ಕೊಣಾಜೆ: ಮುಡಿಪು ಸಮೀಪದ ಬೋಳಿಯಾರು ಬಳಿ ರವಿವಾರ ರಾತ್ರಿ ನಡೆದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಕೊಣಾಜೆ ಠಾಣಾ ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದುಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ. ಅಲ್ಲದೆ ಘಟನೆಗೆ ಸಂಬಂಧಿಸಿದಂತೆ ಸಿಸಿ ಟಿವಿ ಫೂಟೇಜ್ ನ್ನು ಪೊಲೀಸರು ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆ ವಿವರ: ಕೇಂದ್ರದಲ್ಲಿ ಎನ್.ಡಿ.ಎ. ಸರಕಾರ ಅಸ್ತಿತ್ವಕ್ಕೆ ಬಂದ ಹಿನ್ನೆಲೆಯಲ್ಲಿ ಬಿಜೆಪಿ ವತಿಯಿಂದ ರವಿವಾರ ರಾತ್ರಿ ಬೋಳಿಯಾರ್ ನಲ್ಲಿ ವಿಜಯೋತ್ಸವ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಮೆರವಣಿಗೆಯ ಬಳಿಕ ಬೋಳಿಯಾರ್ ಬಾರ್ ಮುಂಭಾಗದಲ್ಲಿ ತಂಡವೊಂದು ಮೂವರು ಬಿಜೆಪಿ ಕಾರ್ಯಕರ್ತರನ್ನು ಅಡ್ಡಗಟ್ಟಿ ಚೂರಿಯಿಂದ ಇರಿದು ಪರಾರಿಯಾಗಿದೆ ಎನ್ನಲಾಗಿದೆ. ಹಲ್ಲೆಗೊಳಗಾದ ಹರೀಶ್ ನಂದಕುಮಾರ್ ಹಾಗೂ ಕೃಷ್ಣ ಕುಮಾರ್ ಎಂಬವರು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಕೊಣಾಜೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…