Featured

ಕೊರೊನಾ ಎರಡನೇ ಅಲೆ : ಕುಕ್ಕೆಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ -Vishwanews24

ಕೊರೊನಾ ಎರಡನೇ ಅಲೆ : ಕುಕ್ಕೆಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ -Vishwanews24

ಮಂಗಳೂರು : ಕೊರೊನಾದ ಎರಡನೇ ಅಲೆ ತೀವ್ರವಾಗಿ ಹೆಚ್ಚುತ್ತಿರುವ ಹಿನ್ನಲೆ ಸರಕಾರದ ನೂತನ ಆದೇಶದ ಪ್ರಕಾರ, ಏಪ್ರಿಲ್ 21ರ ರಾತ್ರಿಯಿಂದ ಮುಂದಿನ ಆದೇಶದವರೆಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.

ಶ್ರೀ ದೇವರ ದರ್ಶನ, ಸೇವೆ, ತೀರ್ಥ ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ಮತ್ತು ವಿಶೇಷ ಉತ್ಸವಾದಿಗಳು ಇರುವುದಿಲ್ಲ. ಹಾಗೂ ದೇವಾಲಯಗಳಲ್ಲಿನ ವಸತಿಗೃಹ, ಅತಿಥಿ ಗೃಹಗಳನ್ನು ಭಕ್ತಾದಿಗಳಿಗೆ, ಸಾರ್ವಜನಿಕರಿಗೆ ಹಂಚಿಕೆ ಮಾಡುವುದನ್ನು ರಾತ್ರಿ ಬುಧವಾರ ರಾತ್ರಿ 9 ಗಂಟೆಯಿಂದ ಮುಂದಿನ ಆದೇಶದವರೆಗೆ ರದ್ದುಪಡಿಸಲಾಗಿದೆ ಎಂದು ದೇಗುಲದ ವ್ಯವಸ್ಥಾಪನಾ ಸಮಿತಿ ಮತ್ತು ಕಾರ್ಯನಿರ್ವಹಣಾ ಅಧಿಕಾರಿಗಳು ತಿಳಿಸಿದ್ದಾರೆ.

ಮಂಗಳೂರು: ಯುವ ನ್ಯಾಯವಾದಿ ವಿನೋದ್ ಪಾಲ್ ನಿಧನ -Vishwanews24

ಶ್ರೀ ದೇವಳದಲ್ಲಿ ಈಗಾಗಲೇ ಭಕ್ತಾದಿಗಳು ಸರ್ಪ ಸಂಸ್ಕಾರ ಸೇವೆ ಹಾಗೂ ಮುಂಗಡವಾಗಿ ಕಾದಿರಿಸಲ್ಪಟ್ಟ ಇನ್ನಿತರ ಯಾವುದೇ ಸೇವೆಗಳನ್ನು ಕೂಡಾ ನಡೆಸುವುದನ್ನು ಮುಂದಿನ ಆದೇಶದವರೆಗೆ ತಡೆಹಿಡಿಯಲಾಗಿದ್ದು, ಮುಂದಕ್ಕೆ ಅಧಿಕೃತವಾಗಿ ಭಕ್ತಾದಿಗಳಿಗೆ ಕಾದಿರಿಸಿದ ಸೇವೆಗಳನ್ನು ನಡೆಸುವ ವಿಚಾರವಾಗಿ ಪ್ರಥಮ ಆದ್ಯತೆ ನೀಡಿ ತಿಳಿಸಲಾಗುವುದು.

ಸರಕಾರದ ಆದೇಶದಂತೆ ಶ್ರೀ ದೇವಳದಲ್ಲಿ ಶ್ರೀ ದೇವರಿಗೆ ನಡೆಯತಕ್ಕ ದೈನಂದಿನ ಪೂಜಾದಿ ವಿನಿಯೋಗಗಳು ಹಾಗೂ ಪಂಚಪರ್ವಾದಿ ವಿಶೇಷ ಕಟ್ಲೆಯ ಉತ್ಸವಗಳು ಸಹಿತ ಸಂಬಂಧಪಟ್ಟ ಅರ್ಚಕಾದಿ ಸಿಬ್ಬಂದಿಗಳ ಮೂಲಕ ದೇವಳದ ಒಳಾಂಗಣ ಮತ್ತು ಹೊರಾಂಗಣಕ್ಕೆ ಮಾತ್ರ ಸೀಮಿತಗೊಳಿಸಿ ನೆರವೇರಿಸಲ್ಪಡುತ್ತದೆ. ಯಾವುದೇ ಸಾರ್ವಜನಿಕ ಭಕ್ತಾದಿಗಳಿಗೆ ಪಾಲ್ಗೊಳ್ಳಲು ಅವಕಾಶವಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಕಾಪು: ಒಳ ಹಾಗೂ ಹೊರ ರೋಗಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕಾರ್ಯನಿರ್ವಹಿಸಿ: ಶಾಸಕ ಲಾಲಾಜಿ -Vishwanews24

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago