ಕೊಪ್ಪಲಂಗಡಿ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಪಿಕಪ್ ವಾಹನ – ಚಾಲಕ ಸೇರಿ ಇಬ್ಬರಿಗೆ ಗಾಯ : vishwanews24
ಕೊಪ್ಪಲಂಗಡಿ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಪಿಕಪ್ ವಾಹನ – ಚಾಲಕ ಸೇರಿ ಇಬ್ಬರಿಗೆ ಗಾಯ : vishwanews24
ಕಾಪು: ರಾಷ್ಟ್ರೀಯ ಹೆದ್ದಾರಿ66 ಮೂಳೂರು ಕೊಪ್ಪಲಂಗಡಿಯ ಹೆದ್ದಾರಿ ವಿಭಾಜಕದ ಬಳಿಯ ಚರಂಡಿಯೊಂದಕ್ಕೆ ಪಿಕಪ್ ವಾಹನವೊಂದು ನಿಯಂತ್ರಣ ತಪ್ಪಿ ಬಿದ್ದಿರುವ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.
ಉಡುಪಿಯಿಂದ ಮಂಗಳೂರು ಕಡೆಗೆ ಕಾಂಕ್ರೀಟ್ ಕೆಲಸಕ್ಕೆ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಈ ವಾಹನ ನಿಯಂತ್ರಣ ತಪ್ಪಿ ಈ ಘಟನೆ ನಡದಿದೆ.
ಚಾಲಕ ಹಾಗೂ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗೊಂಡಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾಪು ಪೋಲಿಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.