ಕೊಲ್ಕತ್ತಾ: ಕೊನೆಗೂ ನನ್ನ ಹೋರಾಟಕ್ಕೆ ಜಯ ಸಿಕ್ಕಿದೆ, ರಾತ್ರೋ ರಾತ್ರಿ ತಲಾಖ್ ಹೇಳಿಬಿಡುತ್ತಾರೆ ಎಂಬ ಭಯ ಈಗಿಲ್ಲ ಎಂದು ಇಶ್ರತ್ ಜಹಾನ್ ಹೇಳಿದ್ದಾರೆ.
ತ್ರಿವಳಿ ತಲಾಖ್ ವಿರೋಧಿಸಿ ಸುಪ್ರೀಂಕೋರ್ಟ್ ನಲ್ಲಿ ಇಶ್ರತ್ ಜಹಾನ್ ಅರ್ಜಿ ಸಲ್ಲಿಸಿದ್ದರು.ಇದು ತಮ್ಮ ಹೋರಾಟಕ್ಕೆ ಸಿಕ್ಕ ಜಯ ಎಂದು ಹೇಳಿಕೊಂಡಿದ್ದಾರೆ,
ಕೇಂದ್ರದ ನಿರ್ಧಾರಕ್ಕೆ ನಾನು ಅಭಿನಂದನೆ ಸಲ್ಲಿಸುತ್ತೇನೆ, ಇದು ಇತಿಹಾಸದಲ್ಲಿ ಬರೆದಿಡುವ ವಿಷಯವಾಗಿದೆ ಎಂದು ಹೇಳಿದ್ದಾರೆ. ಮುಸ್ಲಿಂ ಮಹಿಳೆಯರ ಜೀವನಕ್ಕೆ ಒಂದು ಗೌರವ ಸಿಕ್ಕಿದೆ, ಇದರಿಂದ ಹೊಸ ಅಧ್ಯಾಯ ಬರೆದಂತಾಗಿದೆ ಎಂದು ಹೇಳಿದ್ದಾರೆ.
ರಾಜ್ಯಸಭೆಯಲ್ಲಿ ತ್ರಿವಳಿ ತಲಾಖ್ ಮಸೂದೆಯನ್ನು ವಿರೋಧಿಸುವವರಿಗೆ ಈ ಪದ್ಧತಿಯಿಂದಾಗಿ ಬಲಿಪಶುಗಳಾಗುವವರ ಬಗ್ಗೆ ಅರಿವಿಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಜೀವನ ಎಷ್ಟು ಕಷ್ಟ ಎಂಬುದನ್ನು ನಾನು ಅನುಭವಿಸಿದ್ದೇನೆ ಎಂದು ತಿಳಿಸಿದ್ದಾರೆ.
ಕಳೆದ ವರ್ಷ ಇಶ್ರತ್ ಜಹಾನ್ ಬಿಜೆಪಿ ಸೇರಿದ್ದರು. ತಾವು ಸುಪ್ರಿಂಕೋರ್ಟ್ ಗೆ ಅರ್ಜಿ ಸಲ್ಲಿಸಿದ ಮೇಲೆ ನನ್ನ ಸುತ್ತಮುತ್ತಲಿನವರಿಂದ ನನಗೆ ಉತ್ತಮ ಆತಿಥ್ಯ ಸಿಕ್ಕಿದೆ ಎಂದು ತಿಳಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…