ಬಳಿಕ ಎರಡೂ ಕುಟುಂಬದವರು ತಮ್ಮ ತಮ್ಮ ಮನೆಗೆ ತೆರಳಿದ್ದಾರೆ. ಆರೋಪಿ ಕೂಡ ಮನೆಗೆ ವಾಪಸ್​ ಆಗಿದ್ದನಂತೆ. ಇದೇ ಸಿಟ್ಟಿನಲ್ಲಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ.

ಕೊಲೆ ನಡೆದ ಸ್ಥಳಕ್ಕೆ ಶ್ವಾನ ದಳ, ವಿಧಿ ವಿಜ್ಞಾನ ತಂಡ‌ ಭೇಟಿ ನೀಡಿದೆ. ಹಾಗೂ ಕೊಡಗು ಹೆಚ್ಚುವರಿ ಎಸ್ಪಿ ಸುಂದರ್ ರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳದಿಂದ‌ ಅನತಿ ದೂರದಲ್ಲಿ ಮಚ್ಚು ಪತ್ತೆಯಾಗಿದೆ. ಪೊಲೀಸರು ಆರೋಪಿಗಾಗಿ ತಿವ್ರ ಶೋಧ ನಡೆಸುತ್ತಿದ್ದಾರೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

16 minutes ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

2 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

2 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

2 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

3 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

3 hours ago