ಮಂಗಳೂರು : ಯುವ ದಂತ ವೈದ್ಯೆಯೊಬ್ಬರು ಹಠತ್ತಾಗಿ ಸಾವನ್ನಪ್ಪಿದ ಘಟನೆ ಮಂಗಳೂರಿನ ಪಾಂಡೇಶ್ವರ ಪಿಜಿಯಲ್ಲಿ ನಡೆದಿದೆ. ಡಾ. ಸ್ವಾತಿ ಶೆಟ್ಟಿ (24) ಮೃತರಾದ ವೈದ್ಯೆಯಾಗಿದ್ದಾರೆ.
ನಗರದ ಎ.ಜೆ. ಆಸ್ಪತ್ರೆಯಲ್ಲಿ ದಂತ ವೈದ್ಯಕೀಯ ಪದವಿ ಪೂರೈಸಿದ್ದ ಸ್ವಾತಿ ಇಂದು(ಮಂಗಳವಾರದಿಂದ) ನಗರದ ಪಾಂಡೇಶ್ವರದ ಕ್ಲಿನಿಕ್ ಒಂದರಲ್ಲಿ ವೈದ್ಯಕೀಯ ವೃತ್ತಿ ಆರಂಭಿಸಲಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಭಾನುವಾರ ತನಕ ಆಳ್ವರಬೆಟ್ಟು ಮನೆಯಲ್ಲಿ ತಂಗಿದ್ದ ಸ್ವಾತಿ ಸೋಮವಾರ ಸಂಜೆ ಮನೆಯಿಂದ ಪಾಂಡೇಶ್ವರದ ಪಿಜಿಗೆ ಬಂದು ತಂಗಿದ್ದರು.
ರಾತ್ರಿ ತಾಯಿ ತಂದೆ ಜತೆಗೆ ಮೊಬೈಲ್ ನಲ್ಲಿ ಮಾತನಾಡಿ ಬಳಿಕ ವಿಪರೀತ ತಲೆನೋವು ಎಂದೇಳಿ ಜತೆಗೆ ನಾಳೆ ಮಾತನಾಡುತ್ತೇನೆ ಎಂದು ಹೇಳಿ ಫೋನ್ ಕರೆ ಕಟ್ ಮಾಡಿದ್ದರು. ಪಕ್ಕದ ಸಹಪಾಠಿ ಕೂಡ ತಲೆನೋವು ಇರೋದ್ರಿಂದ ತೊಂದರೆ ಕೊಡೋದು ಬೇಡ ಎಂದು ಎಚ್ಚರಿಸಲಿಲ್ಲ ಎನ್ನಲಾಗಿದೆ. ಬೆಳಗ್ಗೆ ದೇಹ ತಣ್ಣಗಾಗಿದ್ದನ್ನು ಕಂಡು ಪಿಜಿ ಸೂಪರ್ ವೈಸರ್ ಮಾಹಿತಿ ನೀಡಿ ತಕ್ಷಣ ಆಂಬ್ಯುಲೆನ್ಸ್ ತರಿಸಿ ವೆನ್ ಲಾಕ್ ಗೆ ದಾಖಲಿಸುವಷ್ಟರಲ್ಲಿ ಸ್ವಾತಿಯ ಪ್ರಾಣಪಕ್ಷಿ ಹಾರಿಹೋಗಿತ್ತು.
ಅವಿವಾಹಿತೆಯಾಗಿರುವ ಸ್ವಾತಿ ಶೆಟ್ಟಿ ಅವರಿಗೆ ಪೋಷಕರು ಈ ವರ್ಷಾಂತ್ಯದೊಳಗೆ ಮದುವೆ ಮಾಡುವ ತಯಾರಿ ನಡೆಸಿದ್ದರು. ಅಪರೂಪಕ್ಕೊಮ್ಮೆ ತಲೆನೋವು ಬಿಟ್ರೆ ಬೇರೆ ಯಾವುದೇ ತೊಂದರೆ ಇರಲಿಲ್ಲ ಎನ್ನಲಾಗಿದೆ.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…