Featured

ಕೊಣಾಜೆ: ಮಾದಕ ವಸ್ತು ಎಂಡಿಎಂಎ ಮಾರಾಟ- ಮೂವರ ಬಂಧನ  ; ಒಂದೂವರೆ ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶ – vishwanews24

ಕೊಣಾಜೆ: ಮಾದಕ ವಸ್ತು ಎಂಡಿಎಂಎ ಮಾರಾಟ- ಮೂವರ ಬಂಧನ  ; ಒಂದೂವರೆ ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶ

ಕೊಣಾಜೆ: ಪಜೀರು ಗ್ರಾಮದ ಕಂಬಳಪದವು ಬಳಿ ನಿಷೇಧಿತ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಎಸಿಪಿ ಧನ್ಯಾ ನಾಯಕ್ ನೇತೃತ್ವದ ಆ್ಯಂಟಿ ಡ್ರಗ್ ಟೀಮ್ ಕಾರ್ಯಾಚರಣೆ ನಡೆಸಿ ಬಂಧಿಸಿದೆ. ಬಂಧಿತರಿಂದ ಸುಮಾರು ಒಂದೂವರೆ ಲಕ್ಷ ರೂ. ಮೌಲ್ಯದ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಲಪಾಡಿಯ ಮರಿಯ ಚರ್ಚ್ ಕಂಪೌಂಡ್ ನಿವಾಸಿ ಗೌತಮ್(22), ಕುಂಪಲ ಹನುಮಾನ್ ದೇವಸ್ಥಾನ ಬಳಿಯ ನಿವಾಸಿ ಕಾರ್ತಿಕ್(27), ತೊಕ್ಕೊಟ್ಟು ಗಣೇಶ ನಗರದ ಗಣೇಶ ಮಂದಿರದ ಬಳಿ ನಿವಾಸಿ ನಿಖಿಲ್(28) ಬಂಧಿತ ಆರೋಪಿಗಳು.

ಕೊಣಾಜೆ ಠಾಣಾ ವ್ಯಾಪ್ತಿಯ ಪಜೀರಿನ ಕೈಗಾರಿಕಾ ನಿರ್ಜನ ಪ್ರದೇಶದಲ್ಲಿ ಸೋಮವಾರ ಆರೋಪಿಗಳು ಕಾರಿನಲ್ಲಿ ಎಂಡಿಎಂಎ ಪದಾರ್ಥ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದಾರೆ.

ಬಂಧಿತರಿಂದ 1.50,000 ರೂ. ಅಂದಾಜು ಮೌಲ್ಯದ 50 ಗ್ರಾಂ ತೂಕದ ಎಂಡಿಎಂಎ ಮಾದಕ ವಸ್ತು ಹಾಗೂ ಮಾರಾಟ ಮಾಡಲು ಬಳಸಿದ ಕಾರು ಮತ್ತು 3 ಮೊಬೈಲ್ ಫೋನ್ ಗಳು, ಡಿಜಿಟಲ್ ತೂಕ ಮಾಪನ ಹಾಗೂ ಗಾಜಿನ ನಳಿಕೆಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಅವುಗಳ ಒಟ್ಟು ಮೌಲ್ಯ 7,76,980 ರೂ. ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಮಾರ್ಗದರ್ಶನ, ಡಿಸಿಪಿಗಳಾದ ಸಿದ್ಧಾರ್ಥ್ ಗೋಯಲ್, ದಿನೇಶ್ ಕುಮಾರ್ ನಿರ್ದೇಶನದಲ್ಲಿ ಮಂಗಳೂರು ದಕ್ಷಿಣ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತೆ ಧನ್ಯಾ ಎನ್. ನಾಯಕ್ ನೇತೃತ್ವದಲ್ಲಿ ಕೊಣಾಜೆ ಪೊಲೀಸ್ ಠಾಣೆಯ ನಿರೀಕ್ಷಕ ರಾಜೇಂದ್ರ ಬಿ., ಪಿಎಸ್ಸೈ ನಾಗರಾಜ ಎಸ್., ಮತ್ತು ಆ್ಯಂಟಿ ಡ್ರಗ್ ತಂಡದ ಪಿಎಸ್ಸೈ ಪುನೀತ್, ಸಿಬ್ಬಂದಿಯಾದ ಸಾಜು ನಾಯರ್, ಮಹೇಶ್, ರೇಜಿ, ಶಿವಕುಮಾರ್, ಅಕ್ಬರ್, ರೇಷ್ಮಾ, ರಾಮ ನಾಯಕ್ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

4 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

4 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

8 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

8 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

8 hours ago