ಕೊಣಾಜೆ : ದ್ವಿಚಕ್ರ ವಾಹನಕ್ಕೆ ಪಿಕಪ್‌ ಢಿಕ್ಕಿ ಪ್ರಕರಣ ; ಇಬ್ಬರು ಸವಾರರು ಮೃತ್ಯು – vishwanews24

Featured, ದಕ್ಷಿಣ ಕನ್ನಡ

ಕೊಣಾಜೆ : ದ್ವಿಚಕ್ರ ವಾಹನಕ್ಕೆ ಪಿಕಪ್‌ ಢಿಕ್ಕಿ ಪ್ರಕರಣ ; ಇಬ್ಬರು ಸವಾರರು ಮೃತ್ಯು

ಕೊಣಾಜೆ: ಬೋಳಿಯಾ‌ರ್ ಸಮೀಪದ ಕುರ್ನಾಡು ಪೆಟ್ರೋಲ್ ಪಂಪ್ ಬಳಿ ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ಬಂದ ಪಿಕಪ್ ಢಿಕ್ಕಿ ಹೊಡೆದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರ ಗಾಯಗೊಂಡಿದ್ದ ಸಹಸವಾರ ಮೃತಪಟ್ಟ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ.

ಮೃತಪಟ್ಟ ಯುವಕರನ್ನು ಕಿನ್ಯ ಅರೆಬಿನಗರದ ಮಹಮ್ಮದ್ ಅರ್ಫಾಝ್ (22) ಹಾಗೂ ಕಿನ್ಯ ಉಕ್ಕುಡ ನಿವಾಸಿ ಜುನೈದ್ (23) ಎಂದು ಗುರುತಿಸಲಾಗಿದೆ.

ಮಂಗಳೂರು: ಕೆಮಿಕಲ್ ಹೋಲ್ಡರ್ ಡೆಲಿವರಿ ನೆಪದಲ್ಲಿ ಅಪರಿಚಿತರಿಂದ ₹1.18 ರೂ. ಲಕ್ಷ ವಂಚನೆ – vishwanews24

ಸೋಮವಾರ ಸಂಜೆ ಬೋಳಿಯಾರ್ ಕಡೆಯಿಂದ ಮುಡಿಪು ಕಡೆಗೆ ಸಂಚರಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಬಂದ ಪಿಕಪ್ ವಾಹನವು ಕುರ್ನಾಡು ಪಡೀಲ್ ಪೆಟ್ರೋಲ್ ಪಂಪ್ ಬಳಿ ಢಿಕ್ಕಿ ಹೊಡೆದಿದೆ. ಮೃತ ಜುನೈದ್ ಕಲ್ಲಾಪು ಮಾರುಕಟ್ಟೆಯಲ್ಲಿ ಕೆಲಸ ಮಾಡುತ್ತಿದ್ದರೆ, ಅರ್ಫಾಝ್ ಮುಂಬೈಯಲ್ಲಿ ಕೆಲಸದಲ್ಲಿದ್ದು ಇತ್ತೀಚಿಗೆ ಊರಿಗೆ ಬಂದಿದ್ದ ಎನ್ನಲಾಗಿದೆ.

ಅಪಘಾತ ನಡೆದ ತಕ್ಷಣವೇ ಪಿಕಪ್ ಚಾಲಕ ಡೋ‌ರ್ ತೆಗೆದು ಪರಾರಿಯಾಗಿದ್ದು, ಘಟನೆಯ ದೃಶ್ಯಗಳು ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಉಡುಪಿ- ಉಚ್ಚಿಲ ದಸರಾ ಶೋಭಾಯಾತ್ರೆ : ವಾಹನ ಸಂಚಾರಕ್ಕೆ ಬದಲಿ ಮಾರ್ಗ – vishwanews24

Leave a Reply