ಬೆಂಗಳೂರು: ಕೊರಗರು, ಗಿರಿ ಜನರು, ದಲಿತ ಬಂಧುಗಳು ಭಯ ಪಡುವ ಅವಶ್ಯಕತೆಯಿಲ್ಲ. ನಾನು, ಗೃಹ ಸಚಿವರು, ಸರ್ಕಾರ ನಿಮ್ಮ ಜೊತೆಯಿದೆ. ಏನಾದರೂ ಇದ್ದರೆ ಸಿಎಂಗೂ ಮಾಹಿತಿ ನೀಡಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಡುಪಿ ಜಿಲ್ಲೆಯ ಕೋಟಾದಲ್ಲಿ ಗಿರಿಜನರ ಮೇಲೆ ಪೋಲಿಸರಿಂದ ವಿನಾಕಾರಣ ಹಲ್ಲೆ ಮಾಡಲಾಗಿತ್ತು. ಒಬ್ಬ ಪಿಎಸ್‌ಐ, ಸಸ್ಪೆಂಡ್ ಆರು ಜನರ ವರ್ಗಾವಣೆ ಕೂಡ ಮಾಡಲಾಗಿದೆ. ನಾನು ಸ್ಥಳಕ್ಕೆ ಭೇಟಿ ನೀಡಿದ್ದೆ. ಎಸ್‌ಪಿ ಮತ್ತು ಜಿಲ್ಲಾಧಿಕಾರಿಗಳ ಜತೆ ಚರ್ಚೆ ನಡೆಸಿದ್ದೆ. ಈ ಮಧ್ಯೆ ಪ್ರಕರಣ ಹೊಸ ತಿರುವು ಪಡೆದುಕೊಂಡಿತ್ತು. ಒಬ್ಬ ಕಾನ್ಸ್‌ಟೇಬಲ್ ನನ್ನ ಮೇಲೆ ಹಲ್ಲೆಯಾಗಿದೆ ಎಂದು ಆಸ್ಪತ್ರೆಗೆ ದಾಖಲಾಗಿದ್ದರು. ಆದಿವಾಸಿ ಕೇರಿಯಲ್ಲಿ ಆತಂಕ ಸೃಷ್ಟಿಯಾಗಿತ್ತು. ಪ್ರಕರಣದ ಸಂಬಂಧ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ಅಲ್ಲಿರುವ ಪರಿಸ್ತಿತಿಯನ್ನು ಗೃಹಸಚಿವರಿಗೆ ವಿವರಿಸಿದ್ದೆ ಎಂದರು.
ಯಾವುದೇ ಕಾರಣಕ್ಕೂ ಅಲ್ಲಿರುವವರಿಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತೇವೆ. ಎಸ್‌ಪಿ ಅವರಿಗೆ ಕರೆ ಮಾಡಿ ಪ್ರಕರಣದ ವಿಚಾರ ಕಾನೂನು ಪ್ರಕಾರ ದೂರು ದಾಖಲಿಸಲು ಸೂಚಿಸಿದ್ದಾರೆ. ದಲಿತರಿಗೆ ಯಾವುದೇ ತೊಂದರೆಯಾಗದಂತೆ ಗೃಹಸಚಿವರು ಸೂಚಿಸಿದ್ದಾರೆ ಎಂದರು.
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…
ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ ಸಂಭ್ರಮದ ನಡುವೆಯೇ…
ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ : ಅಕ್ಷಿತ್ ಸುವರ್ಣ ಮಂಗಳೂರು:…
ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…