Featured

ಕೊಣಾಜೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ; ಅದೃಷ್ಟವಶಾತ್ ತಪ್ಪಿದ ಭಾರಿ ದುರಂತ – vishwanews24

ಕೊಣಾಜೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ; ಅದೃಷ್ಟವಶಾತ್ ತಪ್ಪಿದ ಭಾರಿ ದುರಂತ

ಕೊಣಾಜೆ  : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾಗಿ ರಸ್ತೆ ಬದಿಯ ಟ್ರಾನ್ಸ್‌ಫಾರ್ಮರ್ ಕಂಬಕ್ಕೆ ಒರಗಿ ನಿಂತ ಭೀಕರ ಘಟನೆ ಗುರುವಾರ ಬೆಳಿಗ್ಗೆ ಪನೀರು ಚರ್ಚ್ ಬಳಿಯ ತಿರುವಿನಲ್ಲಿ ಸಂಭವಿಸಿದೆ. ದೇರಳಕಟ್ಟೆಯ ಖಾಸಗಿ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಯೊಬ್ಬರು ಈ ಅಪಘಾತದಿಂದ ಅದೃಷ್ಟವಶಾತ್ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸದರಿ ವಿದ್ಯಾರ್ಥಿಯು ತಮ್ಮ ಮಾರುತಿ ಸ್ವಿಫ್ಟ್ ಕಾರಿನಲ್ಲಿ ದೇರಳಕಟ್ಟೆಯಿಂದ ಪನೀರ್ ರಸ್ತೆಯ ಮಾರ್ಗವಾಗಿ ಬೀರಿ ಕಡೆಗೆ ಸಂಚರಿಸುತ್ತಿದ್ದರು. ಈ ವೇಳೆ ಪನೀರು ಚರ್ಚ್ ಸಮೀಪವಿರುವ ಅಪಾಯಕಾರಿ ತಿರುವಿನಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ದಿಢೀರ್ ಪಲ್ಟಿಯಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು ರಸ್ತೆ ಬದಿಯಲ್ಲಿದ್ದ ವಿದ್ಯುತ್ ಟ್ರಾನ್ಸ್‌ಫಾರ್ಮರ್‌ ಕಂಬಕ್ಕೆ ಒರಗಿ ನಿಂತಿದೆ. ಘಟನೆಯ ರಭಸಕ್ಕೆ ಕಾರಿಗೆ ಹಾನಿಯಾಗಿದೆಯಾದರೂ, ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಭಾರಿ ದುರಂತವೊಂದು ತಪ್ಪಿದಂತಾಗಿದೆ.

ಘಟನಾ ಸ್ಥಳಕ್ಕೆ ಮೆಸ್ಕಾಂ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವಿದ್ಯುತ್ ಅವಘಡ ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ.

Vishwa News 24

Recent Posts

‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿಯನ್ನು ಕರ್ನಾಟಕದ ಜನತೆಗೆ ಅರ್ಪಿಸಿದ ಹಿರಿಯ ನಟ ಅನಂತ್ ನಾಗ್ – vishwanews24

'ದಾದಾಸಾಹೇಬ್ ಫಾಲ್ಕೆ' ಪ್ರಶಸ್ತಿಯನ್ನು ಕರ್ನಾಟಕದ ಜನತೆಗೆ ಅರ್ಪಿಸಿದ ಹಿರಿಯ ನಟ ಅನಂತ್ ನಾಗ್ ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ನೀಡಿದ ಅಪಾರ…

3 minutes ago

ಮಂಗಳೂರು : ಜೈಲಿನಲ್ಲಿ ಗಲಾಟೆ ;ಅಡುಗೆಮನೆ ಸ್ಫೋಟಿಸುವುದಾಗಿ ಕೈದಿ ಬೆದರಿಕೆ – vishwanews24

ಮಂಗಳೂರು : ಜೈಲಿನಲ್ಲಿ ಗಲಾಟೆ ;ಅಡುಗೆಮನೆ ಸ್ಫೋಟಿಸುವುದಾಗಿ ಕೈದಿ ಬೆದರಿಕೆ ಮಂಗಳೂರು,: ಜೈಲು ಅಡುಗೆಮನೆಯ ಗೇಟಿಗೆ ಬೀಗ ಹಾಕಿದ ಬಳಿಕ…

38 minutes ago

ಬೆಳ್ತಂಗಡಿ: ಗಡಾಯಿಕಲ್ಲು ಚಾರಣಕ್ಕೆ ಮುಕ್ತ ; ದಿನಕ್ಕೆ 500 ಪ್ರವಾಸಿಗರಿಗೆ ಮಾತ್ರ ಅವಕಾಶ  – vishwanews24

ಬೆಳ್ತಂಗಡಿ: ಗಡಾಯಿಕಲ್ಲು ಚಾರಣಕ್ಕೆ ಮುಕ್ತ ; ದಿನಕ್ಕೆ  500 ಪ್ರವಾಸಿಗರಿಗೆ ಮಾತ್ರ ಅವಕಾಶ  ಬೆಳ್ತಂಗಡಿ: ತಾಲೂಕಿನ ಗಡಾಯಿಕಲ್ಲು ಚಾರಣ ತಾಣವು ಸೆ.…

49 minutes ago

ಕುಂದಾಪುರ: ಮೀನುಗಾರರ ಹಿತ ಕಾಯಲು ಸರಕಾರ ಬದ್ಧ: ಸಚಿವ ಬಸವಂತಪ್ಪ – vishwanews24

ಕುಂದಾಪುರ: ಮೀನುಗಾರರ ಹಿತ ಕಾಯಲು ಸರಕಾರ ಬದ್ಧ: ಸಚಿವ ಬಸವಂತಪ್ಪ ಕುಂದಾಪುರ: ಮೀನುಗಾರಿಕೆ ವಲಯದ ಜ್ವಲಂತ ಸಮಸ್ಯೆಗಳ ಕುರಿತು ಅರಿಯಲು,…

1 hour ago

ಬೆಂಗಳೂರು:  ಯುವತಿಯ ಕಿಡ್ನಾಪ್​ಗೆ ಯತ್ನ ; ಸ್ಥಳೀಯರಿಂದ ರಕ್ಷಣೆ – vishwanews24

ಬೆಂಗಳೂರು: ಯುವತಿಯ ಅಪಹರಣ ಯತ್ನದಲ್ಲಿ ಸರಣಿ ಅಪಘಾತ.. 35ಕ್ಕೂ ಹೆಚ್ಚು ವಾಹನಗಳಿಗೆ ಕಾರು ಡಿಕ್ಕಿ .. ಮೂವರು ಆರೋಪಿಗಳು ಪೊಲೀಸರ…

1 hour ago

ಮಂಗಳೂರಿನ ಸಚಿವ ಸಂಪುಟ ಸಭೆಯಲ್ಲಿ ಉಡುಪಿಯ ಜಿಲ್ಲಾಸ್ಪತ್ರೆಯ ಲೋಕಾರ್ಪಣೆಗೆ ಅಗತ್ಯ ನಿರ್ಣಯ ಕೈಗೊಳ್ಳುವಂತೆ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ – vishwanews24

ಮಂಗಳೂರಿನ ಸಚಿವ ಸಂಪುಟ ಸಭೆಯಲ್ಲಿ ಉಡುಪಿಯ ಜಿಲ್ಲಾಸ್ಪತ್ರೆಯ ಲೋಕಾರ್ಪಣೆಗೆ ಅಗತ್ಯ ನಿರ್ಣಯ ಕೈಗೊಳ್ಳುವಂತೆ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ…

2 hours ago