Featured

ಕೊಡೈಕನಲ್ ಪ್ರವಾಸಕ್ಕೆ ತೆರಳಿದ್ದ ಯುವಕ ರೈಲಿನಡಿಗೆ ಬಿದ್ದು ಸಾವು

ಬೆಳ್ಮಣ್‌: ಕೊಡೈಕನಾಲ್‌ಪ್ರವಾಸ ಮುಗಿಸಿ ರೈಲಿನಲ್ಲಿ ಮಂಗಳವಾರ ಮುಂಜಾನೆ ವಾಪಸಾಗುತ್ತಿದ್ದ ಯುವಕರ ತಂಡದಲ್ಲಿದ್ದ ಮುಂಡ್ಕೂರಿನ ಶೈಲೇಶ್‌ ರಾವ್‌ (25) ಅವರು ವಡಗರ ರೈಲು ನಿಲ್ದಾಣದಲ್ಲಿ ಅಪಘಾತಕ್ಕೀಡಾಗಿ ಸಾವಿಗೀಡಾಗಿದ್ದಾರೆ.

ದುಬೈನಿಂದ ಇತ್ತಿಚೆಗಷ್ಟೇ ಬಂದಿದ್ದ ಶೈಲೇಶ್ ರಾವ್ ತನ್ನ ಕಾಲೇಜಿನ ಮೂವರು ಮಿತ್ರರ ಜತೆ ಕೊಡೈಕನಲ್‌ಗೆ ಪ್ರವಾಸಕ್ಕೆ ತೆರಳಿದ್ದರು. ಕೊಡೈಕನಲ್‌ನಿಂದ ಕೇರಳ ಮೂಲಕ ರೈಲಿನಲ್ಲಿ ವಾಪಾಸಾಗುತ್ತಿದ್ದಾಗ ಮಂಗಳವಾರ ಮುಂಜಾನೆ 2.30ರ ಸುಮಾರಿಗೆ ಬಡಾಗರ್ ಸ್ಟೇಷನ್‌ನಲ್ಲಿ ಕುಡಿಯುವ ನೀರಿಗಾಗಿ ಶೈಲೇಶ್ ರೈಲಿನಿಂದ ಇಳಿದಿದ್ದಾರೆ. ಈ ಸಂದರ್ಭ ರೈಲು ಬಿಟ್ಟಿತೆಂಬ ಅವಸರದಲ್ಲಿ ಹತ್ತಲು ಪ್ರಯತ್ನಿಸಿ ಆಯ ತಪ್ಪಿ ರೈಲಿನಡಿಗೆ ಸಿಕ್ಕಿ ಮೃತ ಪಟ್ಟಿದ್ದಾರೆ ಎಂದು ಅಲ್ಲಿನ ಪೊಲೀಸರು ತಿಳಿಸಿದ್ದಾರೆ.

ಮುಂಡ್ಕೂರಿನ ಕಂಗುಳಿಯ ಪಾಕ ಶಾಸ್ತ್ರಜ್ಞ ಯೋಗೀಶ್‌ ಭಟ್‌ ಹಾಗೂ ರೇಖಾ ರಾವ್‌ ದಂಪತಿ ಪುತ್ರನಾದ ಶೈಲೇಶ್‌ ಅವರು ನಿಟ್ಟೆ  ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಸಿವಿಲ್‌ ಡಿಪ್ಲೊಮಾ ಪಡೆದು ಮೂರು ವರ್ಷಗಳಿಂದ ದುಬಾೖಯಲ್ಲಿ ಉದ್ಯೋಗದಲ್ಲಿದ್ದರು. 15 ದಿನಗಳ ಹಿಂದೆ ಊರಿಗೆ ಬಂದಿದ್ದ ಅವರು ಎರಡು ವಾರ ಕಳೆದು ವಾಪಸ್‌ ಹೋಗುವವರಿದ್ದರು.

ಶೈಲೇಶ್‌ ಮತ್ತು ಮಿತ್ರರಿದ್ದ ರೈಲು ಮಂಗಳವಾರ ಬೆಳಗ್ಗೆ 7ರ ಹೊತ್ತಿಗೆ ಮಂಗಳೂರು ತಲುಪಿದಾಗಲಷ್ಟೇ ಉಳಿದವರಿಗೆ ಶೈಲೇಶ್‌ ರೈಲಿನಲ್ಲಿರದ ಬಗ್ಗೆ ತಿಳಿಯಿತು. ಕೂಡಲೇ ಆತನ ಮೊಬೈಲಿಗೆ ಕರೆ ಮಾಡಿದಾಗ ವಡಗರ ಸ್ಟೇಷನ್‌ನ ಪೊಲೀಸರು  ಕರೆ ಸ್ವೀಕರಿಸಿ ಅಪಘಾತದ ಬಗ್ಗೆ ಮಾಹಿತಿ ನೀಡಿದರು.

vishwanews24
Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

11 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

11 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

11 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

12 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

12 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

14 hours ago