Featured

ಕೊಣಾಜೆ: ಲಾರಿ ಹಾಗೂ ಬೈಕ್ ಅಪಘಾತ ; ಸವಾರ ಮೃತ್ಯು – vishwanews24

ಕೊಣಾಜೆ: ಲಾರಿ ಹಾಗೂ ಬೈಕ್  ಅಪಘಾತ ; ಸವಾರ ಮೃತ್ಯು

ಕೊಣಾಜೆ: ಅಸೈಗೋಳಿ ಬಳಿಯ ತಿಪ್ಲಪದವು ಎಂಬಲ್ಲಿ ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡ ಬೈಕ್ ಸವಾರ ಮೃತಪಟ್ಟ ಘಟನೆ ಸೋಮವಾರ ಮಧ್ಯಾಹ್ನ ಸಂಭವಿಸಿದೆ.

ಮೃತ ಬೈಕ್ ಸವಾರನನ್ನು ದೇರಳಕಟ್ಟೆ ನಿವಾಸಿ ಜಲೀಲ್ ಮೆಡಿಕಲ್ ಎಂಬವರ ಪುತ್ರ ಅವ್ಸಾಫ್ (25) ಎಂದು ಗುರುತಿಸಲಾಗಿದೆ.

ತಿಪ್ಲಪದವು ಗ್ಯಾರೇಜ್ ಬಳಿಯಿಂದ ರಸ್ತೆಯಲ್ಲಿ ಲಾರಿ ಯುಟರ್ನ್ ಹೊಡೆಯುತ್ತಿದ್ದಾಗ ಅಸೈಗೋಳಿ ಕಡೆಯಿಂದ ಬರುತ್ತಿದ್ದ ಬೈಕ್ ನಡುವೆ ಢಿಕ್ಕಿ ಸಂಭವಿಸಿದೆ ಎಂದು ತಿಳಿದು ಬಂದಿದೆ. ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಾಗಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಇಲ್ಲಿನ ಠಾಣೆ ಪೊಲೀಸರು ಆಗಮಿಸಿದ್ದು, ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

22 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

22 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

22 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

1 day ago