ಚಿಕ್ಕಮಗಳೂರು: ಇಸ್ಲಾಂ ಧರ್ಮದಲ್ಲಿ ಯುವತಿಯರು ಬುರ್ಖಾ ಧರಿಸಿ ಮೈಮುಚ್ಚಬೇಕೆಂಬುವುದು ಮೂಲಭೂತ ನಿಯಮವಾಗಿದೆ. ಈ ಹಿಂದೆ ಕಾಲೇಜಿಗೆ ಬುರ್ಖಾ ಧರಿಸಿಕೊಂಡು ಬರಬಾರದು, ಒಂದು ವೇಳೆ ಮುಸ್ಲಿಮ್ ವಿದ್ಯಾರ್ಥಿನಿಯರು ಬುರ್ಖಾ ಧರಿಸಿಕೊಂಡು ಬಂದರೆ ನಾವು ಕೇಸರಿ ಶಾಲು ಧರಿಸಿಕೊಂಡು ಬರುತ್ತೇವೆಂದು ಸಾಗರ, ತೀರ್ಥಹಳ್ಳಿ, ಸಹ್ಯಾದ್ರಿ ಕಾಲೇಜುಗಳಲ್ಲಿ ಹಿಂದೂ ವಿದ್ಯಾರ್ಥಿಗಳು ತೀರ್ಮಾನ ಮಾಡಿದ್ದರು. ಕೆಲವು ದಿನಗಳ ಕಾಲ ಶಾಲು ಧರಿಸಿಕೊಂಡು ಬಂದ ವಿದ್ಯಾರ್ಥಿಗಳು ಬಳಿಕ ಹಿಂದೆ ಸರಿದಿದ್ದರು,
ಇದೀಗ ಚಿಕ್ಕಮಗಳೂರಿನ ಕೊಪ್ಪ ಸರಕಾರಿ ಕಾಲೇಜಿನಲ್ಲೂ ಈ ಕುರಿತಾದಂತೆ ವಿವಾದಗಳು ಭುಗಿಲೆದ್ದಿದ್ದು, ಮುಸ್ಲಿಮ್ ವಿದ್ಯಾರ್ಥಿನಿಯರಿಗೆ ಬುರ್ಖಾ ಧರಿಸಲು ಅವಕಾಶ ಮಾಡಿಕೊಟ್ಟರೆ ನಾವು ಕೇಸರಿ ಶಾಲು ಧರಿಸಿಕೊಂಡು ಬರುತ್ತೇವೆಂದು ವಿದ್ಯಾರ್ಥಿ ವಿದ್ಯಾರ್ಥಿನಿಯರು ಕೇಸರಿ ಶಾಲು ಧರಿಸಿಕೊಂಡು ಕಾಲೇಜಿಗೆ ಆಗಮಿಸಿದ್ದಾರೆ. ಬುರ್ಖಾ ನಿಷೇಧಿಸಬೇಕೆಂದು ಪ್ರಾಂಶುಪಾಲರಿಗೆ ಮನವಿ ಮಾಡಿದಾಗ, ಅಂಥ ಯಾವುದೇ ನಿಯಮ ನಮ್ಮ ವಿದ್ಯಾಸಂಸ್ಥೆಯಲ್ಲಿಲ್ಲ ಎಂದು ಮನವಿಯನ್ನು ತಳ್ಳಿ ಹಾಕಿದ್ದರು.
ಪ್ರಾಂಶುಪಾಲರ ಹೇಳಿಕೆಯಿಂದ ಕೆರಳಿದ ಎಬಿವಿಪಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಬರೋದಾಗಿ ಪ್ರಿನ್ಸ್ ಪಾಲ್‍ಗೆ ಸೆಡ್ಡು ಹೊಡಿದಿದ್ದಾರೆ. ಹೇಳಿದಂತೆ ಜುಲೈ 2ನೇ ಸೋಮವಾರ ಎಬಿವಿಪಿ ವಿದ್ಯಾರ್ಥಿಗಳೆಲ್ಲರೂ ಕಾಲೇಜಿಗೆ ಕೇಸರಿ ಶಲ್ಯ ಧರಿಸೇ ಬಂದಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…