Featured

ಕೊಪ್ಪಳದಲ್ಲೂ `ಚೈತ್ರಾ’ ಮಾದರಿ ವಂಚನೆ ಪ್ರಕರಣ ; ಅಮಿತ್ ಶಾ ಹೆಸರು ಹೇಳಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಲಕ್ಷ ಲಕ್ಷ ವಂಚನೆ – Vishwanews24

ಕೊಪ್ಪಳದಲ್ಲೂ `ಚೈತ್ರಾ’ ಮಾದರಿ ವಂಚನೆ ಪ್ರಕರಣ ; ಅಮಿತ್ ಶಾ ಹೆಸರು ಹೇಳಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಲಕ್ಷ ಲಕ್ಷ ವಂಚನೆ

ಕೊಪ್ಪಳ: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಕೋಟಿ ಕೋಟಿ ವಂಚಿಸಿರುವ ಚೈತ್ರಾ ಪ್ರಕರಣವನ್ನೇ ಹೋಲುವ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.

ಕೊಪ್ಪಳದ  ಕನಕಗಿರಿ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಜಿ.ತಿಮ್ಮಾರೆಡ್ಡಿ  ಹಣ ಕಳೆದುಕೊಂಡ ಟಿಕೆಟ್ ಆಕಾಂಕ್ಷಿ. ಅವರ ಪತ್ನಿ ಗಾಯತ್ರಿ ತಿಮ್ಮಾರೆಡ್ಡಿ ಅವರಿಗೆ ಬಿಜೆಪಿ ಟಿಕೆಟ್ ಕೊಡಿಸುವ ಪ್ರಯತ್ನ ನಡೆಸಿದ್ದ ಅವರು ದೆಹಲಿ ಮೂಲದ ವಿಶಾಲ್ ನಾಗ್ ಮತ್ತು ಬೆಂಗಳೂರಿನ ಜೀತು ಹಾಗೂ ಗೌರವ್ ಎಂಬುವವರಿಗೆ 21 ಲಕ್ಷ ರೂ. ನೀಡಿ ಕೈ ಸುಟ್ಟುಕೊಂಡಿದ್ದಾರೆ.

ಆರೋಪಿಗಳು ತಮಗೆ ಕೇಂದ್ರ ಗೃಹಸಚಿವ ಅಮಿತ್ ಶಾ ಗೊತ್ತು, ಆರ್‍ಎಸ್‍ಎಸ್ ನಾಯಕರು ಗೊತ್ತು ಎಂದು ತಿಮ್ಮಾರೆಡ್ಡಿಯವರನ್ನು ಪರಿಚಯಿಸಿಕೊಂಡಿದ್ದರು. ಬಳಿಕ ರಾಜ್ಯದಲ್ಲಿ ಸಮೀಕ್ಷೆ ನಡೆಸಿದ್ದೇವೆ. ಅದರಲ್ಲಿ ನಿಮ್ಮ ಹೆಸರು ಮುಂಚೂಣಿಯಲ್ಲಿದೆ ಎಂದು ಅವರನ್ನು ನಂಬಿಸಿದ್ದರು. ಬಳಿಕ ಆರೋಪಿಗಳ ಮಾತು ನಂಬಿ ತಿಮ್ಮಾರೆಡ್ಡಿ ಹಣ ನೀಡಿದ್ದರು.

ಈ ಸಂಬಂಧ ಬೆಂಗಳೂರಿನ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

5 hours ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

5 hours ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

5 hours ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

6 hours ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

7 hours ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

7 hours ago