ಕೊಪ್ಪಳ: ತಾಲೂಕಿನ ಬಹದ್ದೂರ್ ಬಂಡಿ ಗ್ರಾಮದ ಸರ್ಕಾರಿ ಶಾಲೆ ಮುಖ್ಯೋಪಾಧ್ಯಾಯ ಬೀರಪ್ಪ ಅಂಡಗಿ ಅವರು ಸ್ವಂತ ಖರ್ಚಿನಲ್ಲಿ 24 ವಿದ್ಯಾರ್ಥಿಗಳಿಗೆ ವಿಮಾನಯಾನ ಮಾಡಿಸಿ ಗಮನ ಸೆಳೆದಿದ್ದಾರೆ.
ತಾಲೂಕಿನ ಬಹದ್ದೂರ್ ಬಂಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬೀರಪ್ಪ ಅಂಡಗಿ ಅವರು 5, 6, 7, 8ನೇ ತರಗತಿಯ 220 ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿದ್ದರು. ಈ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಪ್ರತಿ ತರಗತಿಯ 6 ವಿದ್ಯಾರ್ಥಿಗಳನ್ನು ಜಿಂದಾಲ್‌ನಿಂದ ಬೆಂಗಳೂರಿಗೆ ವಿಮಾನ ಪ್ರವಾಸ ಮಾಡಿಸುವ ಯೋಜನೆಯನ್ನು ಹಾಕಿಕೊಂಡಿದ್ದರು.
ಅದರಂತೆ 24 ವಿದ್ಯಾರ್ಥಿಗಳ ಜತೆಗೆ ಶಾಲೆ ಸಹ ಶಿಕ್ಷಕರು ಹಾಗೂ ಬಿಸಿಯೂಟ ಸಿಬ್ಬಂದಿ, ಎಸ್‌ಡಿಎಂಸಿ ಪದಾಧಿಕಾರಿಗಳು ಸೇರಿ ಒಟ್ಟು 40 ಮಂದಿ ಶುಕ್ರವಾರ ಕೊಪ್ಪಳದಿಂದ ಬಳ್ಳಾರಿ ಜಿಂದಾಲ್ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ವಿಮಾನದಲ್ಲಿ ತೆರಳಿದರು. ವಿದ್ಯಾರ್ಥಿಗಳ 2 ದಿನದ ಪ್ರಯಾಣದ ವೆಚ್ಚ 5ಲಕ್ಷ ರೂ. ಅನ್ನು ಬೀರಪ್ಪ ಅಂಡಗಿ ಅವರೇ ಭರಿಸಿದ್ದಾರೆ. ವಿಧಾನಸೌಧ, ತಾರಾಲಯ ಮುಖ್ಯಮಂತ್ರಿಗಳ ಕೊಠಡಿ ಸೇರಿ ವಿಮಾನದಲ್ಲಿ ಪ್ರಯಾಣಿಸುವಂತಹ ಸೌಭಾಗ್ಯ ಕಲ್ಪಿಸಿರುವುದಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
ನಮ್ಮ ಶಾಲೆಯ ವಿದ್ಯಾರ್ಥಿಗಳನ್ನು ವಿಮಾನದಲ್ಲಿ ಪ್ರಯಾಣ ಮಾಡಿಸಬೇಕು ಎನ್ನುವುದು ನಮ್ಮ ಕನಸಾಗಿತ್ತು. ಮಕ್ಕಳಿಗೆ ವಿಧಾನ ಸೌಧದ ಒಳಾಂಗಣ, ಸಿಎಂ ಕೊಠಡಿ ಸೇರಿ ವಿವಿಧ ಸ್ಥಳ ತೋರಿಸಿದ್ದೇವೆ. ಎಲ್ಲ ವೆಚ್ಚ ನಾವೇ ಭರಿಸಿದ್ದು, ಅವರ ಕನಸು ನನಸು ಮಾಡಿದ್ದೇವೆ.
– ಬೀರಪ್ಪ ಅಂಡಗಿ, ಬಹದ್ದೂರ್ ಬಂಡಿ ಶಾಲೆ ಮುಖ್ಯ ಶಿಕ್ಷಕ
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…