ಚೆನ್ನೈ: ಕೊಯಮತ್ತೂರಿನಲ್ಲಿ ಕಾರಿನಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡ ( ಪ್ರಕರಣ ಕುರಿತಂತೆ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ ಇಂದು ಚೆನ್ನೈನ 45ಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿ ನಡೆಸಿದೆ.
ಸ್ಫೋಟಕ್ಕೆ ಸಂಬಂಧಿಸಿದ ಶಂಕಿತರು ಮತ್ತು ಬೆಂಬಲಿಗರ ಆಸ್ತಿಗಳನ್ನು ಎನ್‍ಐಎ ಪರಿಶೀಲನೆ ನಡೆಸುತ್ತಿದ್ದು, ಚೆನ್ನೈನ ಪುದುಪೇಟ್, ಮನ್ನಾಡಿ, ಜಮಾಲಿಯಾ ಮತ್ತು ಪೆರಂಬೂರ್‌ನಲ್ಲಿ ದಾಳಿ ನಡೆಸಿದೆ. ಇಷ್ಟೇ ಅಲ್ಲದೇ, ಕೊಯಮತ್ತೂರಿನ ಕೊಟ್ಟೈಮೇಡು, ಉಕ್ಕಡಂ, ಪೊನ್ವಿಜ ನಗರ ಮತ್ತು ರಥಿನಪುರಿ ಸೇರಿದಂತೆ ಹಲವು ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ.
ಬುದ್ಧಿವಂತಿಕೆಯಿಂದ ವ್ಯವಹರಿಸಿ.. ನೋಡಿ ಇಂದಿನ ದಿನ ಭವಿಷ್ಯ – Vishwanews24
ಅಕ್ಬೋಬರ್ 23ರ ಭಾನುವಾರ ದೀಪಾವಳಿ ಸಮಯದಲ್ಲಿ ಮುಂಜಾನೆ 4.20ರ ಸುಮಾರಿಗೆ ತಮಿಳುನಾಡಿನ ಕೊಯಮತ್ತೂರಿನ ಈಶ್ವರನ್ ದೇವಸ್ಥಾನದ ಮುಂಭಾಗದ ರಸ್ತೆಯಲ್ಲಿ ಎಲ್‍ಪಿಜಿ ಸಿಲಿಂಡರ್ ಅಳವಡಿಸಿದ್ದ ಮಾರುತಿ 800 ಕಾರೊಂದು ಸ್ಫೋಟಗೊಂಡಿತ್ತು. ಈ ವೇಳೆ 25 ವರ್ಷದ ಜಮೀಶಾ ಮುಬಿನ್ ಎಂಬ ವ್ಯಕ್ತಿ ಮೃತಪಟ್ಟಿದ್ದನು. ಈ ಕುರಿತಂತೆ ತನಿಖೆ ನಡೆಸಿದ ಪೊಲೀಸರು ಜಮೀಶಾ ಮುಬಿನ್ ಮನೆಯಲ್ಲಿ ದೇಶಿ ನಿರ್ಮಿತ ಮದ್ದುಗುಂಡುಗಳು ಮತ್ತು ಕೆಲವು ಐಸಿಸ್ ಬೆಂಬಲಿತ ಬರಹಗಳನ್ನು ವಶಪಡಿಸಿಕೊಂಡಿದ್ದರು.
ಅಕ್ಟೋಬರ್ 27 ರಂದು ರಾಷ್ಟ್ರೀಯ ತನಿಖಾ ಸಂಸ್ಥೆಯು ಕೊಯಮತ್ತೂರಿನಲ್ಲಿ ಸಂಭವಿಸಿದ ಕಾರು ಸ್ಫೋಟ ಪ್ರಕರಣ ಸಂಬಂಧ ಎಫ್‍ಐಆರ್ ದಾಖಲಿಸಿ ತನಿಖೆ ನಡೆಸುವ ಜವಾಬ್ದಾರಿ ಹೊತ್ತುಕೊಂಡಿದೆ. ಎನ್‍ಐಎ ಭಾರತದ ಪ್ರಾಥಮಿಕ ಭಯೋತ್ಪಾದನಾ ನಿಗ್ರಹ ಕಾರ್ಯಪಡೆಯಾಗಿದೆ.
ಬುದ್ಧಿವಂತಿಕೆಯಿಂದ ವ್ಯವಹರಿಸಿ.. ನೋಡಿ ಇಂದಿನ ದಿನ ಭವಿಷ್ಯ – Vishwanews24
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…